ಟೀಂ ಇಂಡಿಯಾ ವಿರುದ್ಧ ಏಕದಿನ ಸರಣಿಗೆ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ, ಯಾವೆಲ್ಲಾ ಆಟಗಾರರು ಇದ್ದಾರೆ?

ಭಾರತ ಪ್ರವಾಸ ಬೆಳೆಸಲಿರುವ ಆಸ್ಟ್ರೇಲಿಯಾ ತಂಡದಲ್ಲಿ ಸ್ಥಾನ ಪಡೆದಿದ್ದ ಸೀನ್ ಅಬಾಟ್ ಗಾಯಕ್ಕೆ ತುತ್ತಾಗಿದ್ದರಿಂದ ಇವರ ಬದಲಿಗೆ ಡಿ’ಆರ್ಸಿ ಶಾರ್ಟ್ ಅವರಿಗೆ ಸ್ಥಾನ ನೀಡಲಾಗಿದೆ.
ಆಸ್ಟ್ರೇಲಿಯಾ ತಂಡ
ಆಸ್ಟ್ರೇಲಿಯಾ ತಂಡ

ಸಿಡ್ನಿ: ಭಾರತ ಪ್ರವಾಸ ಬೆಳೆಸಲಿರುವ ಆಸ್ಟ್ರೇಲಿಯಾ ತಂಡದಲ್ಲಿ ಸ್ಥಾನ ಪಡೆದಿದ್ದ ಸೀನ್ ಅಬಾಟ್ ಗಾಯಕ್ಕೆ ತುತ್ತಾಗಿದ್ದರಿಂದ ಇವರ ಬದಲಿಗೆ ಡಿ’ಆರ್ಸಿ ಶಾರ್ಟ್ ಅವರಿಗೆ ಸ್ಥಾನ ನೀಡಲಾಗಿದೆ.

ಸೀಮಿತ ಓವರ್ ಗಳ ತಂಡದಲ್ಲಿ ಭರ್ಜರಿ ಪ್ರದರ್ಶನವನ್ನು ನೀಡಿರುವ ಸೀನ್ ಅವರು ಗಾಯದಿಂದ ಬಳಲುತ್ತಿರುವುದು ಬೇಸರ ಸಂಗತಿಯಾಗಿದೆ. ಇವರ ಬದಲಿಗೆ ಸ್ಪಿನ್ ಬೌಲರ್ ಆಲ್ ರೌಂಡರ್ ರೂಪದಲ್ಲಿ ಡಿ’ಆರ್ಸಿ ಶಾರ್ಟ್ ಅವರಿಗೆ ಸ್ಥಾನ ನೀಡಲಾಗಿದೆ. ಇವರು ಆಡಂ ಜಂಪಾ, ಅಸ್ಟನ್ ಅಗರ್ ಅವರೊಂದಿಗೆ ಸ್ಪಿನ್ ವಿಭಾಗದ ಹೊಣೆ ಹೊತ್ತುಕೊಳ್ಳಲಿದ್ದಾರೆ. ಶಾರ್ಟ್ ಬ್ಯಾಟಿಂಗ್ ನಲ್ಲೂ ತಂಡಕ್ಕೆ ನೆರವಾಗಬಲ್ಲ ಆಟಗಾರ” ಎಂದು ಆಯ್ಕೆ ಸಮಿತಿಯ ಮುಖ್ಯಸ್ಥ ಟ್ರೆವರ್ ಹೊನ್ಸ್ ತಿಳಿಸಿದ್ದಾರೆ.

ಆಸ್ಟ್ರೇಲಿಯಾ ತಂಡ 14 ಆಟಗಾರರ ತಂಡವನ್ನು ಪ್ರಕಟಿಸಿದೆ. ಇನ್ನು ಏಕದಿನ ಸರಣಿಯ ಮೊದಲ ಪಂದ್ಯ ಜನವರಿ 14ರಿಂದ ಮುಂಬೈನಲ್ಲಿ ನಡೆಯಲಿದೆ. ನಂತರ ಜನವರಿ 14 ಮತ್ತು ಜನವರಿ 19ರಂದು ರಾಜಕೋಟ್ ಮತ್ತು ಬೆಂಗಳೂರಿನಲ್ಲಿ ನಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com