ಐಸಿಸಿ ವಿಶ್ವಕಪ್ 2019: ಭಾರತದ ವಿರುದ್ದ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ಕೆ

ಐಸಿಸಿ ವಿಶ್ವಕಪ್ 2019 ಟೂರ್ನಿಯಲ್ಲಿ ಭಾರತ ಅಭಿಯಾನ ಆರಂಭವಾಗಿದ್ದು, ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ಕೆ
ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ಕೆ
ಲಂಡನ್: ಐಸಿಸಿ ವಿಶ್ವಕಪ್ 2019 ಟೂರ್ನಿಯಲ್ಲಿ ಭಾರತ ಅಭಿಯಾನ ಆರಂಭವಾಗಿದ್ದು, ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಇಂಗ್ಲೆಂಡ್ ನ ಸೌಥ್ಯಾಂಪ್ಟನ್ ನ ರೋಸ್ ಬೌಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡದ ನಾಯಕ ಡುಪ್ಲೆಸಿಸ್ ಮೊದಲು ಬ್ಯಾಟಿಂಗ್ ಮಾಡುವ ಆಯ್ಕೆ ಮಾಡಿಕೊಂಡಿದ್ದಾರೆ. ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ತಂಡಕ್ಕೆ ಇದು ಮೂರನೇ ಪಂದ್ಯವಾಗಿದ್ದು. ಈ ಹಿಂದಿನ ಮೂರು ಪಂದ್ಯಗಳನ್ನು ಸೋಲುವ ಮೂಲಕ ಆಫ್ರಿಕಾ ತಂಡ ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡಕ್ಕತೆ ಸಿಲುಕಿದೆ.


ಈ ಹಿಂದಿನ ಅಂದರೆ, ಇಂಗ್ಲೆಂಡ್ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯಗಳನ್ನು ದಕ್ಷಿಣ ಆಫ್ರಿಕಾ ತಂಡ ಸೋತಿತ್ತು. ಹೀಗಾಗಿ ಮೂರನೇ ಪಂದ್ಯವನ್ನು ಗೆಲ್ಲಲೇ ಬೇಕಾದ ಒತ್ತಡದಲ್ಲಿ ಡುಪ್ಲೆಸಿಸ್ ಬಳಗವಿದೆ. 

ಇನ್ನು ಟೂರ್ನಿಯಲ್ಲಿ ಭಾರತಕ್ಕೆ ಇದು ಮೊದಲ ಪಂದ್ಯವಾಗಿದ್ದು, ವಿಶ್ವಕಪ್ ಗೆಲ್ಲುವ ಫೇವರಿಟ್ ತಂಡಗಳ ಪಟ್ಟಿಯಲ್ಲಿ ಭಾರತ ಕೂಡ ಇದ್ದು, ಈ ಪಂದ್ಯವನ್ನು ಗೆದ್ದು ಗೆಲುವಿನ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡುವುದು ಭಾರತದ ಲೆಕ್ಕಾಚಾರವಾಗಿದೆ. ಹೀಗಾಗಿ ಇಂದಿನ ಪಂದ್ಯ ಜಿದ್ದಾಜಿದ್ದಿನಿಂದ ಕೂಡಿರಲಿದೆ.

ತಂಡಗಳು ಇಂತಿವೆ
ಭಾರತ
ಶಿಖರ್ ಧವನ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ (ನಾಯಕ), ಕೆಎಲ್ ರಾಹುಲ್, ಕೇದಾರ್ ಜಾಧವ್, ಎಂಎಸ್ ಧೋನಿ, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್, ಜಸ್ ಪ್ರೀತ್ ಬಮ್ರಾ

ದಕ್ಷಿಣ ಆಫ್ರಿಕಾ
ಕ್ವಿಂಟನ್ ಡಿ ಕಾಕ್, ಹಶೀಂ ಅಮ್ಲಾ, ಫಾಫ್ ಡು ಪ್ಲೆಸಿಸ್, ಆರ್ ವ್ಯಾನ್ ಡೆರ್ ಡಸೆನ್, ಡಿ ಮಿಲ್ಲರ್, ಜೆ.ಪಿ. ಡುಮಿನಿ, ಎ ಫೆಹಲುಕ್ವೇವೊ, ಸಿ ಮಾರಿಸ್, ಕೆ ರಾಬಾಡಾ, ಇಮ್ರಾನ್ ತಾಹಿರ್, ಟಿ ಶಂಶಿ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com