ಐಸಿಸಿ ಕನಸಿನ ವಿಶ್ವಕಪ್ ತಂಡ ಪ್ರಕಟ: ರೋಹಿತ್, ಬುಮ್ರಾಗೆ ಸ್ಥಾನ, ಆದರೆ ವಿಶ್ವದ ನಂಬರ್ ಬ್ಯಾಟ್ಸ್ ಮನ್ ಗೇ ಸ್ಥಾನವಿಲ್ಲ!

ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ ಐಸಿಸಿ ತನ್ನ ಕನಸಿನ ಕ್ರಿಕೆಟ್ ತಂಡವನ್ನು ಪ್ರಕಟಿಸಿದ್ದು, ತಂಡದಲ್ಲಿ ಭಾರತದ ಇಬ್ಬರು ಆಟಗಾರರು ಸ್ಥಾನಗಳಿಸಿದ್ದಾರೆ.

Published: 16th July 2019 12:00 PM  |   Last Updated: 16th July 2019 11:25 AM   |  A+A-


Rohit Sharma, Jasprit Bumrah only Indians in ICC World Cup XI, Champions England dominate

ಸಂಗ್ರಹ ಚಿತ್ರ

Posted By : SVN SVN
Source : Online Desk
ಲಂಡನ್: ವಿಶ್ವಕಪ್ ಕ್ರಿಕೆಟ್ ಟೂರ್ನಿ ಮುಕ್ತಾಯದ ಬೆನ್ನಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ ಐಸಿಸಿ ತನ್ನ ಕನಸಿನ ಕ್ರಿಕೆಟ್ ತಂಡವನ್ನು ಪ್ರಕಟಿಸಿದ್ದು, ತಂಡದಲ್ಲಿ ಭಾರತದ ಇಬ್ಬರು ಆಟಗಾರರು ಸ್ಥಾನಗಳಿಸಿದ್ದಾರೆ. ಆದರೆ ವಿಶ್ವದ ನಂಬರ್ ಒನ್ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿಗೆ ತಂಡದಲ್ಲಿ ಸ್ಥಾನ ನೀಡಿಲ್ಲ.

2019 ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ಚಾಂಪಿಯನ್ ಆಗಿ ಹೊರಹೊಮ್ಮಿದ ಬಳಿಕ ಐಸಿಸಿ ತನ್ನ ತಂಡವನ್ನು ನೆಚ್ಚಿನ 11 ಆಟಗಾರರ ತಂಡ ಪ್ರಕಟಿಸಿದ್ದು, ಮಾಜಿ ಕ್ರಿಕೆಟಿಗರಾದ ಇಯಾನ್ ಬಿಶಪ್, ಇಯಾನ್ ಸ್ಮೀತ್, ಇಸಾ ಗುಹಾ ಹಾಗೂ ಕ್ರಿಕೆಟ್ ವಿಶ್ಲೇಷಕರಾದ ಲಾರೆನ್ಸ್ ಬೂತ್ ಮತ್ತು ಐಸಿಸಿ ಪ್ರಧಾನ ವ್ಯವಸ್ಥಾಪಕರು ತಂಡವನ್ನು ಆಯ್ಕೆ ಮಾಡಿದ್ದಾರೆ. 

ವಿಶ್ವಕಪ್ ಟೂರ್ನಿಯಲ್ಲಿ ಗಮನಾರ್ಹ ಪ್ರದರ್ಶನದ ಹೊರತಾಗಿಯೂ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ. ಐಸಿಸಿ ಅಧಿಕೃತ ವೆಬ್‍ಸೈಟ್ ತಾಣದಲ್ಲಿ 11 ಆಟಗಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಭಾರತದ ಪರವಾಗಿ ಟೂರ್ನಿಯಲ್ಲಿ 5 ಶತಕ ಗಳಿಸಿ ಟೂರ್ನಿಯಲ್ಲಿ ಗರಿಷ್ಠ ರನ್ ಗಳಿಸಿರುವ ರೋಹಿತ್ ಶರ್ಮಾ ಹಾಗೂ ನಂ.1 ಬೌಲರ್ ಜಸ್ ಪ್ರೀತ್ ಬುಮ್ರಾ ಸ್ಥಾನಗಳಿಸಿದ್ದಾರೆ.

ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಅವರಿಗೆ ತಂಡದ ನಾಯಕತ್ವ ನೀಡಲಾಗಿದ್ದು, ರೋಹಿತ್ ಶರ್ಮಾ ಹಾಗೂ ಇಂಗ್ಲೆಂಡ್ ನ ಜೇಸನ್ ರಾಯ್ ಆರಂಭಿಕರಾಗಿದ್ದರೆ, ವಿಲಯಮ್ಸನ್ ನಂ.3, ಬಳಿಕ ಜೋ ರೂಟ್, ಶಕಿಬ್ ಅಲ್ ಹಸನ್, ಬೇನ್ ಸ್ಟೋಕ್ಸ್, ಅಲೆಕ್ಸ್ ಕ್ಯಾರಿ ತಂಡದಲ್ಲಿದ್ದಾರೆ. ಇಂಗ್ಲೆಂಡ್ ತಂಡದ ಆರಂಭಿಕ ಜಾಸನ್ ರಾಯ್ ಅವರನ್ನು ಕೊಹ್ಲಿ ಅವರ ಸ್ಥಾನದಲ್ಲಿ ಆಯ್ಕೆ ಮಾಡಲಾಗಿದೆ. ಟೂರ್ನಿಯಲ್ಲಿ ರಾಯ್ 7 ಪಂದ್ಯಗಳಿಂದ 63.29 ಸರಾಸರಿಯಲ್ಲಿ 443 ರನ್ ಗಳಿಸಿದ್ದಾರೆ. ಕೊಹ್ಲಿ 9 ಪಂದ್ಯಗಳಿಂದ 55.38 ಸರಾಸರಿಯಲ್ಲಿ 443 ರನ್ ಗಳಿಸಿದ್ದಾರೆ.

ಉಳಿದಂತೆ ಬೌಲಿಂಗ್ ವಿಭಾಗದಲ್ಲಿ ಮಿಚೆಲ್ ಸ್ಟಾರ್ಕ್, ಜೋಫ್ರಾ ಅರ್ಚರ್, ಫರ್ಗೂಸನ್ ಹಾಗೂ ಬುಮ್ರಾ ಇದ್ದಾರೆ. ಮಿಚೆಲ್ ಸ್ಟಾರ್ಕ್ 27 ವಿಕೆಟ್ ಗಳಿಸಿ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಗಳ ಪಟ್ಟಿಯಲ್ಲಿ ಮೊದಲಸ್ಥಾನ ಪಡೆದಿದ್ದರೆ, ಸೂಪರ್ ಓವರ್ ಬೌಲ್ ಮಾಡಿದ ಜೋಫ್ರಾ ಅರ್ಚರ್ ಟೂರ್ನಿಯಲ್ಲಿ 20 ವಿಕೆಟ್ ಗಳಿಸಿದ್ದಾರೆ. ಬೌಲರ್ ಗಳ ವಿಭಾಗದಲ್ಲಿ ನಂಬರ್ ಒನ್ ಸ್ಥಾನ ಪಡೆದಿರುವ ಪಡೆದಿರುವ ಬುಮ್ರಾ ಟೂರ್ನಿಯಲ್ಲಿ 18 ವಿಕೆಟ್ ಗಳಿಸಿದ್ದಾರೆ.
Stay up to date on all the latest ಕ್ರಿಕೆಟ್ news
Poll
Union Finance Minister Nirmala Sitharaman along with BJP General Secretary Bhupendra Yadav and state party President Sanjay Jaiswal releases party manifesto

ಬಿಹಾರ ಚುನಾವಣೆ: ಎಲ್ಲರಿಗೂ ಉಚಿತ ಕೋವಿಡ್ ಲಸಿಕೆ ನೀಡುವ ಬಿಜೆಪಿಯ ಪ್ರಣಾಳಿಕೆ ನೀತಿಗೆ ವಿರುದ್ಧವೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp