ಐಸಿಸಿ ವಿಶ್ವಕಪ್ 2019: ವಿಶ್ವಕಪ್ ಇತಿಹಾಸದಲ್ಲಿ ಭಾರತದ ನಾಲ್ಕನೇ ಗರಿಷ್ಠ ಮೊತ್ತ

ಹಾಲಿ ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ದದ ಪಂದ್ಯದಲ್ಲಿ ಭಾರತದ 352 ರನ್ ಗಳ ಮೊತ್ತ ವಿಶ್ವಕಪ್ ಇತಿಹಾಸದಲ್ಲಿ ಟೀಂ ಇಂಡಿಯಾ ಗಳಿಸಿದ ನಾಲ್ಕನೇ ಗರಿಷ್ಛ ಮೊತ್ತವಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಲಂಡನ್: ಹಾಲಿ ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ದದ ಪಂದ್ಯದಲ್ಲಿ ಭಾರತದ 352 ರನ್ ಗಳ ಮೊತ್ತ ವಿಶ್ವಕಪ್ ಇತಿಹಾಸದಲ್ಲಿ ಟೀಂ ಇಂಡಿಯಾ ಗಳಿಸಿದ ನಾಲ್ಕನೇ ಗರಿಷ್ಛ ಮೊತ್ತವಾಗಿದೆ.
ಇಂದು ನಡೆದ ಪಂದ್ಯದಲ್ಲಿ ಭಾರತ ತಂಡ ನಿಗದಿತ 50 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ ಶಿಖರ್ ಧವನ್ ಭರ್ಜರಿ ಶತಕ, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಅವರ ಆಕರ್ಷಕ ಅರ್ಧಶತಕದ ನೆರವಿನಿಂದ 352 ರನ್ ಗಳಿಸಿ, ಆಸ್ಟ್ರೇಲಿಯಾಗೆ 353 ರನ್ ಗಳ ಬೃಹತ್ ಟಾರ್ಗೆಟ್ ನೀಡಿದೆ.
ಇನ್ನು ಭಾರತದ ಇಂದಿನ ರನ್ ಗಳಿಕೆ ವಿಶ್ವಕಪ್ ಇತಿಹಾಸದಲ್ಲೇ ಟೀಂ ಇಂಡಿಯಾದ ನಾಲ್ಕನೇ ಗರಿಷ್ಛ ಮೊತ್ತವಾಗಿದೆ. ಇದಕ್ಕೂ ಮೊದಲು 2007ರಲ್ಲಿ ಪೋರ್ಟ್ ಆಫ್ ಸ್ಪೇನ್ ನಲ್ಲಿ ಭಾರತ ತಂಡ ಬರ್ಮುಡಾ ವಿರುದ್ಧ 413 ರನ್ ಗಳಿಸಿತ್ತು. ಆ ಪಂದ್ಯದಲ್ಲಿ ವೀರೇಂದ್ರ ಸೆಹ್ವಾಗ್ ಶತಕ ಗಳಿಸಿದ್ದರೆ, ಸಚಿನ್, ಯುವರಾಜ್ ಸಿಂಗ್ ಮತ್ತು ಸೌರವ್ ಗಂಗೂಲಿ ಅರ್ಧಶತಕ ಗಳಿಸಿದ್ದರು. ಇದು ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದ ಗರಿಷ್ಠ ಮೊತ್ತವಾಗಿದೆ.
ಇದಕ್ಕೂ ಮೊದಲು ಅಂದರೆ 1999ರಲ್ಲಿ ಭಾರತ ತಂಡ ಶ್ರೀಲಂಕಾ ವಿರುದ್ಧ 373 ರನ್, 2011ರಲ್ಲಿ ಮೀರ್ ಪುರ್ ನಲ್ಲಿ ಬಾಂಗ್ಲಾದೇಶ ವಿರುದ್ಧ 370 ರನ್ ಮತ್ತು 2011ರಲ್ಲಿ ಇಂಗ್ಲೆಂಡ್ ವಿರುದ್ಧ ಬೆಂಗಳೂರಿನಲ್ಲಿ 338 ರನ್ ಗಳಿಸಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com