ಐಸಿಸಿ ಟೆಸ್ಟ್‌ ರ‍್ಯಾಂಕಿಂಗ್: ಅಗ್ರಪಟ್ಟ ಕಾಯ್ದುಕೊಂಡ ವಿರಾಟ್ ಕೊಹ್ಲಿ, ಟೀಂ ಇಂಡಿಯಾ

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಮಂಳವಾರ ನೂತನ ಟೆಸ್ಟ್‌ ರ‍್ಯಾಂಕಿಂಗ್ ಪಟ್ಟಿ ಪ್ರಕಟಿಸಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ಅಗ್ರಸ್ಥಾನ...
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ
ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಮಂಳವಾರ ನೂತನ ಟೆಸ್ಟ್‌ ರ‍್ಯಾಂಕಿಂಗ್ ಪಟ್ಟಿ ಪ್ರಕಟಿಸಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಬೌಲಿಂಗ್ ನಲ್ಲಿ ರವೀಂದ್ರ ಜಡೇಜ 6ನೇ ಸ್ಥಾನ ಪಡೆದಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಟೆಸ್ಟ್ ಸರಣಿ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ವಿರಾಟ್ ಕೊಹ್ಲಿ ಒಟ್ಟು 922 ಅಂಕಗಳನ್ನು ಕಲೆ ಹಾಕಿದ್ದಾರೆ. ಇಂಗ್ಲೆಂಡ್ ತಂಡದ ಸ್ಟಾರ್ ಬ್ಯಾಟ್ಸ್ ಮನ್ ಜೋ ರೂಟ್ ಆರನೇ ಸ್ಥಾನದಲ್ಲಿದ್ದಾರೆ. ಜಾನಿ ಬೈರ್‌ಸ್ಟೋವ್ ಮತ್ತು ಜೋಸ್ ಬಟ್ಲರ್ 26 ಮತ್ತು 27 ನೇ ಸ್ಥಾನದಲ್ಲಿದ್ದಾರೆ.
ಎರಡನೇ ಸ್ಥಾನದಲ್ಲಿರುವ ನ್ಯೂಜಿಲೆಂಡ್‌ ನಾಯಕ ಕೇನ್ ವಿಲಿಯಮ್ಸನ್ 913 ಅಂಕ ಸಂಪಾದಿಸಿದ್ದಾರೆ. .ಚೇತೇಶ್ವರ ಪೂಜಾರ (881) ಮೂರು, ಆಸ್ಟ್ರೇಲಿಯಾದ ಸ್ಟೀವನ್ ಸ್ಮಿತ್ (857) ನಾಲ್ಕನೇ ಮತ್ತು ನ್ಯೂಜಿಲೆಂಡ್‌ನ ಹೆನ್ರಿ ನಿಕೋಲ್ಸ್ (778) ಐದನೇ ಸ್ಥಾನದಲ್ಲಿದ್ದಾರೆ.
ತಂಡ ರ‍್ಯಾಂಕಿಂಗ್ ಪಟ್ಟಿಯಲ್ಲೂ ಭಾರತ ಅಗ್ರಸ್ಥಾನದಲ್ಲಿದೆ. ನಂತರದ ಸ್ಥಾನಗಳಲ್ಲಿ ಅನುಕ್ರಮವಾಗಿ ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ, ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ಹಂಚಿಕೊಂಡಿವೆ.
ಟೆಸ್ಟ್ ಬೌಲಿಂಗ್ ಶ್ರೇಯಾಂಕದಲ್ಲಿ ಎಡಗೈ ಸ್ಪಿನ್ನರ್ ರವೀಂದ್ರ ಜಡೇಜಾ ಮತ್ತು ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಕ್ರಮವಾಗಿ ಆರನೇ ಮತ್ತು 10 ನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಪ್ಯಾಟ್ ಕಮ್ಮಿನ್ಸ್ (878) ಅಗ್ರಸ್ಥಾನ ಮುಂದುವರೆದಿದ್ದಾರೆ. ಇಂಗ್ಲೆಂಡ್‌ನ ಜೇಮ್ಸ್ ಆಂಡರ್ಸನ್ (862) ಎರಡನೇ ಸ್ಥಾನದಲ್ಲಿದ್ದಾರೆ. ದಕ್ಷಿಣ ಆಫ್ರಿಕಾದ ಕಗಿಸೊ ರಬಾಡಾ (851), ವೆರ್ನಾನ್ ಫಿಲಾಂಡರ್ (813), ನಾಲ್ಕನೇ ಮತ್ತು ನ್ಯೂಜಿಲೆಂಡ್‌ನ ನೀಲ್ ವ್ಯಾಗ್ನರ್ (801) ಐದನೇ ಸ್ಥಾನದಲ್ಲಿದ್ದಾರೆ. ಜೇಮ್ಸ್ ಆಂಡರ್ಸನ್ ಹಾಗೂ ಸ್ಟುವರ್ಟ್ ಬ್ರಾಡ್ ಟೆಸ್ಟ್ ಬೌಲಿಂಗ್ ಶ್ರೇಯಾಂಕದಲ್ಲಿ 19 ಹಾಗೂ 20 ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಇಂಗ್ಲೆಂಡ್ ನ ಮೊಯಿನ್ ಅಲಿ 25 ನೇ ಸ್ಥಾನದಲ್ಲಿದ್ದಾರೆ.
ಅಂತೆಯೇ ಆಲ್‌ರೌಂಡರ್ ಪಟ್ಟಿಯಲ್ಲಿ ರವೀಂದ್ರ ಜಡೇಜಾ ಮೂರನೇ ಸ್ಥಾನದಲ್ಲಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com