ಪಾಕ್ ಕ್ರಿಕೆಟ್ ತಂಡವನ್ನು ಬ್ಯಾನ್ ಮಾಡುವಂತೆ ಅರ್ಜಿ ದಾಖಲು, ಪಿಸಿಬಿಗೆ ಕೋರ್ಟ್ ನೋಟಿಸ್!

ಪಾಕಿಸ್ತಾನ ಕ್ರಿಕೆಟ್ ತಂಡ ಮತ್ತು ಪಾಕಿಸ್ತಾನ ಕ್ರಿಕೆಟ್ ಆಯ್ಕೆ ಸಮಿತಿಯನ್ನು ಬ್ಯಾನ್ ಮಾಡುವಂತೆ ಕೋರ್ಟ್ ಗೆ ವ್ಯಕ್ತಿಯೊಬ್ಹರು ಅರ್ಜಿ ಹಾಕಿದ್ದಾರೆ. ಅಚ್ಚರಿ ಎಂದರೆ ಈ ಅರ್ಜಿಗೆ ಸಂಬಂಧಿಸಿದಂತೆ ಕೋರ್ಟ್ ಕೂಡ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ನೋಟಿಸ್ ಕೂಡ ಜಾರಿ ಮಾಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಇಸ್ಲಾಮಾಬಾದ್: ಭಾರತದ ವಿರುದ್ಧದ ಹೀನಾಯ ಸೋಲಿನ ಬೆನ್ನಲ್ಲೇ ಪಾಕಿಸ್ತಾನ ಕ್ರಿಕೆಟ್ ತಂಡ ಮತ್ತು ಪಾಕಿಸ್ತಾನ ಕ್ರಿಕೆಟ್ ಆಯ್ಕೆ ಸಮಿತಿಯನ್ನು ಬ್ಯಾನ್ ಮಾಡುವಂತೆ ಕೋರ್ಟ್ ಗೆ ವ್ಯಕ್ತಿಯೊಬ್ಹರು ಅರ್ಜಿ ಹಾಕಿದ್ದಾರೆ. ಅಚ್ಚರಿ ಎಂದರೆ ಈ ಅರ್ಜಿಗೆ ಸಂಬಂಧಿಸಿದಂತೆ ಕೋರ್ಟ್ ಕೂಡ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ನೋಟಿಸ್ ಕೂಡ ಜಾರಿ ಮಾಡಿದೆ.
ಭಾರತದ ವಿರುದ್ಧದ ಹೀನಾಯ ಸೋಲಿನ ಬೆನ್ನಲ್ಲೇ ಹೀರೋಗಳಾಗಿದ್ದ ಪಾಕಿಸ್ತಾನಿ ಕ್ರಿಕೆಟಿಗರು ಇದೀಗ ಪಾಕಿಸ್ತಾನದ ಅಭಿಮಾನಿಗಳಿಗೆ ಅಕ್ಷರಶಃ ವಿಲನ್ ಗಳಾಗಿದ್ದಾರೆ. ಭಾರತದ ವಿರುದ್ಧ ಸೋಲನ್ನು ಜೀರ್ಣಿಸಿಕೊಳ್ಳಲಾಗದ ಕೆಲ 'ವಿರೋಚಿತ' ಅಭಿಮಾನಿಗಳು ತಮ್ಮದೇ ಕ್ರಿಕೆಟಿಗರನ್ನು ನಿಷೇಧಿಸುವಂತೆ ಕೋರ್ಟ್ ಮೊರೆ ಹೋಗಿದ್ದಾರೆ. ಹೌದು.. ವ್ಯಕ್ತಿಯೊಬ್ಬರು ಪಾಕಿಸ್ತಾನ ಕ್ರಿಕೆಟ್ ತಂಡ ಹಾಗೂ ಆ ತಂಡವನ್ನು ಆಯ್ಕೆ ಮಾಡಿದ ಆಯ್ಕೆ ಸಮಿತಿಯನ್ನು ಕೂಡಲೇ ನಿಷೇಧಿಸುವಂತೆ ಗುಜ್ರನ್ ವಾಲಾ ಸಿವಿಲ್ ಕೋರ್ಟ್ ನಲ್ಲಿ ಅರ್ಜಿ ಹಾಕಿದ್ದಾರೆ.
ಈ ಕುರಿತಂತೆ ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿದ್ದು, ದೂರು ನೀಡಿದ ಅರ್ಜಿದಾರನ ಹೆಸರನ್ನು ಮಾತ್ರ ಬಹಿರಂಗಪಡಿಸಿಲ್ಲ. ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡದ ಹೀನಾಯ ಪ್ರದರ್ಶನದಿಂದಾಗಿ ದೇಶದ ಮಾನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಾಜಾಗಿದ್ದು, ಇದಕ್ಕೆ ಕಾರಣಕರ್ತರಾದ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಹಾಗೂ ಮಾಜಿ ನಾಯಕ ಹಾಗೂ ಹಾಲಿ ಆಯ್ಕೆ ಸಮಿತಿ ಅಧ್ಯಕ್ಷ ಇಂಜಮಾಮ್ ಉಲ್ ಹಕ್ ರನ್ನು ನಿಷೇಧಿಸುವಂತೆ ಅರ್ಜಿದಾರ ದೂರಿನಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಇನ್ನು ಅರ್ಜಿ ಸ್ವೀಕರಿಸಿರುವ ಕೋರ್ಟ್ ಈ ಸಂಬಂಧ ಪಿಸಿಬಿ ಮತ್ತು ಆಯ್ಕೆ ಸಮಿತಿಗೆ ನೋಟಿಸ್ ಕೂಡ ಜಾರಿ ಮಾಡಿದೆ. ಒಟ್ಟಾರೆ ಪಾಕಿಸ್ತಾನದ ವಿರುದ್ಧದ ಭಾರತದ ಗೆಲುವು ಪಾಕಿಸ್ತಾನ ಕ್ರಿಕೆಟ್ ವಲಯದಲ್ಲಿ ಅಲ್ಲೋಲ ಕಲ್ಲೋಲವನ್ನೇ ಸೃಷ್ಟಿ ಮಾಡಿದ್ದು, ಅಭಿಮಾನಿಗಳ ಈ ಹೈಡ್ರಾಮ ಇನ್ನು ಅದೆಲ್ಲಿಗೆ ಮುಟ್ಟುತ್ತದೆಯೋ ಕಾದು ನೋಡಬೇಕಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com