ಐಸಿಸಿ ಟೆಸ್ಟ್ ರ್ಯಾಂಕಿಂಗ್: ಕೊಹ್ಲಿ, ಕಾಗಿಸೋ ರಬಾಡಾ ಅಗ್ರ ಸ್ಥಾನ ಅಬಾಧಿತ

ವರ್ಷಾಂತ್ಯದಲ್ಲಿ ನಡೆದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮುಕ್ತಾಯದ ಬೆನ್ನಲ್ಲೇ ಐಸಿಸಿ ಟೆಸ್ಟ್ ರ್ಯಾಂಕಿಂಗ್ ಪ್ರಕಟವಾಗಿದ್ದು, ಬ್ಯಾಟಿಂಗ್ ನಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಬೌಲಿಂಗ್ ನಲ್ಲಿ ದಕ್ಷಿಣ ಆಫ್ರಿಕಾದ ವೇಗಿ ಕಾಗಿಸೋ ರಬಾಡಾ ಅಗ್ರ ಸ್ಥಾನದಲ್ಲಿ ಮುಂದುವರೆದಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಮೆಲ್ಬೋರ್ನ್: ವರ್ಷಾಂತ್ಯದಲ್ಲಿ ನಡೆದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮುಕ್ತಾಯದ ಬೆನ್ನಲ್ಲೇ ಐಸಿಸಿ ಟೆಸ್ಟ್ ರ್ಯಾಂಕಿಂಗ್ ಪ್ರಕಟವಾಗಿದ್ದು, ಬ್ಯಾಟಿಂಗ್ ನಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಬೌಲಿಂಗ್ ನಲ್ಲಿ ದಕ್ಷಿಣ ಆಫ್ರಿಕಾದ ವೇಗಿ ಕಾಗಿಸೋ ರಬಾಡಾ ಅಗ್ರ ಸ್ಥಾನದಲ್ಲಿ ಮುಂದುವರೆದಿದ್ದಾರೆ.
ಅಂತೆಯೇ ಅಗ್ರ ಸ್ಥಾನಿಗಳಾಗಿಯೇ 2018 ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. 2018ರಲ್ಲಿ ಹಲವು ದಾಖಲೆಗಳನ್ನು ನಿರ್ಮಿಸಿರುವ ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಮತ್ತು ದಕ್ಷಿಣ ಆಫ್ರಿಕಾದ ವೇಗದ ಬೌಲರ್‌ ಕಗಿಸೊ ರಬಾಡ ವರ್ಷದ ಕೊನೆಯ ದಿನ ಐಸಿಸಿ ಬಿಡುಗಡೆ ಮಾಡಿದ ಟೆಸ್ಟ್‌ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ.
ಮೆಲ್ಬೋರ್ನ್‌ನಲ್ಲಿ ಆಸ್ಪ್ರೇಲಿಯಾ ವಿರುದ್ಧ ನಡೆದ 3ನೇ ಟೆಸ್ಟ್‌ನ ಮೊದಲ ಇನಿಂಗ್ಸ್‌ನಲ್ಲಿ 82 ರನ್‌ ಗಳಿಸಿದ ಹೊರತಾಗಿಯೂ ಕೊಹ್ಲಿ ಮೂರು ಅಂಕ ಕುಸಿತ ಕಂಡಿದ್ದಾರೆ. ಆದಾಗ್ಯೂ ದ್ವಿತೀಯ ಸ್ಥಾನದಲ್ಲಿರುವ ನ್ಯೂಜಿಲೆಂಡ್‌ನ ಕೇನ್‌ ವಿಲಿಯಮ್ಸನ್‌ಗಿಂತ 34 ಅಂಕಗಳಷ್ಟು ಅಂತರ ಕಾಯ್ದುಕೊಂಡಿದ್ದಾರೆ.
2018ರಲ್ಲಿ ಎಲ್ಲ ಮಾದರಿಯಿಂದ 1322 ರನ್‌ ಗಳಿಸಿದ ಕೊಹ್ಲಿ, ವೃತ್ತಿ ಬದುಕಿನಲ್ಲಿ ಮೊದಲ ಬಾರಿ 937 ಅಂಕ ಕಲೆಹಾಕಿದರು. ಇದು ಭಾರತೀಯ ಬ್ಯಾಟ್ಸ್‌ಮನ್‌ವೊಬ್ಬ ಕಲೆಹಾಕಿದ ಅತ್ಯಧಿಕ ರನ್‌ ಆಗಿದೆ. ಕಳೆದ ಆಗಸ್ಟ್‌ನಲ್ಲಿ ಸ್ಟೀವನ್‌ ಸ್ಮಿತ್‌ ಅವರನ್ನು ಹಿಂದಿಕ್ಕಿದ ಬಲಗೈ ಬ್ಯಾಟ್ಸ್‌ಮನ್‌ ಕೊಹ್ಲಿ 135 ದಿನಗಳಿಂದ ಮೊದಲ ಸ್ಥಾನದಲ್ಲಿ ಮುಂದುವರಿದಿದ್ದಾರೆ.
880 ಅಂಕ ಹೊಂದಿರುವ ದಕ್ಷಿಣ ಆಫ್ರಿಕಾದ ರಬಾಡ ಬೌಲಿಂಗ್‌ ವಿಭಾಗದಲ್ಲಿ ಮೊದಲ ಸ್ಥಾನದಲ್ಲಿ ಮುಂದುವರಿದಿದ್ದಾರೆ. ರಬಾಡಗಿಂತ 6 ಅಂಕ ಹಿನ್ನಡೆಯಲ್ಲಿರುವ ಇಂಗ್ಲೆಂಡ್‌ನ ಜೇಮ್ಸ್‌ ಆ್ಯಂಡರ್ಸನ್‌ ದ್ವಿತೀಯ ಸ್ಥಾನದಲ್ಲಿದ್ದಾರೆ. ಬೌಲರ್‌ಗಳ ಪಟ್ಟಿಯಲ್ಲಿ ಜಸ್‌ಪ್ರೀತ್ ಬೂಮ್ರಾ 28ನೇ ಸ್ಥಾನದಿಂದ 12ನೇ ಸ್ಥಾನಕ್ಕೇರಿದ್ದಾರೆ. ಪಟ್ಟಿಯಲ್ಲಿರುವ ಭಾರತದ ಬೌಲರ್‌ಗಳ ಪೈಕಿ ಅವರಿಗೆ ಮೊದಲ ಸ್ಥಾನ. ಎರಡನೇ ಸ್ಥಾನದಲ್ಲಿ ಮೊಹಮ್ಮದ್ ಶಮಿ ಇದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com