ಟಿ- 20 ಕ್ರಿಕೆಟ್ : ರೋಹಿತ್ ಶರ್ಮಾಗೆ ಮತ್ತೊಂದು ಸಾಧನೆಯ ಕಿರೀಟ

ಸದ್ಯ ಟೀಂ ಇಂಡಿಯಾದ ನಾಯಕತ್ವ ವಹಿಸಿಕೊಂಡಿರುವ ರೋಹಿತ್ ಶರ್ಮಾ, 100 ಟಿ-20 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ಟೀಂ ಇಂಡಿಯಾದ ಮೊದಲ ಪುರುಷ ಆಟಗಾರ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.
ರೋಹಿತ್ ಶರ್ಮಾ
ರೋಹಿತ್ ಶರ್ಮಾ

ರಾಜ್ ಕೋಟ್ : ಸದ್ಯ ಟೀಂ ಇಂಡಿಯಾದ ನಾಯಕತ್ವ ವಹಿಸಿಕೊಂಡಿರುವ ರೋಹಿತ್ ಶರ್ಮಾ, 100 ಟಿ-20 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ಟೀಂ ಇಂಡಿಯಾದ ಮೊದಲ ಪುರುಷ ಆಟಗಾರ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

ಖಂಡೇರಿ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಎರಡನೇ ಟಿ-20 ಪಂದ್ಯದ ಮೂಲಕ ರೋಹಿತ್ ಶರ್ಮಾ ಈ ಸಾಧನೆ ಮಾಡಿದ್ದಾರೆ

ಉಳಿದಂತೆ ಮಹಿಳಾ ಟಿ-20 ಕ್ರಿಕೆಟ್ ನಾಯಕಿ ಹಮ್ರನ್ ಪ್ರೀತ್ ಕೌರ್ ಮಾತ್ರ 100 ಟಿ-20 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ  ಖ್ಯಾತಿಯನ್ನು ಪಡೆದುಕೊಂಡಿದ್ದಾರೆ.

ರೋಹಿತ್ ಶರ್ಮಾ ಹೊರತುಪಡಿಸಿದಂತೆ ವಿಕೆಟ್ ಕೀಪರ್, ಬ್ಯಾಟ್ಸ್ ಮನ್ ಮಹೇಂದ್ರ ಸಿಂಗ್ ಧೋನಿ 98 ಟಿ-20 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ.

ಪಾಕಿಸ್ತಾನದ ಶೋಯೆಬ್ ಮಲ್ಲಿಕ್ 100 ಕ್ಕೂ ಹೆಚ್ಚು ಟಿ-20 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಧೋನಿ ಹೆಸರಿನಲ್ಲಿದ್ದ ಈ  ದಾಖಲೆಯನ್ನು ಸರಿಗಟ್ಟಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com