ವಿಂಡೀಸ್‌ ವಿರುದ್ಧದ ಪಂದ್ಯದಲ್ಲಿ ಮಿಚೆಲ್ ಸ್ಟಾರ್ಕ್‌ ವಿಶ್ವದಾಖಲೆ!

ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್ ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾದ ವೇಗಿ ಮಿಚೆಲ್ ಸ್ಟಾರ್ಕ್ ತಮ್ಮ ಮಾರಕ ಬೌಲಿಂಗ್ ಮೂಲಕ ವಿಶ್ವದಾಖಲೆ ನಿರ್ಮಾಣ ಮಾಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನಾಟಿಂಗ್ ಹ್ಯಾಮ್: ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್ ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾದ ವೇಗಿ ಮಿಚೆಲ್ ಸ್ಟಾರ್ಕ್ ತಮ್ಮ ಮಾರಕ ಬೌಲಿಂಗ್ ಮೂಲಕ ವಿಶ್ವದಾಖಲೆ ನಿರ್ಮಾಣ ಮಾಡಿದ್ದಾರೆ.
ನಿನ್ನೆ ವೆಸ್ಟ್‌ ಇಂಡೀಸ್‌ ವಿರುದ್ಧ 15 ರನ್‌ಗಳಿಂದ ಜಯ ಸಾಧಿಸುವಲ್ಲಿ ಆಸ್ಟ್ರೇಲಿಯಾಗೆ ನೆರವಾಗಿದ್ದ ವೇಗಿ ಮಿಚೆಲ್‌ ಸ್ಟಾರ್ಕ್, ಇದೇ ಪಂದ್ಯದಲ್ಲಿ ನೂತನ ಮೈಲಿಗಲ್ಲು ಸೃಷ್ಟಿಸಿದರು. ಏಕದಿನ ಮಾದರಿಯಲ್ಲಿ ಅತಿ ವೇಗವಾಗಿ 150 ವಿಕೆಟ್‌ಗಳು ಪಡೆದ ವಿಶ್ವದ ಮೊದಲನೇ ಬೌಲರ್‌ ಎಂಬ ಖ್ಯಾತಿಗೆ ಗುರುವಾರ ಸ್ಟಾರ್ಕ್‌ ಭಾಜನರಾದರು. ಈ ದಾಖಲೆ ಮಾಡಲು ಅವರು 77 ಪಂದ್ಯಗಳನ್ನು ತೆಗೆದುಕೊಂಡಿದ್ದಾರೆ. 
ಈ ಹಿಂದೆ ಈ ದಾಖಲೆ ಪಾಕಿಸ್ತಾನದ ಮಾಜಿ ಬೌಲರ್ ಸಕ್ಲೈನ್‌ ಮುಷ್ತಾಕ್ ಅವರ ಹೆಸರಿಲ್ಲಿತ್ತು. ಮುಷ್ತಾಕ್ 78 ಪಂದ್ಯಗಳಿಂದ ಈ ದಾಖಲೆ ಮಾಡಿದ್ದರು. ಇದೀಗ ಅವರ ದಾಖಲೆಯನ್ನುಮಿಚೆಲ್ ಸ್ಟಾರ್ಕ್‌ ಮುರಿದಿದ್ದಾರೆ.
ವೆಸ್ಟ್‌ ಇಂಡೀಸ್‌ ವಿರುದ್ಧದ ಐಸಿಸಿ ವಿಶ್ವಕಪ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ 15 ರನ್‌ ಗಳಿಂದ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಮಿಚೆಲ್‌ 10 ಓವರ್‌ಗೆ 46 ರನ್‌ ನೀಡಿ 5 ವಿಕೆಟ್‌ ಪಡೆದರು.
ಇನ್ನು ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 15 ರನ್ ಗಳ ರೋಚಕ ಗೆಲುವು ಸಾಧಿಸಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com