ಮದುವೆ ನಂತರವೂ ಐದಾರು ಮಹಿಳೆಯರ ಜೊತೆ ಸಂಬಂಧ ಇಟ್ಟುಕೊಂಡಿದ್ದೆ: ಪಾಕ್ ಮಾಜಿ ಕ್ರಿಕೆಟಿಗ

ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಅಬ್ದುಲ್ ರಜಾಕ್ ನಾನು ಮದುವೆ ನಂತರವೂ ಐದಾರು ಮಹಿಳೆಯರ ಜೊತೆ ಸಂಬಂಧ ಇಟ್ಟುಕೊಂಡಿದ್ದೆ ಎಂದು ಹೇಳಿ ವಿವಾದ ಸೃಷ್ಟಿಸಿದ್ದಾರೆ.
ಹಾರ್ದಿಕ್-ಅಬ್ದುಲ್ ರಜಾಕ್
ಹಾರ್ದಿಕ್-ಅಬ್ದುಲ್ ರಜಾಕ್
ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಅಬ್ದುಲ್ ರಜಾಕ್ ನಾನು ಮದುವೆ ನಂತರವೂ ಐದಾರು ಮಹಿಳೆಯರ ಜೊತೆ ಸಂಬಂಧ ಇಟ್ಟುಕೊಂಡಿದ್ದೆ ಎಂದು ಹೇಳಿ ವಿವಾದ ಸೃಷ್ಟಿಸಿದ್ದಾರೆ.
39 ವರ್ಷದ ಅಬ್ದುಲ್ ರಜಾಕ್ ಹೇಳಿಕೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಟಿವಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ರಜಾಕ್ ಆ್ಯಂಕರ್ ಕೇಳಿದ ಪ್ರಶ್ನೆಗೆ ಈ ರೀತಿ ಉತ್ತರಿಸಿದ್ದಾರೆ. ಮದುವೆ ನಂತರವೂ ನಾನು ಮಹಿಳೆಯರೊಂದಿಗೆ ಸಂಬಂಧ ಇಟ್ಟುಕೊಂಡಿದ್ದೆ. ಅದನ್ನು ಅಲ್ಲಲ್ಲಿಗೆ ಬ್ರೇಕ್ ಮಾಡಿಕೊಂಡು ಮುಂದೆ ಹೋಗುತ್ತಿದೆ ಎಂದು ಹೇಳಿದ್ದಾರೆ. 
ಇದೇ ವೇಳೆ ಮಾತನಾಡಿದ ಅವರು ನಾನು ಟೀಂ ಇಂಡಿಯಾ ಯುವ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯೆಗೆ ಕೋಚ್ ಆಗಿ ಆತನನ್ನು ವಿಶ್ವದ ನಂಬರ್ 1 ಆಲ್ ರೌಂಡರ್ ಮಾಡಬೇಕು ಎಂಬ ಆಸೆ ಇದೆ ಎಂದರು. 
ಇನ್ನು ಟೀಂ ಇಂಡಿಯಾ ವಿಶ್ವಕಪ್ ನಲ್ಲಿ ಉತ್ತಮ ಪ್ರದರ್ಶನ ನೀಡಲು ಆ ತಂಡದಲ್ಲಿ ಮುಸ್ಲಿಂ ವ್ಯಕ್ತಿ ಮೊಹಮ್ಮದ್ ಶಮಿ ಇದ್ದಿದ್ದು ಕಾರಣ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com