ಪಾಕಿಸ್ತಾನ ಭಯೋತ್ಪಾದನೆ ನಿಲ್ಲಿಸುವವರೆಗೂ ಕ್ರೀಡಾ ಸಂಬಂಧವಿಲ್ಲ: ರಾಜೀವ್ ಶುಕ್ಲಾ

2013ರಿಂದ ಇಲ್ಲಿಯವರೆಗೂ ಪಾಕಿಸ್ತಾನ ಮತ್ತು ಭಾರತ ನಡುವೆ ಯಾವುದೇ ದ್ವಿಪಕ್ಷೀಯ ಕ್ರಿಕೆಟ್ ಸರಣಿಗಳು ನಡೆದಿಲ್ಲ. ಇನ್ನು ಪಾಕಿಸ್ತಾನ ಭಯೋತ್ಪಾದನೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: 2013ರಿಂದ ಇಲ್ಲಿಯವರೆಗೂ ಪಾಕಿಸ್ತಾನ ಮತ್ತು ಭಾರತ ನಡುವೆ ಯಾವುದೇ ದ್ವಿಪಕ್ಷೀಯ ಕ್ರಿಕೆಟ್ ಸರಣಿಗಳು ನಡೆದಿಲ್ಲ. ಇನ್ನು ಪಾಕಿಸ್ತಾನ ಭಯೋತ್ಪಾದನೆ ನಿಲ್ಲಿಸುವವರೆಗೂ ಪಾಕ್ ಜೊತೆ ಯಾವುದೇ ರೀತಿಯ ಕ್ರೀಡಾ ಸಂಬಂಧವಿಲ್ಲ ಎಂದು ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಮುಖ್ಯಸ್ಥ ರಾಜೀವ್ ಶುಕ್ಲಾ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಯೋತ್ಪಾದಕ ದಾಳಿಯಲ್ಲಿ 40 ಭಾರತೀಯ ಯೋಧರು ಹುತಾತ್ಮರಾಗಿದ್ದರು. ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಪಾಕಿಸ್ತಾನ ಭಯೋತ್ಪಾದನೆಯನ್ನು ನಿಲ್ಲಿಸುವವರೂ ಕ್ರೀಡಾ ಒಪ್ಪಂದಗಳನ್ನು ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ಕ್ರೀಡೆ ಮತ್ತು ರಾಜಕಾರಣವನ್ನು ಮಿಶ್ರಣ ಮಾಡಬಾರದು ಎಂದು ನಾನು ಬಯಸುತ್ತೇನೆ. ಆದರೆ ಪಾಕಿಸ್ತಾನವೂ ಭಾರತದೊಂದಿಗೆ ಕ್ರಿಕೆಟ್ ಸಂಬಂಧಗಳನ್ನು ಪುನರಾರಂಭಿಸುವ ಆಲೋಚನೆ ಮಾಡುವ ಮೊದಲು ಭಯೋತ್ಪಾದನೆಯನ್ನು ನಿಲ್ಲಿಸಬೇಕು ಎಂದು ಹೇಳಿದರು.
ಮಲ್ಟಿ ನ್ಯಾಷನಲ್ ಟೂರ್ನಿಯಂತಹ ಚಾಂಪಿಯನ್ ಟ್ರೋಫಿ ಮತ್ತು ಏಷ್ಯಾ ಕಪ್ ಬಿಟ್ಟರೆ 2013ರಿಂದ ಇಲ್ಲಿಯವರೆಗೂ ಭಾರತ ಹಾಗೂ ಪಾಕಿಸ್ತಾನ ನಡುವೆ ಯಾವುದೇ ದ್ವಿಪಕ್ಷೀಯ ಸರಣಿಗಳು ನಡೆದಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com