ನಾನು ಆರಾಮಾಗಿದ್ದೇನೆ, ಭಯಬೇಡ: ವಿಂಡೀಸ್ ದೈತ್ಯ ಬ್ರಿಯಾನ್ ಲಾರಾ

ನಾನು ಆರಾಮಾಗಿದ್ದೇನೆ, ಭಯಬೇಡ, ನಾಳೆ ಹೊಟೆಲ್ ಗೆ ಆಗಮಿಸುತ್ತೇನೆ ಎಂದು ವೆಸ್ಟ್ ಇಂಡೀಸ್ ಕ್ರಿಕೆಟ್ ಲೆಜೆಂಡ್ ಬ್ರಿಯಾನ್ ಲಾರಾ ಹೇಳಿದ್ದಾರೆ.

Published: 26th June 2019 12:00 PM  |   Last Updated: 26th June 2019 01:55 AM   |  A+A-


I am fine, will be back in hotel room tomorrow says Windies giant Brian Lara

ಸಂಗ್ರಹ ಚಿತ್ರ

Posted By : SVN SVN
Source : ANI
ಮುಂಬೈ: ನಾನು ಆರಾಮಾಗಿದ್ದೇನೆ, ಭಯಬೇಡ, ನಾಳೆ ಹೊಟೆಲ್ ಗೆ ಆಗಮಿಸುತ್ತೇನೆ ಎಂದು ವೆಸ್ಟ್ ಇಂಡೀಸ್ ಕ್ರಿಕೆಟ್ ಲೆಜೆಂಡ್ ಬ್ರಿಯಾನ್ ಲಾರಾ ಹೇಳಿದ್ದಾರೆ.

ನಿನ್ನೆ ಲಾರಾ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ವಿಚಾರ ಮಾಧ್ಯಮಗಳಲ್ಲಿ ಪ್ರಸಾರವಾಗಿ ಲಾರಾ ಆರೋಗ್ಯದ ಕುರಿತು ಅಭಿಮಾನಿಗಳಲ್ಲಿ ತೀವ್ರ ಆತಂಕ ಮೂಡಿಸಿತ್ತು. ಆದರೆ ಇದೀಗ ಸ್ವತಃ ಲಾರಾ ಅವರೇ ಆಡಿಯೋ ಮೂಲಕ ತಮ್ಮ ಅಭಿಮಾನಿಗಳಿಗೆ ಆರೋಗ್ಯದ ಕುರಿತು ಮಾಹಿತಿ ನೀಡಿದ್ದಾರೆ.

ಲಾರಾ ಅವರು ಮಾತನಾಡಿರುವ ಆಡಿಯೋವನ್ನು ವೆಸ್ಟ್ ಇಂಡೀಸ್ ಕ್ರಿಕೆಟ್ ಬೋರ್ಡ್ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಅಪ್ಲೋಡ್ ಮಾಡಿದೆ. ಆಡಿಯೋದಲ್ಲಿ ಲಾರಾ, ಎದೆ ನೋವು ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಆಸ್ಪತ್ರೆಗೆ ಬಂದು ಪರಿಶೀಲಿಸಿರುವುದಾಗಿ ಖಚಿತಪಡಿಸಿದ್ದಾರೆ. ಅಲ್ಲದೆ ತಾವು ಆರಾಮವಾಗಿದ್ದು, ನಾಳೆ (ಬುಧವಾರ) ಹೋಟೆಲ್ ರೂಮ್‌ಗೆ ಮರಳುವುದಾಗಿ ಖಚಿತಪಡಿಸಿದ್ದಾರೆ.

ಮೂಲಗಳ ಪ್ರಕಾರ ಹೃದಯಕ್ಕೆ ರಕ್ತವನ್ನು ರವಾನಿಸುವ ಕಿರಿದಾದ ರಕ್ತನಾಳಗಳಲ್ಲಿ ತಡೆಯುಂಟಾಗಿರುವ ಹಿನ್ನಲೆಯಲ್ಲಿ ಲಾರಾಗೆ ಎದೆ ನೋವು ಕಾಣಿಸಿಕೊಂಡಿದೆ ಎನ್ನಲಾಗಿದೆ. ಈ ಸಮಸ್ಯೆಗಾಗಿ ಎರಡು ವರ್ಷಗಳ ಹಿಂದೆಯೇ ಲಾರಾ ಚಿಕಿತ್ಸೆ ಪಡೆದುಕೊಂಡಿದ್ದರು. ಇದೀಗ ಮತ್ತೆ ನೋವು ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಆಸ್ಪತ್ರೆಗೆ ತೆರಳಿ ವೈದಕೀಯ ಪರೀಕ್ಷೆ ಮಾಡಿಸಿಕೊಂಡಿದ್ದಾರೆ.
Stay up to date on all the latest ಕ್ರಿಕೆಟ್ news with The Kannadaprabha App. Download now
facebook twitter whatsapp