ವಿಶ್ವಕಪ್‌ ನಲ್ಲೂ ಐಪಿಎಲ್‌ ನಾಕೌಟ್‌ ಮಾದರಿ ತನ್ನಿ: ಟೀಂ ಇಂಡಿಯಾ ನಾಯಕ ಕೊಹ್ಲಿ

ಐಸಿಸಿ ವಿಶ್ವಕಪ್ ಟೂರ್ನಿಯಲ್ಲೂ ಐಪಿಎಲ್ ಮಾದರಿಯ ನಾಕೌಟ್‌ ಪಂದ್ಯಗಳನ್ನು ಆಯೋಜಿಸಬೇಕು ಎಂದು ಭಾರತದ ತಂಡದ ನಾಯಕ ವಿರಾಟ್ ಕೊಹ್ಲಿ ಅಭಿಪ್ರಾಯಪಟ್ಟಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಲಂಡನ್: ಐಸಿಸಿ ವಿಶ್ವಕಪ್ ಟೂರ್ನಿಯಲ್ಲೂ ಐಪಿಎಲ್ ಮಾದರಿಯ ನಾಕೌಟ್‌ ಪಂದ್ಯಗಳನ್ನು ಆಯೋಜಿಸಬೇಕು ಎಂದು ಭಾರತದ ತಂಡದ ನಾಯಕ ವಿರಾಟ್ ಕೊಹ್ಲಿ ಅಭಿಪ್ರಾಯಪಟ್ಟಿದ್ದಾರೆ.
ಹೌದು... ವಿಶ್ವಕಪ್ ಟೂರ್ನಿಯಲ್ಲಿ ಲೀಗ್ ಹಂತದಲ್ಲಿ ಭರ್ಜರಿ ಪ್ರದರ್ಶನ ನೀಡಿ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಗಳಿಸಿದ್ದ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಒಂದೇ ಒಂದು ಪಂದ್ಯದಲ್ಲಿ ಸೋತು ಟೂರ್ನಿಯಿಂದ ಹೊರಬಿತ್ತು. ಇದರ ಬೆನ್ನಲ್ಲೇ ಅಭಿಮಾನಿಗಳು ಐಪಿಎಲ್ ಮಾದರಿಯ ನಾಕೌಟ್ ಹಂತವನ್ನು ಜಾರಿಗೆ ತರುವಂತೆ ಆಗ್ರಹಿಸಿದ್ದರು.
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕೂಡ ಇಂತಹುದೇ ವಾದವನ್ನು ಮಂಡಿಸಿದ್ದು,  ಇಂಡಿಯನ್‌ ಪ್ರೀಮಿಯರ್‌ ಲೀಗ್‌ ರೀತಿಯಲ್ಲೇ ಐಸಿಸಿ ವಿಶ್ವಕಪ್‌ ನಾಕೌಟ್‌ ಪಂದ್ಯಗಳನ್ನು ಆಯೋಜಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.
ಕಳೆದ ಬುಧವಾರ ನ್ಯೂಜಿಲೆಂಡ್‌ ವಿರುದ್ಧ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಭಾರತ 18 ರನ್ ಗಳಿಂದ ಸೋಲು ಅನುಭವಿಸಿತ್ತು. ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ವಿರಾಟ್‌, ಪಂದ್ಯದ 45 ನಿಮಿಷಗಳ ಕೆಟ್ಟ ಬ್ಯಾಟಿಂಗ್‌ ನಿಂದ ನಾವು ಸೋಲು ಅನುಭವಿಸಿದೆವು ಎಂದು ಆತ್ಮಾವಲೋಕನ ಮಾಡಿಕೊಂಡಿದ್ದರು. ಅಲ್ಲದೇ, ಐಪಿಎಲ್‌ ಮಾದರಿಯಲ್ಲೇ ನಾಕೌಟ್‌ ಪಂದ್ಯಗಳನ್ನು ಆಯೋಜಿಸಬೇಕೆಂದು ಅವರು ಸಲಹೆ ನೀಡಿದ್ದರು.
ಲೀಗ್ ಹಂತದಲ್ಲಿ ನಾವು ಅಗ್ರಸ್ಥಾನಿಯಾಗಿದ್ದೆವು. ಆದರೆ ನ್ಯೂಜಿಲೆಂಡ್ ವಿರುದ್ಧದ ಒಂದೇ ಒಂದು ಸೋಲು ನಮ್ಮನ್ನು ಟೂರ್ನಿಯಿಂದ ಹೊರಗೆ ಹಾಕಿತು. ಆದರೆ ಸೋಲನ್ನು ನಾವು ಒಪ್ಪಿಕೊಳ್ಳಲೇಬೇಕು. ಕ್ರಿಕೆಟ್‌ನಲ್ಲಿ ಏನೆಲ್ಲ ಆಗಬಹುದು ಎಂಬ ಭವಿಷ್ಯದ ಬಗ್ಗೆ ಯಾರಿಗೆ ಗೊತ್ತಿದೆ. ಈ ಪಂದ್ಯಾವಳಿಯ ಪ್ರಮಾಣ ನೋಡುತ್ತ ಈ ವಿಷಯಗಳು ಪರಿಗಣನೆಗೆ ಬರಬಹುದು ಎಂದು ನಾನು ಭಾವಿಸುತ್ತೇನೆ. ಅದು ನಿಜವಾಗಿಯೂ ಮಾನ್ಯ ಅಂಶವಾಗಿದೆ. ಅದು ಯಾವಾಗ ಕಾರ್ಯಗತಗೊಳ್ಳುತ್ತದೆ ಎಂದು ತಿಳಿದಿಲ್ಲ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com