'ಪಾಕ್ ನಾಯಕನನ್ನು ಕ್ಷಮಿಸಿದ್ದೇವೆ': ದೊಡ್ಡತನ ಮೆರೆದ ದ.ಆಫ್ರಿಕಾ ನಾಯಕ ಡುಪ್ಲೆಸಿಸ್

ಜನಾಂಗೀಯ ನಿಂದನೆಯಂತಹ ಗಂಭೀರ ಆರೋಪ ಎದುರಿಸುತ್ತಿರುವ ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಸರ್ಫರಾಜ್ ಖಾನ್ ರನ್ನು ನಾವು ಕ್ಷಮಿಸಿದ್ದೇವೆ ಎಂದು ಹೇಳುವ ಮೂಲಕ ದಕ್ಷಿಣ ಆಫ್ರಿಕಾ ತಂಡದ ನಾಯಕ ಫಾಫ್ ಡುಪ್ಲೆಸಿಸ್ ದೊಡ್ಡತನ ಮೆರೆದಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ದುಬೈ: ಜನಾಂಗೀಯ ನಿಂದನೆಯಂತಹ ಗಂಭೀರ ಆರೋಪ ಎದುರಿಸುತ್ತಿರುವ ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಸರ್ಫರಾಜ್ ಖಾನ್ ರನ್ನು ನಾವು ಕ್ಷಮಿಸಿದ್ದೇವೆ ಎಂದು ಹೇಳುವ ಮೂಲಕ ದಕ್ಷಿಣ ಆಫ್ರಿಕಾ ತಂಡದ ನಾಯಕ ಫಾಫ್ ಡುಪ್ಲೆಸಿಸ್ ದೊಡ್ಡತನ ಮೆರೆದಿದ್ದಾರೆ.
ಈ ಹಿಂದೆ ದಕ್ಷಿಣ ಆಫ್ರಿಕಾದ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ ತಂಡದ ನಾಯಕ ಸರ್ಫರಾಜ್ ಖಾನ್ ಜನಾಂಗೀಯ ನಿಂದನೆ ಮಾಡಿದ್ದರು. ಇದು ಸ್ಟಂಪ್ ಮೈಕ್ ನಲ್ಲಿ ದಾಖಲಾಗಿತ್ತು. ಈ ವಿಚಾರ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಸರ್ಫರಾಜ್ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೆ ಶೊಯೆಬ್ ಅಖ್ತರ್ ಸೇರಿದಂತೆ ಸ್ವತಃ ಪಾಕಿಸ್ತಾನದ ಮಾಜಿ ಕ್ರಿಕೆಟಿಗರೇ ಸರ್ಫರಾಜ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಸರ್ಫರಾಜ್ ಖಾನ್ ಕೂಡ ಟ್ವಿಟರ್ ನಲ್ಲಿ ಬಹಿರಂಗ ಕ್ಷಮೆ ಕೋರಿದ್ದರು.
ಇದೀಗ ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ದಕ್ಷಿಣ ಆಫ್ರಿಕಾ ತಂಡ ನಾಯಕ ಫಾಫ್ ಡುಪ್ಲೆಸಿಸ್ ಸರ್ಫರಾಜ್ ರನ್ನು ಕ್ಷಮಿಸಿರುವುದಾಗಿ ಹೇಳಿದ್ದಾರೆ. 'ಪಾಕಿಸ್ತಾನ ತಂಡದ ನಾಯಕ ಸರ್ಫರಾಜ್ ಖಾನ್ ಗೆ ತಮ್ಮ ತಪ್ಪಿನ ಅರಿವಾಗಿದ್ದು, ಅವರು ಬಹಿರಂಗವಾಗಿ ಕ್ಷಮೆ ಕೋರಿದ್ದಾರೆ. ಹೀಗಾಗಿ ನಾವೂ ಕೂಡ ಅವರನ್ನು ಕ್ಷಮಿಸಿದ್ದೇವೆ. ಆದರೆ ಈಗಾಗಲೇ ಪ್ರಕರಣ ಐಸಿಸಿ ಮುಂದಿದ್ದು, ಈ ಹಂತದಲ್ಲಿ ಐಸಿಸಿ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಡುಪ್ಲೆಸಿಸ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com