ಕ್ಯಾಪ್ಚನ್ ಕೊಹ್ಲಿಯಿಂದ ಸೌರವ್ ಗಂಗೂಲಿಯ ಮತ್ತೊಂದು ದಾಖಲೆ ಪತನ

ತಾವಾಡಿದ ಪ್ರತೀ ಪಂದ್ಯದಲ್ಲೂ ಒಂದಲ್ಲ ಒಂದು ದಾಖಲೆ ಮುರಿಯುತ್ತಿರುವ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಇದೀಗ ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲೂ ಅಪರೂಪದ ದಾಖಲೆ ನಿರ್ಮಾಣ ಮಾಡಿದ್ದಾರೆ.

Published: 06th March 2019 12:00 PM  |   Last Updated: 06th March 2019 12:20 PM   |  A+A-


Captain Kohli beats Sourav ganguly's Rare record

ಕ್ಯಾಪ್ಚನ್ ಕೊಹ್ಲಿ

Posted By : SVN SVN
Source : Online Desk
ನಾಗಪುರ: ತಾವಾಡಿದ ಪ್ರತೀ ಪಂದ್ಯದಲ್ಲೂ ಒಂದಲ್ಲ ಒಂದು ದಾಖಲೆ ಮುರಿಯುತ್ತಿರುವ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಇದೀಗ ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲೂ ಅಪರೂಪದ ದಾಖಲೆ ನಿರ್ಮಾಣ ಮಾಡಿದ್ದಾರೆ.

ಮಹಾರಾಷ್ಟ್ರದ ನಾಗಪುರದಲ್ಲಿ ನಿನ್ನೆ ನಡೆದ 2ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದ ವಿರಾಟ್ ಕೊಹ್ಲಿ, ಇದೀಗ ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರ ದಾಖಲೆಯೊಂದನ್ನು ಹಿಂದಕ್ಕೆ ಹಾಕಿದ್ದಾರೆ.

ಹೌದು.. ಏಕದಿನ ಕ್ರಿಕೆಟ್ ನಲ್ಲಿ ಭಾರತದ ಪರ ಅತೀ ಹೆಚ್ಚು ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದ ಆಟಗಾರರ ಪಟ್ಟಿಯಲ್ಲಿ ಕೊಹ್ಲಿ 2ನೇ ಸ್ಥಾನಕ್ಕೇರಿದ್ದು, ಗಂಗೂಲಿ ಅವರನ್ನು ಮೂರನೇ ಸ್ಥಾನಕ್ಕೆ ತಳ್ಳಿದ್ದಾರೆ. ನಿನ್ನೆಯ ಪಂದ್ಯವೂ ಸೇರಿದಂತೆ ಏಕದಿನದಲ್ಲಿ ಕೊಹ್ಲಿ (224 ಪಂದ್ಯಗಳು) ಒಟ್ಟು 32 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದು, 31 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಗಳಿಸಿರುವ ದಾದಾ (308 ಪಂದ್ಯಗಳು)  ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ. 

ಇನ್ನು ಪಟ್ಟಿಯಲ್ಲಿ 62 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಗಳಿಸಿರುವ ಸವ್ಯಸಾಚಿ ಆಟಗಾರ ಸಚಿನ್ ತೆಂಡೂಲ್ಕರ್ (463 ಪಂದ್ಯಗಳು) ಅಗ್ರ ಸ್ಥಾನದಲ್ಲಿ ಮುಂದುವರೆದಿದ್ದು, 27 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಗಳಿಸಿರುವ ಯುವರಾಜ್ ಸಿಂಗ್ (301 ಪಂದ್ಯಗಳು) 4ನೇ ಸ್ಥಾನದಲ್ಲಿ, 23 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಗಳಿಸಿರುವ ಸೆಹ್ವಾಗ್ (241 ಪಂದ್ಯಗಳು) 5 ಮತ್ತು 20 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಗಳಿಸಿರುವ ಮಹೇಂದ್ರ ಸಿಂಗ್ ಧೋನಿ (337 ಪಂದ್ಯಗಳು) 6ನೇ ಸ್ಥಾನದಲ್ಲಿದ್ದಾರೆ.

ನಿನ್ನೆಯ ಪಂದ್ಯದಲ್ಲಿ ವಿರಾಟ್ ಕೊಹ್ಲಿ 120 ಎಸೆತಗಳಲ್ಲಿ 11 ರನ್ ಗಳಿಸಿ ಆಸಿಸ್ ಗೆ ಭಾರತ ಸವಾಲಿನ ಗುರಿ ನೀಡಲು ಕೊಹ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು.
Stay up to date on all the latest ಕ್ರಿಕೆಟ್ news
Poll
Marraige

ಮಹಿಳೆಯರ ಮದುವೆಯ ಕನಿಷ್ಠ ವಯಸ್ಸನ್ನು 18 ರಿಂದ ಹೆಚ್ಚಿಸಬೇಕೆ?


Result
ಹೌದು
ಬೇಡ
ಗೊತ್ತಿಲ್ಲ
flipboard facebook twitter whatsapp