ವಿಶ್ವಕಪ್: ಟೀಂ ಇಂಡಿಯಾಗೆ ಆರ್ಸಿಬಿ ತಂಡದ ವೇಗಿ ನವದೀಪ್ ಸೈನಿ!

ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾಗೆ ಗಾಯದ ಸಮಸ್ಯೆಗಳು ಎದುರಾಗುತ್ತಿದ್ದು ಶಿಖರ್ ಧವನ್ ಹೊರಬಂದಿದ್ದಾರೆ. ಇನ್ನು ಟೀಂ ಇಂಡಿಯಾ ವೇಗಿ ಭುವನೇಶ್ವರ್ ಕುಮಾರ್...

Published: 25th June 2019 12:00 PM  |   Last Updated: 25th June 2019 12:19 PM   |  A+A-


Navdeep Saini

ನವದೀಪ್ ಶೈನಿ

Posted By : VS VS
Source : Online Desk
ಲಂಡನ್: ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾಗೆ ಗಾಯದ ಸಮಸ್ಯೆಗಳು ಎದುರಾಗುತ್ತಿದ್ದು ಶಿಖರ್ ಧವನ್ ಹೊರಬಂದಿದ್ದಾರೆ. ಇನ್ನು ಟೀಂ ಇಂಡಿಯಾ ವೇಗಿ ಭುವನೇಶ್ವರ್ ಕುಮಾರ್ ಗೂ ಗಾಯದ ಸಮಸ್ಯೆಯಾಗಿ ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ. ಈ ನಡುವೆ ಆರ್ಸಿಬಿ ತಂಡದ ವೇಗಿ ನವದೀಪ್ ಸೈನಿ ತಂಡವನ್ನು ಕೂಡಿಕೊಂಡಿದ್ದಾರೆ.

ಯುವ ಬೌಲರ್ ನವದೀಪ್ ಸೈನಿ ಮ್ಯಾಂಜೆಸ್ಟರ್ ಗೆ ಆಗಮಿಸಿದ್ದು ನೆಟ್ ಬೌಲರ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಅಲ್ಲದೇ ಟೀಂ ಇಂಡಿಯಾದೊಂದಿಗೆ ಅವರು ತರಬೇತಿ ಪಡೆಯಲಿದ್ದಾರೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ.

ಬಿಸಿಸಿಐ ಏಪ್ರಿಲ್ 15ರಂದು ಬಿಡುಗಡೆ ಮಾಡಿದ್ದ ಸ್ಟ್ಯಾಂಡ್ ಬೈ ಆಟಗಾರರ ಪಟ್ಟಿಯಲ್ಲಿ ಶೈನಿ ಸ್ಥಾನ ಪಡೆದಿದ್ದರು. ಕಳೆದ ಐಪಿಎಲ್ ನಲ್ಲಿ ಶೈನಿ ಆರ್ಸಿಬಿ ಪರ ಉತ್ತಮ ಪ್ರದರ್ಶನ ನೀಡಿದ್ದರು.
Stay up to date on all the latest ಕ್ರಿಕೆಟ್ news with The Kannadaprabha App. Download now
facebook twitter whatsapp