ನಿರೂಪಕರಾಗಿ ಹೊಸ ಇನ್ನಿಂಗ್ಸ್ ಆರಂಭಿಸಲಿದ್ದಾರೆಯೇ ಎಂ ಎಸ್ ಧೋನಿ? 

ಭಾರತ ಕ್ರಿಕೆಟ್ ತಂಡದ ಆಟಗಾರ, ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ನಿರೂಪಕರಾಗಿ ಹೊಸ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆ ಇದೆ.

Published: 06th November 2019 12:30 PM  |   Last Updated: 08th November 2019 08:49 AM   |  A+A-


M S Dhoni

ಎಂ ಎಸ್ ಧೋನಿ

Posted By : Sumana Upadhyaya
Source : ANI

ನವದೆಹಲಿ: ಭಾರತ ಕ್ರಿಕೆಟ್ ತಂಡದ ಆಟಗಾರ, ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ನಿರೂಪಕರಾಗಿ ಹೊಸ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆ ಇದೆ.

 
ಕ್ರಿಕೆಟ್ ಪ್ರಸಾರಕರು ಈ ಬಗ್ಗೆ ಪ್ರಸ್ತಾವನೆ ಕಳುಹಿಸಿದ್ದು ಬಿಸಿಸಿಐಯಿಂದ ಅನುಮತಿ ಸಿಗಬೇಕಿದೆ. 


ಪ್ರಸಾರಕರು ಪ್ರಸ್ತಾವನೆ ಕಳುಹಿಸಿದ್ದು ಸದ್ಯ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಬಿಸಿಸಿಐ ಅನುಮತಿ ಕೊಟ್ಟರೆ ಧೋನಿಯವರು ಈಡನ್ ಗಾರ್ಡನ್ ನಲ್ಲಿ ನಡೆಯಲಿರುವ ಹಗಲು-ರಾತ್ರಿ ಟೆಸ್ಟ್ ಪಂದ್ಯದ ನಿರೂಪಕರಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.


ಹಗಲು-ರಾತ್ರಿ ಟೆಸ್ಟ್ ಪಂದ್ಯ ಆಡುವಂತೆ ಬಿಸಿಸಿಐ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಅಕ್ಟೋಬರ್ 29ರಂದು ಒಪ್ಪಿಕೊಂಡಿತ್ತು. ಭಾರತ ಮತ್ತು ಬಾಂಗ್ಲಾದೇಶ ನಡುವಣ ಎರಡನೇ ಟೆಸ್ಟ್ ಮ್ಯಾಚ್ ಈಡನ್ ಗಾರ್ಡನ್ ನಲ್ಲಿ ಇದೇ ತಿಂಗಳ 22ರಿಂದ ಆರಂಭವಾಗಲಿದೆ. 


ಸದ್ಯ ಭಾರತ ಮತ್ತು ಬಾಂಗ್ಲಾದೇಶ ಟಿ-20 ಮೂರು ಪಂದ್ಯಗಳನ್ನು ಆಡುತ್ತಿವೆ. ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ 7 ವಿಕೆಟ್ ಗಳ ಮುನ್ನಡೆ ಸಾಧಿಸಿ 1-0 ಅಂತರದಲ್ಲಿದೆ.

Stay up to date on all the latest ಕ್ರಿಕೆಟ್ news with The Kannadaprabha App. Download now
Poll
Priyanka gandhi

ಪ್ರಿಯಾಂಕಾ ಗಾಂಧಿಯನ್ನು ಉತ್ತರ ಪ್ರದೇಶದಲ್ಲಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಘೋಷಿಸಬೇಕೇ?


Result
ಹೌದು
ಬೇಡ
ಗೊತ್ತಿಲ್ಲ
flipboard facebook twitter whatsapp