ಚೊಚ್ಚಲ ಕ್ರಿಕೆಟ್ ವಿಶ್ವಕಪ್‌ಗೆ ಮುತ್ತಿಟ್ಟ ಕ್ರಿಕೆಟ್ ಜನಕರು!

ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯ ನ್ಯೂಜಿಲ್ಯಾಂಡ್ ಮತ್ತು ಆತಿಥೇಯ ಇಂಗ್ಲೆಂಡ್ ನಡುವೆ ರೋಚಕ ಟೈ ಆಗಿತ್ತು. ನಂತರ ನಡೆದ ಸೂಪರ್ ಓವರ್ ನಲ್ಲಿ ಗೆದ್ದು ಇಂಗ್ಲೆಂಡ್...
ಇಂಗ್ಲೆಂಡ್ ತಂಡ
ಇಂಗ್ಲೆಂಡ್ ತಂಡ
ಲಂಡನ್: ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯ ನ್ಯೂಜಿಲ್ಯಾಂಡ್ ಮತ್ತು ಆತಿಥೇಯ ಇಂಗ್ಲೆಂಡ್ ನಡುವೆ ರೋಚಕ ಟೈ ಆಗಿತ್ತು. ನಂತರ ನಡೆದ ಸೂಪರ್ ಓವರ್ ನಲ್ಲಿ ಗೆದ್ದು ಚೊಚ್ಚಲ ಬಾರಿಗೆ ಕ್ರಿಕೆಟ್ ವಿಶ್ವಕಪ್ ಗೆ ಮುತ್ತಿಟ್ಟಿದೆ. 
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲ್ಯಾಂಡ್ ನಿಗದಿತ ಓವರ್ ನಲ್ಲಿ 8 ವಿಕೆಟ್ ಕಳೆದುಕೊಂಡು 241 ರನ್ ಮಾತ್ರ ಪೇರಿಸಿತ್ತು. ಇನ್ನು 242 ರನ್ ಗಳ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ಸಹ ನಿಗದಿತ ಓವರ್ ಮುಕ್ತಾಯಕ್ಕೆ 241 ರನ್ ಪೇರಿಸಿ ಪಂದ್ಯವನ್ನು ಟೈ ಮಾಡಿಕೊಂಡಿತ್ತು. ಹೀಗಾಗಿ ಸೂಪರ್ ಓವರ್ ನೀಡಲಾಯಿತು. ಮೊದಲಿಗೆ ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ಓವರ್ ಮುಕ್ತಾಯಕ್ಕೆ 15 ರನ್ ಪೇರಿಸಿ ನ್ಯೂಜಿಲ್ಯಾಂಡ್ ಗೆ ಗೆಲ್ಲಲು 16 ರನ್ ಗುರಿ ನೀಡಿತು. ಆದರೆ ಈ ಮೊತ್ತ ಪೇರಿಸಲು ಸಾಧ್ಯವಾಗದೆ ನ್ಯೂಜಿಲ್ಯಾಂಡ್ ಸೋಲು ಕಂಡಿದೆ.
ನ್ಯೂಜಿಲ್ಯಾಂಡ್ ಪರ ಮಾರ್ಟಿನ್ ಗುಪ್ಟಿಲ್ 19, ನಿಕೋಲಾಸ್ 55, ಕೇನ್ ವಿಲಿಯಮ್ಸನ್ 30, ಲ್ಯಾಥಂ 47, ನಿಶಾಮ್ 19 ರನ್ ಬಾರಿಸಿದ್ದಾರೆ. 
ಇಂಗ್ಲೆಂಡ್ ಪರ ಬೌಲಿಂಗ್ ನಲ್ಲಿ ಪ್ಲುಂಕೆಟ್ ಮತ್ತು ವೋಕ್ಸ್ ತಲಾ 3 ವಿಕೆಟ್ ಪಡೆದಿದ್ದಾರೆ. ಆರ್ಚರ್ ಮತ್ತು ಮಾರ್ಕ್ ವುಡ್ ತಲಾ 1 ವಿಕೆಟ್ ಪಡೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com