ಐಸಿಸಿ ವಿಶ್ವಕಪ್ 2019: ಕೇನ್ ವಿಲಿಯಮ್ಸನ್ ರಿಂದ ಭಾರತದ ವಿರುದ್ಧ ಅರ್ಧಶತಕ, ನ್ಯೂಜಿಲೆಂಡ್ ಪರ ವಿಶ್ವದಾಖಲೆ

ಐಸಿಸಿ ವಿಶ್ವಕಪ್ ಟೂರ್ನಿಯ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಭಾರತ ತಂಡದ ವಿರುದ್ಧ ಅರ್ಧಶತಕ ಸಿಡಿಸಿದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ದಾಖಲೆ ಬರೆದಿದ್ದಾರೆ.
ಕೇನ್ ವಿಲಿಯಮ್ಸನ್
ಕೇನ್ ವಿಲಿಯಮ್ಸನ್
ಲಂಡನ್: ಐಸಿಸಿ ವಿಶ್ವಕಪ್ ಟೂರ್ನಿಯ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಭಾರತ ತಂಡದ ವಿರುದ್ಧ ಅರ್ಧಶತಕ ಸಿಡಿಸಿದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ದಾಖಲೆ ಬರೆದಿದ್ದಾರೆ.
ಹೌದು.. ಇಂದು ಮ್ಯಾಂಚೆಸ್ಟರ್ ನ ಓಲ್ಡ್ ಟ್ರಾಫೋರ್ಡ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಸಂಕಷ್ಟದಿಂದ ಮೇಲೆತ್ತಿದ ವಿಲಿಯಮ್ಸನ್ ಆಕರ್ಷಕ ಅರ್ಧಶತಕ ಸಿಡಿಸಿದರು. ಅಲ್ಲದೆ ಹಾಲಿ ಟೂರ್ನಿಯಲ್ಲಿ ತಮ್ಮ ರನ್ ಗಳಿಕೆಯನ್ನು 500ರ ಗಡಿದಾಟಿಸಿಕೊಂಡರು. ಅಂತೆಯೇ ನ್ಯೂಜಿಲೆಂಡ್ ಪರ ವಿಶ್ವಕಪ್ ಟೂರ್ನಿಯೊಂದರಲ್ಲಿ ಗರಿಷ್ಠ ರನ್ ಸಾಧನೆ ಮಾಡಿದ ಆಟಗಾರ ಎಂಬ ಕೀರ್ತಿಗೂ ವಿಲಿಯಮ್ಸನ್ ಪಾತ್ರರಾದರು.
ವಿಲಿಯಮ್ಸನ್ ಇಂದು 95 ಎಸೆತಗಳಲ್ಲಿ 6 ಬೌಂಡರಿಗಳ ನೆರವಿನಿಂದ 67 ರನ್ ಸಿಡಿಸಿದರು. ಆ ಮೂಲಕ ಹಾಲಿ ಟೂರ್ನಿಯಲ್ಲಿ ತಮ್ಮ ರನ್ ಗಳಿಕೆಯನ್ನು 548ಕ್ಕೆ ಏರಿಕೆ ಮಾಡಿಕೊಂಡು, ನ್ಯೂಜಿಲೆಂಡ್ ಪರ ವಿಶ್ವಕಪ್ ಟೂರ್ನಿಯಲ್ಲಿ ಗರಿಷ್ಠ ರನ್ ಮಾಡಿದ ಆಟಗಾರ ಎಂಬ ಕೀರ್ತಿಗೆ ಭಾಜನರಾದರು. ಇದಕ್ಕೂ ಮೊದಲು, 2015ರ ವಿಶ್ವಕಪ್ ಟೂರ್ನಿಯಲ್ಲಿ ಮಾರ್ಟಿನ್ ಗಪ್ಟಿಲ್ 547 ರನ್ ಗಳನ್ನು ಸಿಡಿಸಿ ಈ ದಾಖಲೆ ಬರೆದಿದ್ದರು. ಆದರೀಗ ಕೇನ್ ವಿಲಿಯಮ್ಸನ್ ಈ ದಾಖಲೆ ಮುರಿದಿದ್ದಾರೆ.
ಉಳಿದಂತೆ ವಿಶ್ವಕಪ್ ನಲ್ಲಿ ಗರಿಷ್ಠ ರನ್ ಗಳಿಸಿದ ಕಿವೀಸ್ ಆಟಗಾರರ ಪಟ್ಟಿಯಲ್ಲಿ ಮಾಜಿ ಆಟಗಾರ ಸ್ಕಾಟ್ ಸ್ಟ್ರೈರಿಸ್ 3ನೇ ಸ್ಥಾನದಲ್ಲಿದ್ದು, 2007ರ ವಿಶ್ವಕಪ್ ಟೂರ್ನಿಯಲ್ಲಿ ಅವರು 499 ರನ್ ಗಳಿಸಿದ್ದರು. ಐದನೇ ಸ್ಥಾನದಲ್ಲಿರುವ ಸ್ಟೀಫನ್ ಫ್ಲೆಮಿಂಗ್ ಕೂಡ ಅದೇ ಟೂರ್ನಿಯಲ್ಲಿ 353 ರನ್ ಸಿಡಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com