ಹುತಾತ್ಮ ಯೋಧರ ಕುಟುಂಬಗಳಿಗೆ ಮೊದಲ ಪಂದ್ಯದ ಆದಾಯ ದೇಣಿಗೆ: ಸಿಎಸ್‌ಕೆ

ಚೆನ್ನೈ ಸೂಪರ್ ಕಿಂಗ್ಸ್ ತಂಡವು ಪ್ರಸಕ್ತ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮೊದಲ ಪಂದ್ಯದ ಆದಾಯವನ್ನು ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರ ಕುಟುಂಬಗಳಿಗೆ ದೇಣಿಗೆ ನೀಡಲಿದೆ...
ಸಿಎಸ್‌ಕೆ
ಸಿಎಸ್‌ಕೆ
ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್ ತಂಡವು ಪ್ರಸಕ್ತ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮೊದಲ ಪಂದ್ಯದ ಆದಾಯವನ್ನು ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರ ಕುಟುಂಬಗಳಿಗೆ ದೇಣಿಗೆ ನೀಡಲಿದೆ ಎಂದು ತಂಡದ ನಿರ್ದೇಶಕರು ಬುಧವಾರ ತಿಳಿಸಿದ್ದಾರೆ.
ಉಗ್ರರ ಭಯಾನಕ ದಾಳಿಯಲ್ಲಿ 40ಕ್ಕೂ ಹೆಚ್ಚು ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದರು. ಈ ಹಿನ್ನೆಲೆಯಲ್ಲಿ ಇದೇ 23ರಂದು ಚೆನ್ನೈ ಚಿಪಕ್ ಕ್ರೀಡಾಂಗಣದಲ್ಲಿ ನಡೆಯುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ನಡುವಿನ ಪ್ರಸಕ್ತ ಆವೃತ್ತಿಯ ಮೊದಲ ಪಂದ್ಯದ ಟಿಕೆಟ್ ಮಾರಾಟದಿಂದ ಬರುವ ಆದಾಯವನ್ನು ಹುತಾತ್ಮ ಯೋಧರ ಕುಟುಂಬಗಳಿಗೆ ನೀಡಲಾಗುವುದು ಎಂದು ಸಿಎಸ್‌ಕೆ ತಂಡದ ನಿರ್ದೇಶಕ ರಾಕೇಶ್ ಸಿಂಗ್ ತಿಳಿಸಿದ್ದಾರೆ.
ತಂಡದ ನಾಯಕ ಹಾಗೂ ಭಾರತೀಯ ಸೇನೆಯ ಗೌರವಾನ್ವಿತ ಲೆಫ್ಟಿನೆಂಟ್ ಕರ್ನಲ್ ಮಹೇಂದ್ರ ಸಿಂಗ್ ಧೋನಿ ಅವರು ದೇಣಿಗೆಯ ಚೆಕ್ ವಿತರಿಸಿಲಿದ್ದಾರೆ ಎಂದು ಅವರು ಹೇಳಿದ್ದಾರೆ. 
ಹಾಲಿ ಚಾಂಪಿಯನ್ ಹಾಗೂ ರಾಯಲ್ ಚಾಲೆಂಜರ್ಸ್ ತಂಡಗಳ ಮೊದಲ ಪಂದ್ಯದ ಟಿಕೆಟ್‌ಗಳು ಆರಂಭಿಕ ದಿನದ ಕೆಲವೇ ಗಂಟೆಗಳಲ್ಲಿ ಮಾರಾಟವಾಗಿದ್ದವು. 
ಫೆ. 14 ರಂದು 2,500 ಮಂದಿ ಸಿಆರ್‌ಪಿಎಫ್ ಯೋಧರು, ಜಮ್ಮುವಿನಿಂದ ಶ್ರೀನಗರಕ್ಕೆ 78 ಬಸ್  ಗಳ ಮೂಲಕ ತೆರಳುತ್ತಿದ್ದರು. ಈ ವೇಳೆ ಪಾಕಿಸ್ತಾನ ಬೆಂಬಲಿತ ಜೈಷ್-ಈ-ಮೊಹಮ್ಮದ್ ಉಗ್ರ ಸಂಘಟನೆ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 40 ಕ್ಕೂ ಹೆಚ್ಚು ಯೋಧರು ಹುತಾತ್ಮರಾಗಿದ್ದರು. ಇಲ್ಲಿಯವರೆಗೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮತ್ತು ಇತರೆ ಸಂಘ ಸಂಸ್ಥೆಗಳ ಹುತಾತ್ಮ ಯೋಧರ ಕುಟುಂಬಗಳಿಗೆ ದೇಣಿಗೆ ನೀಡಿದ್ದವು. ಇದೀಗ ಚೆನ್ನೈ ಸೂಪರ್ ಕಿಂಗ್ಸ್ ಪ್ರಾಂಚೈಸಿ ಕೂಡ ಮೊದಲ ಪಂದ್ಯದ ಆದಾಯವನ್ನು ಹುತಾತ್ಮ ಯೋಧರಿಗೆ ನೀಡಲು ಮುಂದಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com