ಐಸಿಸಿ ವಿಶ್ವಕಪ್ 2019: ಭಾರತಕ್ಕೆ ತಲೆನೋವಾಗಿದ್ದ ಕೇನ್ ವಿಲಿಯಮ್ಸನ್ ಔಟ್, ಮತ್ತೆ ಸಂಕಷ್ಟದಲ್ಲಿ ಕಿವೀಸ್

ಐಸಿಸಿ ವಿಶ್ವಕಪ್ ಟೂರ್ನಿಯ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಭಾರತ ತಂಡ ಮೇಲುಗೈ ಸಾಧಿಸಿದ್ದು, ಆರ್ಧಶತಕ ಗಳಿಸಿ ನ್ಯೂಜಿಲೆಂಡ್ ಪಾಲಿಗೆ ಆಪದ್ಭಾಂಧವರಾಗಿದ್ದ ಕೇನ್ ವಿಲಿಯಮ್ಸನ್ ಔಟ್ ಆಗಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಲಂಡನ್: ಐಸಿಸಿ ವಿಶ್ವಕಪ್ ಟೂರ್ನಿಯ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಭಾರತ ತಂಡ ಮೇಲುಗೈ ಸಾಧಿಸಿದ್ದು, ಆರ್ಧಶತಕ ಗಳಿಸಿ ನ್ಯೂಜಿಲೆಂಡ್ ಪಾಲಿಗೆ ಆಪದ್ಭಾಂಧವರಾಗಿದ್ದ ಕೇನ್ ವಿಲಿಯಮ್ಸನ್ ಔಟ್ ಆಗಿದ್ದಾರೆ.
ಇಂದು ಮ್ಯಾಂಚೆಸ್ಟರ್ ನ ಓಲ್ಡ್ ಟ್ರಾಫೋರ್ಡ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಆರಂಭಿಕ ಆಘಾತದಿಂದ ಮೇಲೆತ್ತಿ, ಕಿವೀಲ್ ಬ್ಯಾಟಿಂಗ್ ಗೆ ಜೀವ ತುಂಬಿದ ನಾಯಕ ಕೇನ್ ವಿಲಿಯಮ್ಸನ್ ಕೊನೆಗೂ ಔಟ್ ಆಗಿದ್ದಾರೆ. 95 ಎಸೆತಗಳಲ್ಲಿ 6 ಬೌಂಡರಿಗಳ ನೆರವಿನಿಂದ 67 ರನ್ ಸಿಡಿಸಿ ಶತಕದತ್ತ ದಾಪುಗಾಲಿರಿಸಿದ್ದ ವಿಲಿಯಮ್ಸನ್, ಚಹಲ್ ಬೌಲಿಂಗ್ ನಲ್ಲಿ ಔಟ್ ಆಗಿದ್ದಾರೆ.
ಭಾರತದ ಯಜುವೇಂದ್ರ ಚಾಹಲ್ ಎಸೆದ 36ನೇ ಓವರ್ ನ 2ನೇ ಎಸೆತದಲ್ಲಿ ವಿಲಿಯಮ್ಸನ್ ಕವರ್ ನತ್ತ ಚೆಂಡು ಬಾರಿಸಿದರು. ಆದರೆ ಅಲ್ಲಿಯೇ ನಿಂತಿದ್ದ ರವೀಂದ್ರ ಜಡೇಜಾ ಅತ್ಯಂತ ಚಾಕಚಕ್ಯತೆಯಿಂದ ಚೆಂಡನ್ನು ಹಿಡಿತಕ್ಕೆ ಪಡೆದು ಕಿವೀಸ್ ನಾಯಕನನ್ನು ಪೆವಿಲಿಯನ್ ಗೆ ಅಟ್ಟಿದರು. ಆ ಮೂಲಕ ಭಾರತಕ್ಕೆ ಮೇಲುಗೈ ತಂದಿತ್ತರು.
ಇತ್ತೀಚಿನ ವರದಿಗಳು ಬಂದಾಗ ನ್ಯೂಜಿಲೆಂಡ್ ತಂಡ 39 ಓವರ್ ನಲ್ಲಿ 3 ವಿಕೆಟ್ ನಷ್ಟಕ್ಕೆ 150 ರನ್ ಗಳಿಸಿದೆ. ಭಾರತದ ಪರ ಜಸ್ ಪ್ರೀತ್ ಬುಮ್ರಾ. ಯಜುವೇಂದ್ರ ಚಹಲ್ ಹಾಗೂ ರವೀಂದ್ರ ಜಡೇಜಾ ತಲಾ 1 ವಿಕೆಟ್ ಪಡೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com