ಹಾರ್ದಿಕ್ ಪಾಂಡ್ಯ, ರಾಹುಲ್ ವಿರುದ್ಧ ಶಿಸ್ತು ಕ್ರಮ, 82 ವರ್ಷಗಳಲ್ಲೇ 2ನೇ ಪ್ರಕರಣ

ಅಸಭ್ಯ ಹೇಳಿಕೆಯಿಂದ ವಿವಾದಕ್ಕೆ ಸಿಲುಕಿರುವ ಹಾರ್ದಿಕ್ ಪಾಂಡ್ಯ ಮತ್ತು ಕೆಎಲ್ ರಾಹುಲ್ ಅವರನ್ನು ಆಸ್ಟ್ರೇಲಿಯಾ...
ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್
ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್
ನವದೆಹಲಿ: ಅಸಭ್ಯ ಹೇಳಿಕೆಯಿಂದ ವಿವಾದಕ್ಕೆ ಸಿಲುಕಿರುವ ಹಾರ್ದಿಕ್ ಪಾಂಡ್ಯ ಮತ್ತು ಕೆಎಲ್ ರಾಹುಲ್ ಅವರನ್ನು ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಿಂದ ಅಮಾನತು ಮಾಡುವ ಮೂಲಕ ಬಿಸಿಸಿಐ ಆಟಗಾರರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಂಡಿದೆ. 
ಕಳೆದ 82 ವರ್ಷಗಳಲ್ಲಿ ವಿವಾದಕ್ಕೆ ಸಂಬಂಧಿಸಿದಂತೆ ಆಟಗಾರರ ವಿರುದ್ಧ ಈ ರೀತಿ ಕ್ರಮ ತೆಗೆದುಕೊಂಡ ಎರಡನೇ ಪ್ರಕರಣ ಇದಾಗಿದ್ದು, ಈ ಹಿಂದೆ 1936ರಲ್ಲಿ ಪ್ರಥಮ ದರ್ಜೆ ಕ್ರಿಕೆಟ್ ನಲ್ಲಿ ಹಿಂದಿನ ನಾಯಕ ವಿಜ್ಜಿ ಅವರನ್ನು ಅವಮಾನಿಸಿದ್ದಕ್ಕಾಗಿ ಕ್ರಿಕೆಟ್ ದಿಗ್ಗಜ ಲಾಲ ಅಮರನಾಥ್ ಅವರನ್ನು ಇಂಗ್ಲೆಂಡ್ ಪ್ರವಾಸದಿಂದ ವಾಪಸ್ ಕರೆಯಿಸಿಕೊಳ್ಳಲಾಗಿತ್ತು.
ಈಗ ಮಹಿಳೆಯರ ವಿರುದ್ಧ ಮಾತನಾಡಿದ್ದಕ್ಕೆ ಹಾರ್ದಿಕ್ ಪಾಂಡ್ಯ ಹಾಗೂ ಕೆಎಲ್ ರಾಹುಲ್ ಅವರಿಗೆ ಸರಣಿಯಿಂದ ಕೊಕ್ ನೀಡಲಾಗಿದೆ. 
ಇತ್ತೀಚೆಗಷ್ಟೇ ಕರಣ್ ಜೋಹರ್ ನಡೆಸಿಕೊಟ್ಟ ಕಾಫಿ ವಿತ್ ಕರಣ್ ಟಿವಿ ಕಾರ್ಯಕ್ರಮದಲ್ಲಿ ಪಾಂಡ್ಯ ಹಾಗೂ ರಾಹುಲ್ ಮಹಿಳೆಯರ ಬಗ್ಗೆ ಸ್ತ್ರೀದ್ವೇಷಿ, ಕಾಮಪ್ರಚೋದಕ ಹೇಳಿಕೆಗಳನ್ನು ನೀಡಿದ್ದರು. ಇದು ವ್ಯಾಪಕ ಟೀಕೆಗೆಗಳಿಗೆ ಗುರಿಯಾಗಿತ್ತು. 
ಬಳಿಕ ಪಶ್ಚಾತಾಪ ವ್ಯಕ್ತಪಡಿಸಿದ ಪಾಂಡ್ಯ ಬಹಿರಂಗವಾಗಿಯೇ ಕ್ಷಮೆಯಾಚಿಸಿದ್ದರು. ಆದರೂ ಬಿಸಿಸಿಐ ಆಡಳಿತ ಸಮಿತಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com