
ವಿಜಯ್ ಶಂಕರ್
Source : PTI
ಲಂಡನ್: ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿ ಆರಂಭವಾಗುವ ಮುನ್ನವೇ ಗಾಯಕ್ಕೆ ತುತ್ತಾಗಿದ್ದ ಆಲ್ ರೌಂಡರ್ ವಿಜಯ್ ಶಂಕರ್ ಅವರ ಸ್ಕ್ಯಾನಿಂಗ್ ವರದಿ ಬಹಿರಂಗವಾಗಿದ್ದು, ಯಾವುದೇ ಫ್ರಾಕ್ಚರ್ ಇಲ್ಲ ಎಂದು ವೈದ್ಯರು ವರದಿ ನೀಡಿದ್ದಾರೆ.
ನಿನ್ನೆ ನ್ಯೂಜಿಲೆಂಡ್ ವಿರುದ್ಧದ ಅಭ್ಯಾಸ ಪಂದ್ಯಕ್ಕೂ ಮುನ್ನ ನೆಟ್ ಪ್ರಾಕ್ಟೀಸ್ ಮಾಡುತ್ತಿದ್ದ ವೇಳೆ ಟೀಂ ಇಂಡಿಯಾ ಅಲ್ರೌಂಡರ್ ವಿಜಯ್ ಶಂಕರ್ ಇಂಜುರಿಗೆ ತುತ್ತಾಗಿ ಆತಂಕ ಸೃಷ್ಟಿಸಿದ್ದರು. ಇದೀಗ ವಿಜಯ್ ಶಂಕರ್ ಫ್ರಾಕ್ಚರ್ ಆಗಿಲ್ಲ ಎಂದು ವೈದ್ಯರು ವರದಿ ನೀಡಿದ್ದು, ಟೀಂ ಇಂಡಿಯಾ ನಿರಾಳವಾಗಿದೆ.
ವಿಜಯ್ ಶಂಕರ್ ಅವರು ಈಗ ಗಾಯದ ಸಮಸ್ಯೆಯಿಂದ ಹೊರ ಬಂದಿದ್ದು, ನಾಲ್ಕನೇ ಕ್ರಮಾಂಕದಲ್ಲಿ ಆಡಲು ಸಜ್ಜಾಗುತ್ತಿದ್ದಾರೆ.
ಮೇ.30 ರಿಂದ ವಿಶ್ವಕಪ್ ಟೂರ್ನಿ ಆರಂಭಗೊಳ್ಳಲಿದೆ. ಜೂನ್ 5 ರಂದು ಭಾರತ ಹಾಗೂ ದಕ್ಷಿಣ ಆಫ್ರಿಕಾ ಮುಖಾಮುಖಿಯಾಗಲಿದೆ. ಇದಕ್ಕಾಗಿ ಟೀಂ ಇಂಡಿಯಾ ಕಠಿಣ ಅಭ್ಯಾಸದಲ್ಲಿ ತೊಡಗಿದೆ. ಈ ಬಾರಿ ವಿಶ್ವಕಪ್ ಗೆಲ್ಲೋ ನೆಚ್ಚಿನ ತಂಡಗಳಲ್ಲಿ ಟೀಂ ಇಂಡಿಯಾ ಮುಂಚೂಣಿಯಲ್ಲಿದೆ.
Stay up to date on all the latest ಕ್ರಿಕೆಟ್ news