ಬೌಂಡರಿ ಗೆರೆ ಹತ್ತಿರಕ್ಕೆ ಓಡಿ ಕೀಪರ್ ದಿನೇಶ್ ಕಾರ್ತಿಕ್ ಅದ್ಭುತ ಕ್ಯಾಚ್, ವಿಡಿಯೋ ವೈರಲ್

ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಕೀಪರ್ ದಿನೇಶ್ ಕಾರ್ತಿಕ್ ಬೌಂಡರಿ ಗೆರೆಯ ಹತ್ತಿರದವರೆಗೂ ಓಡಿ ಅದ್ಭುತ ಕ್ಯಾಚ್ ಹಿಡಿದಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ.

Published: 06th May 2019 12:00 PM  |   Last Updated: 06th May 2019 04:05 AM   |  A+A-


Dinesh Karthik

ದಿನೇಶ್ ಕಾರ್ತಿಕ್

Posted By : VS VS
Source : Online Desk
ಮುಂಬೈ: ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಕೀಪರ್ ದಿನೇಶ್ ಕಾರ್ತಿಕ್ ಬೌಂಡರಿ ಗೆರೆಯ ಹತ್ತಿರದವರೆಗೂ ಓಡಿ ಅದ್ಭುತ ಕ್ಯಾಚ್ ಹಿಡಿದಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ.

ಮುಂಬೈ ತಂಡದ ಆರಂಭಿಕ ಆಟಗಾರ ಕ್ವಿಂಟನ್ ಡಿಕಾಕ್ ಬಾರಿಸಿದ ಚೆಂಡು ಹಿಂಬದಿಗೆ ಹೋಗಿದ್ದು ಕೀಪಿಂಗ್ ಮಾಡುತ್ತಿದ್ದ ದಿನೇಶ್ ಕಾರ್ತಿಕ್ ಓಡಿ ಹೋಗಿ ಕ್ಯಾಚ್ ಹಿಡಿದಿದ್ದಾರೆ. ಈ ಮೂಲಕ ಉತ್ತಮ ಜೊತೆಯಾಟಕ್ಕೆ ಬ್ರೇಕ್ ಹಾಕಿದರು.

ಒಟ್ಟಿನಲ್ಲಿ ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಸೋಲುವ ಮೂಲಕ ಪ್ಲೇ ಆಫ್ ಕನಸು ನುಚ್ಚುನೂರಾಗಿದೆ. ಮೊದಲು ಬ್ಯಾಟಿಂಗ್ ಮಾಡಿದ್ದ ಕೋಲ್ಕತ್ತಾ ನಿಗದಿತ ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 133 ರನ್ ಪೇರಿಸಿತ್ತು. 134 ರನ್ ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡ 1 ವಿಕೆಟ್ ನಷ್ಟಕ್ಕೆ 134 ರನ್ ಬಾರಿಸಿ 9 ವಿಕೆಟ್ ಗಳಿಂದ ಗೆಲುವಿನ ನಗೆ ಬೀರಿತು.
Stay up to date on all the latest ಕ್ರಿಕೆಟ್ news with The Kannadaprabha App. Download now
facebook twitter whatsapp