ನೆಟ್ ಅಭ್ಯಾಸದ ವೇಳೆ ಟೀಂ ಇಂಡಿಯಾ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾಗೆ ಗಾಯ!

ಪ್ರವಾಸಿ ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ ನವೆಂಬರ್ 3ರಿಂದ ಆರಂಭಗೊಳ್ಳಲಿದ್ದು ನೆಟ್ ಅಭ್ಯಾಸದ ವೇಳೆ ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಗಾಯಗೊಂಡಿದ್ದಾರೆ.
ರೋಹಿತ್ ಶರ್ಮಾ
ರೋಹಿತ್ ಶರ್ಮಾ

ನವದೆಹಲಿ: ಪ್ರವಾಸಿ ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ ನವೆಂಬರ್ 3ರಿಂದ ಆರಂಭಗೊಳ್ಳಲಿದ್ದು ನೆಟ್ ಅಭ್ಯಾಸದ ವೇಳೆ ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಗಾಯಗೊಂಡಿದ್ದಾರೆ.

ರೋಹಿತ್ ಶರ್ಮಾ ಟೀಂ ಇಂಡಿಯಾದ ನಾಯಕತ್ವದ ಜವಾಬ್ದಾರಿ ಹೊತ್ತುಕೊಂಡಿದ್ದು ಈ ವೇಳೆ ಅವರು ಗಾಯಗೊಂಡಿರುವುದು ತಂಡಕ್ಕೆ ಹಿನ್ನಡೆಯಾಗುವ ಸಾಧ್ಯತೆ ಇದೆ.

ಅಭ್ಯಾಸದ ವೇಳೆ ಚೆಂಡು ರೋಹಿತ್ ಶರ್ಮಾರ ಕಾಲಿಗೆ ಬಡಿದು ತೀವ್ರ ನೋವು ಕಾಣಿಸಿಕೊಂಡಿದ್ದರಿಂದ ತಕ್ಷಣ ಅಭ್ಯಾಸವನ್ನು ನಿಲ್ಲಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com