ಸೋಲಿನ ಹತಾಶೆ: ಕೊಹ್ಲಿಯನ್ನು ಕಿಚಾಯಿಸಿ ಆಸ್ಟ್ರೇಲಿಯಾ ಅಭಿಮಾನಿಗಳಿಂದ ವಿಕೃತಿ, ವಿಡಿಯೋ ವೈರಲ್!

ಟೀಂ ಇಂಡಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾ ಕಳಪೆ ಪ್ರದರ್ಶನ ನೀಡುತ್ತಿದ್ದು ಇದರಿಂದ ಬೇಸರಗೊಂಡಿರುವ ಆಸೀಸ್ ಅಭಿಮಾನಿಗಳು ಕ್ರೀಡಾಸ್ಫೂರ್ತಿ ಮರೆತು ವಿರಾಟ್...
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ
ಟೀಂ ಇಂಡಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾ ಕಳಪೆ ಪ್ರದರ್ಶನ ನೀಡುತ್ತಿದ್ದು ಇದರಿಂದ ಬೇಸರಗೊಂಡಿರುವ ಆಸೀಸ್ ಅಭಿಮಾನಿಗಳು ಕ್ರೀಡಾಸ್ಫೂರ್ತಿ ಮರೆತು ವಿರಾಟ್ ಕೊಹ್ಲಿಯನ್ನು ಕಿಚಾಯಿಸುವ ಮೂಲಕ ತಮ್ಮ ವಿಕೃತಿ ಮೆರೆದಿದ್ದಾರೆ. 
ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಮಾಯಾಂಕ್ ಅಗರ್ವಾಲ್ ಔಟ್ ಆದ ಬಳಿಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಮಾಡಲು ಮೈದಾನಕ್ಕೆ ಕಾಲಿಟ್ಟಾಗ ಅಲ್ಲಿದ್ದ ಆಸ್ಟ್ರೇಲಿಯಾ ಅಭಿಮಾನಿಗಳು ವಿರಾಟ್ ಕೊಹ್ಲಿ ವಿರುದ್ಧ ಕೆಟ್ಟದಾಗಿ ಕೂಗುವ ಮೂಲಕ ತಮ್ಮ ವಿಕೃತಿಯನ್ನು ಮೆರೆದಿದ್ದರು. ಈ ವಿಡಿಯೋ ಇದೀಗ ವೈರಲ್ ಆಗಿದೆ.
ಇನ್ನು ವಿರಾಟ್ ಕೊಹ್ಲಿ ವಿರುದ್ಧ ಆಸ್ಟ್ರೇಲಿಯಾ ಅಭಿಮಾನಿಗಳು ಕಿಚಾಯಿಸಿರುವುದಕ್ಕೆ ಆಕ್ರೋಶಗೊಂಡಿರುವ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಅಭಿಮಾನಿಗಳ ವರ್ತನೆಯನ್ನು ಖಂಡಿಸಿದ್ದಾರೆ. 
ನಮ್ಮ ಎದುರಾಳಿ ತಂಡದ ಆಟಗಾರರನ್ನು ನಾವು ಗೌರವಿಸಬೇಕು. ಅವರನ್ನು ಕೆಟ್ಟದಾಗಿ ಬೈಯುವುದು ಸರಿಯಲ್ಲ ಎಂದು ಪಾಂಟಿಂಗ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com