ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌: ಅಗ್ರ ಸ್ಥಾನದಲ್ಲಿ ಕಿಂಗ್ ಕೊಹ್ಲಿ, 7ನೇ ಸ್ಥಾನಕ್ಕೆ ಕುಸಿದ ರಹಾನೆ

ಶ್ರೇಷ್ಠ ಪ್ರದರ್ಶನದೊಂದಿಗೆ ಟೀಂ ಇಂಡಿಯಾ 2019ನೇ ಕ್ರಿಕೆಟ್ ವರ್ಷವನ್ನು ಪೂರ್ಣಗೊಳಿಸಿದ ಬೆನ್ನಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಐಸಿಸಿ ವರ್ಷದ ಕಟ್ಟಕಡೆಯ ಟೆಸ್ಟ್ ರ‍್ಯಾಂಕಿಂಗ್‌ ಬಿಡುಗಡೆ ಮಾಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ದುಬೈ: ಶ್ರೇಷ್ಠ ಪ್ರದರ್ಶನದೊಂದಿಗೆ ಟೀಂ ಇಂಡಿಯಾ 2019ನೇ ಕ್ರಿಕೆಟ್ ವರ್ಷವನ್ನು ಪೂರ್ಣಗೊಳಿಸಿದ ಬೆನ್ನಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಐಸಿಸಿ ವರ್ಷದ ಕಟ್ಟಕಡೆಯ ಟೆಸ್ಟ್ ರ‍್ಯಾಂಕಿಂಗ್‌ ಬಿಡುಗಡೆ ಮಾಡಿದೆ.

ಈ ವರ್ಷದ ಕೊನೆಯ ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌ ನಲ್ಲೂ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ರ‍್ಯಾಂಕಿಂಗ್‌ ನಲ್ಲಿ ಅಗ್ರ ಸ್ಥಾನ ಕಾಯ್ದುಕೊಂಡಿದ್ದಾರೆ. ಈ ಹಿಂದಿನ ರ‍್ಯಾಂಕಿಂಗ್‌ ಪಟ್ಟಿಯಲ್ಲೂ ಅಗ್ರ ಸ್ಥಾನದಲ್ಲಿದ್ದ ಕೊಹ್ಲಿ ಈ ಬಾರಿ ತಮ್ಮ ಅಗ್ರ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದ್ದಾರೆ. ಐಸಿಸಿ ಟೆಸ್ಟ್ ಬ್ಯಾಟಿಂಗ್ ರ‍್ಯಾಂಕಿಂಗ್‌ ನಲ್ಲಿ ಕೊಹ್ಲಿ ಒಟ್ಟು 928 ರೇಟಿಂಗ್ ಗಳೊಂದಿಗೆ ಅಗ್ರ ಸ್ಥಾನದಲ್ಲಿ ಮುಂದುವರೆದಿದ್ದು, 911 ರೇಟಿಂಗ್ಸ್ ಹೊಂದಿರುವ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ 2ನೇ ಸ್ಥಾನದಲ್ಲಿದ್ದಾರೆ. 864 ಅಂಕಗಳನ್ನು ಹೊಂದಿರುವ ನ್ಯೂಜಿಲೆಂಡ್ ತಂಡದ ಕೇನ್ ವಿಲಿಯಮ್ಸನ್ 3ನೇ ಸ್ಥಾನದಲ್ಲಿದ್ದಾರೆ.

ಇನ್ನು ಈ ಪಟ್ಟಿಯಲ್ಲಿ 791 ರೇಟಿಂಗ್ಸ್ ಹೊಂದಿರುವ ಭಾರತದ ಚೇತೇಶ್ವರ ಪೂಜಾರ 4ನೇ ಸ್ಥಾನದಲ್ಲಿದ್ದರೆ, 759 ರೇಟಿಂಗ್ಸ್ ಗಳೊಂದಿಗೆ ಅಂಜಿಕ್ಯಾ ರಹಾನೆ 7ನೇ ಸ್ಥಾನಕ್ಕೆ ಕುಸಿದಿದ್ದಾರೆ. ಲಂಕಾ ವಿರುದ್ಧದ ಟೆಸ್ಚ್ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿರುವ ಬಾಬರ್ ಅಜಂ 6ನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com