ವೀರೇಂದ್ರ ಸೆಹ್ವಾಗ್ ರಾಜಕೀಯ ಪ್ರವೇಶಕ್ಕೆ ವೇದಿಕೆ ಸಜ್ಜು? ಯಾವ ಪಕ್ಷದಿಂದ, ಯಾವ ಕ್ಷೇತ್ರ!

ಟೀಂ ಇಂಡಿಯಾದ ಮಾಜಿ ಆಟಗಾರ ಸ್ಫೋಟಕ ಬ್ಯಾಟ್ಸ್ ಮನ್ ವೀರೇಂದ್ರ ಸೆಹ್ವಾಗ್ ಅವರು ರಾಜಕೀಯ ರಂಗಪ್ರವೇಶ ಮಾಡುವ ಸಾಧ್ಯತೆ ಹೆಚ್ಚಿದ್ದು ಹರಿಯಾಣದ ರೋಹತಕ್ ಲೋಕಸಭಾ ಕ್ಷೇತ್ರದಿಂದ...
ವೀರೇಂದ್ರ ಸೆಹ್ವಾಗ್
ವೀರೇಂದ್ರ ಸೆಹ್ವಾಗ್
ಚಂಡೀಗಢ: ಟೀಂ ಇಂಡಿಯಾದ ಮಾಜಿ ಆಟಗಾರ ಸ್ಫೋಟಕ ಬ್ಯಾಟ್ಸ್ ಮನ್ ವೀರೇಂದ್ರ ಸೆಹ್ವಾಗ್ ಅವರು ರಾಜಕೀಯ ರಂಗಪ್ರವೇಶ ಮಾಡುವ ಸಾಧ್ಯತೆ ಹೆಚ್ಚಿದ್ದು ಹರಿಯಾಣದ ರೋಹತಕ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. 
ಹರಿಯಾಣ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಭಾಗವಹಿಸಿದ್ದ ನಾಯಕರೊಬ್ಬರು ಈ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಕಾಂಗ್ರೆಸ್ ನ ದೀಪಿಂದರ್ ಸಿಂಗ್ ಹೂಡಾರನ್ನು ಸೋಲಿಸುವ ಕುರಿತು ಸಭೆಯಲ್ಲಿ ಭರ್ಜರಿ ಚರ್ಚೆ ನಡೆದಿದೆ ಎನ್ನಲಾಗಿದೆ.
ಇನ್ನು ಸೆಹ್ವಾಗ್ ಸ್ಪರ್ಧೆ ಕುರಿತಂತೆ ಅಧಿಕೃತ ಮಾಹಿತಿ ನೀಡಲು ಹರಿಯಾಣ ಬಿಜೆಪಿ ರಾಜ್ಯಾಧ್ಯಕ್ಷ ಸುಭಾಶ್ ಬರಾಲಾ ನಿರಾಕರಿಸಿದ್ದಾರೆ. ಈ ಬಗ್ಗೆ ಹೇಳಲು ಸೆಹ್ವಾಗ್ ನಮ್ಮ ಪಕ್ಷವನ್ನೇನು ಸೇರ್ಪಡೆಯಾಗಿಲ್ಲ ಎಂದು ಹೇಳಿದ್ದಾರೆ.
ಬಿಜೆಪಿಗೆ ಸೆಹ್ವಾಗ್ ರನ್ನು ಪಕ್ಷಕ್ಕೆ ಕರೆತರಲು ನಾಯಕರೊಬ್ಬರಿಗೆ ಪಕ್ಷ ಜವಾಬ್ದಾರಿ ವಹಿಸಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಅಧಿಕೃತ ಹೇಳಿಕೆ ನೀಡಲು ನಾಯಕರು ನಿರಾಕರಿಸಿದ್ದಾರೆ. 2014ರ ಚುನಾವಣೆಯಲ್ಲಿ ಬಿಜೆಪಿ ಸ್ಪರ್ಧಿಸಿದ 10 ಸ್ಥಾನಗಳಲ್ಲಿ 7ರಲ್ಲಿ ಗೆಲುವು ಸಾಧಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com