ಹೆಣ್ಮಕ್ಕಳ ಬಗ್ಗೆ ಪಾಂಡ್ಯ ಪದ ಬಳಕೆ ಎಷ್ಟು ಕೀಳು ಮಟ್ಟದಲ್ಲಿತ್ತೆಂದರೆ ಮೊದಲ ಬಾರಿ ಅನುಭವದ ಬಳಿಕ ನೇರವಾಗಿ ಹೆತ್ತವರ ಬಳಿ ಬಂದು 'ಆಜ್ ಮೇ ಕರ್ ಕೇ ಆಯಾ' (ಇವತ್ತು ನಾನು ಮಾಡಿ ಬಂದೆ) ಎಂದು ಹೇಳಿಕೊಂಡಿದ್ದಾಗಿ ತಿಳಿಸಿದ್ದರು. ಕ್ಲಬ್ನಲ್ಲಿ ಮಹಿಳೆಯ ಹೆಸರು ಯಾಕೆ ಕೇಳಿಲ್ಲ ಎಂಬುದಕ್ಕೆ ಉತ್ತರವಾಗಿ, ಮಹಿಳೆಯ ನಡಿಗೆಯನ್ನು ನಾನು ವೀಕ್ಷಿಸಲು ಬಯಸುತ್ತೇನೆ ಎಂದು ಉತ್ತರಿಸಿದ್ದರು. ಹಾರ್ದಿಕ್ ಹೇಳಿಕೆಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆಗಳು ಎದ್ದು ಬರುತ್ತಿದೆ. ಸದ್ಯ ಹಾರ್ದಿಕ್ ಕ್ಷಮಾಪನೆಯಿಂದಲೂ ಬಿಸಿಸಿಐ ತೃಪ್ತಿ ಹೊಂದಿಲ್ಲ. ಅಲ್ಲದೆ ಶಿಸ್ತು ಕ್ರಮ ಜರಗಿಸುವ ಎಲ್ಲ ಸಾಧ್ಯತೆಗಳು ಕಂಡುಬರುತ್ತಿದೆ ಎಂಬುದನ್ನು ವಿಶ್ಲೇಷಕರು ಅಭಿಪ್ರಾಯಪಡುತ್ತಾರೆ.