ಸೋಲು, ಗೆಲುವು ಬದುಕಿನ ಭಾಗ: ಟೀಂ ಇಂಡಿಯಾಗೆ ಪ್ರಧಾನಿ ಮೋದಿ ಸಂದೇಶ

ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ಸ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 18 ರನ್ ಗಳ ಸೋಲು ಅನುಭವಿಸಿದ ಟೀಂ ಇಂಡಿಯಾ...

Published: 11th July 2019 12:00 PM  |   Last Updated: 11th July 2019 01:05 AM   |  A+A-


Wins and losses are a part of life, says PM Modi after India lost to New Zealand by 18 runs

ನರೇಂದ್ರ ಮೋದಿ

Posted By : LSB LSB
Source : UNI
ನವದೆಹಲಿ: ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ಸ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 18 ರನ್ ಗಳ ಸೋಲು ಅನುಭವಿಸಿದ ಟೀಂ ಇಂಡಿಯಾ ಬೇಸರ ಪಡಬೇಕಿಲ್ಲ. ಸೋಲು ಹಾಗೂ ಗೆಲುವುಗಳು ಜೀವನದ ಅವಿಭಾಜ್ಯ ಅಂಗ ಎಂದು ಪಂದ್ಯದ ಬಳಿಕ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

'ನಿರಾಶಾದಾಯಕ ಫಲಿತಾಂಶ. ಆದರೂ ಟೀಂ ಇಂಡಿಯಾ ಜಿದ್ದಾಜಿದ್ದಿನ ಹೋರಾಟ ನೀಡಿತು. ಟೂರ್ನಿಯುದ್ದಕ್ಕೂ ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್ ನಲ್ಲಿ ಭರ್ಜರಿ ಪ್ರದರ್ಶನ ನೀಡಿತು. ಗೆಲುವು ಹಾಗೂ ಸೋಲುಗಳ ಜೀವನದ ಅವಿಭಾಜ್ಯ ಅಂಗ. ತಂಡದ ಮುಂದಿನ ಪ್ರಯತ್ನಕ್ಕೆ ಶುಭಾಶಯಗಳು' ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ನ್ಯೂಜಿಲೆಂಡ್ ನೀಡಿದ 240 ರನ್ ಗಳ ಗುರಿಯನ್ನು ಹಿಂಬಾಲಿಸಿದ ಟೀಮ್ ಇಂಡಿಯಾ ಕಳಪೆ ಆರಂಭ ಕಂಡಿತು. ಮೇಲ್ಪಂಕ್ತಿಯ ಆಟಗಾರರು ರನ್ ಕಲೆ ಹಾಕುವಲ್ಲಿ ವಿಫಲರಾದರು. ರವೀಂದ್ರ ಜಡೇಜಾ ಹಾಗೂ ಮಹೇಂದ್ರ ಸಿಂಗ್ ಧೋನಿ ಅವರನ್ನು ಹೊರತು ಪಡಿಸಿ ಬೇರೆ ಎಲ್ಲ ಬ್ಯಾಟ್ಸ್ ಮನ್ ಗಳು ರನ್ ಬರ ಅನುಭವಿಸಿದರು.
Stay up to date on all the latest ಕ್ರಿಕೆಟ್ news with The Kannadaprabha App. Download now
facebook twitter whatsapp