ವೇಗದ 25ನೇ ಏಕದಿನ ಶತಕ: ಎಬಿಡಿ ದಾಖಲೆ ಹಿಂದಿಕ್ಕಿದ ರೋಹಿತ್ ಶರ್ಮಾ!

ಇಂಗ್ಲೆಂಡ್ ವಿರುದ್ದದ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ಭಾರತದ ಹಿಟ್ ಮ್ಯಾನ್ ರೋಹಿತ್ ಶರ್ಮಾ ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟ್ಸ್ ಮನ್ ಎಬಿ ಡಿವಿಲಿಯರ್ಸ್ ರನ್ನು ಹಿಂದಿಕ್ಕಿದ್ದಾರೆ.
ಎಬಿಡಿ ದಾಖಲೆ ಹಿಂದಿಕ್ಕಿದ ರೋಹಿತ್ ಶರ್ಮಾ!
ಎಬಿಡಿ ದಾಖಲೆ ಹಿಂದಿಕ್ಕಿದ ರೋಹಿತ್ ಶರ್ಮಾ!
ಲಂಡನ್: ಇಂಗ್ಲೆಂಡ್ ವಿರುದ್ದದ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ಭಾರತದ ಹಿಟ್ ಮ್ಯಾನ್ ರೋಹಿತ್ ಶರ್ಮಾ ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟ್ಸ್ ಮನ್ ಎಬಿ ಡಿವಿಲಿಯರ್ಸ್ ರನ್ನು ಹಿಂದಿಕ್ಕಿದ್ದಾರೆ.
ಹೌದು.. ಏಕದಿನ ಕ್ರಿಕೆಟ್ ನಲ್ಲಿ ವೇಗದ 25 ಶತಕ ಸಿಡಿಸಿದ ಬ್ಯಾಟ್ಸ್ ಮನ್ ಗಳ ಪಟ್ಟಿಯಲ್ಲಿ ರೋಹಿತ್ ಶರ್ಮಾ ಸ್ಥಾನ ಪಡೆದಿದ್ದು, ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟ್ಸ್ ಮನ್ ಎಬಿ ಡಿವಿಲಿಯರ್ಸ್ ರನ್ನು ಹಿಂದಿಕ್ಕಿದ್ದಾರೆ. ಪಟ್ಟಿಯಲ್ಲಿ ರೋಹಿತ್ ಶರ್ಮಾ ಮೂರನೇ ಸ್ಥಾನಿಯಾಗಿದ್ದು, ಈ ಹಿಂದೆ ಮೂರನೇ ಸ್ಥಾನದಲ್ಲಿದ್ದ ಎಬಿ ಡಿವಿಲಿಯರ್ಸ್ ರನ್ನು ನಾಲ್ತನೇ ಸ್ಥಾನಕ್ಕೆ ತಳ್ಳಿದ್ದಾರೆ.
ಇನ್ನು 151 ಇನ್ನಿಂಗ್ಸ್ ಗಳಲ್ಲಿ 25 ಶತಕ ಸಿಡಿಸಿರುವ ದಕ್ಷಿಣ ಆಫ್ರಿಕಾದ ಆರಂಭಿಕ ಬ್ಯಾಟ್ಸ್ ಮನ್ ಹಶೀಮ್ ಆಮ್ಲಾ ಅಗ್ರ ಸ್ಥಾನದಲ್ಲಿದ್ದು, 162 ಇನ್ನಿಂಗ್ಸ್ ಗಳಲ್ಲಿ 25 ಶತಕ ಸಿಡಿಸಿರುವ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ 2ನೇ ಸ್ಥಾನದಲ್ಲಿದ್ದಾರೆ. ರೋಹಿತ್ ಶರ್ಮಾ 25 ಶತಕಗಳಿಗೆ 206 ಇನ್ನಿಂಗ್ಸ್ ತೆಗೆದುಕೊಂಡಿದ್ದು, ಅವರು ಮೂರನೇ ಸ್ಥಾನದಲ್ಲಿದ್ದಾರೆ. ಅಂತೆಯೇ 234 ಇನ್ನಿಂಗ್ಸ್ ಗಳಲ್ಲಿ ಈ ಸಾಧನೆ ಮಾಡಿದ ಎಬಿ ಡಿವಿಲಿಯರ್ಸ್ 5 ಮತ್ತು 234 ಇನ್ನಿಂಗ್ಸ್ ಗಳಲ್ಲಿ 25 ಶತಕ ಸಿಡಿಸಿದ ಭಾರತದ ಸಚಿನ್ ತೆಂಡೂಲ್ಕರ್ ಆರನೇ ಸ್ಥಾನದಲ್ಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com