ಹ್ಯಾಟ್ರಿಕ್ ಮೂಲಕ ದಾಖಲೆ ಬರೆದ ದೀಪಕ್ ಚಾಹರ್!

ಟೀಂ ಇಂಡಿಯಾದ ಉದಯೋನ್ಮುಖ ಬೌಲಕ್ ದೀಪಕ್ ಚಾಹರ್ ತಮ್ಮ ಅಮೋಘ ಬೌಲಿಂಗ್ ಪ್ರದರ್ಶನದ ಮೂಲಕ ವಿಶ್ವ ದಾಖಲೆ ನಿರ್ಮಾಣ ಮಾಡಿದ್ದಾರೆ.

Published: 11th November 2019 10:00 AM  |   Last Updated: 11th November 2019 10:00 AM   |  A+A-


Deepak Chahar

ಸಂಗ್ರಹ ಚಿತ್ರ

Posted By : Srinivasamurthy VN
Source : Online Desk

ನಾಗಪುರ: ಟೀಂ ಇಂಡಿಯಾದ ಉದಯೋನ್ಮುಖ ಬೌಲಕ್ ದೀಪಕ್ ಚಾಹರ್ ತಮ್ಮ ಅಮೋಘ ಬೌಲಿಂಗ್ ಪ್ರದರ್ಶನದ ಮೂಲಕ ವಿಶ್ವ ದಾಖಲೆ ನಿರ್ಮಾಣ ಮಾಡಿದ್ದಾರೆ.

ನಿನ್ನೆ ನಾಗಪುರದಲ್ಲಿ ನಡೆದ ಬಾಂಗ್ಲಾದೇಶದ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಭಾರತ ತಂಡ 30 ರನ್ ಗಳ ಅಂತರದ ಭರ್ಜರಿ ಜಯ ಸಾಧಿಸಿತ್ತು. ಭಾರತ ನೀಡಿದ್ದ 175 ರನ್ ಗಳ ಬೃಹತ್ ಗುರಿ ಬೆನ್ನು ಹತ್ತಿದ ಬಾಂಗ್ಲಾದೇಶ ಕೇವಲ 174 ರನ್ ಗಳಿಗೆ ಆಲೌಟ್ ಆಯಿತು. ಆ ಮೂಲಕ 30 ರನ್ ಗಳ ಅಂತರದಲ್ಲಿ ಶರಣಾಯಿತು.

ತಂಡದ ಗೆಲುವಿನಲ್ಲಿ ವೇಗಿ ದೀಪಕ್ ಚಹರ್ ಹ್ಯಾಟ್ರಿಕ್ ವಿಕೆಟ್ ಪಡೆದು ಪ್ರಮುಖ ಪಾತ್ರ ನಿರ್ವಹಿಸಿದರು. ದೀಪಕ್‌ ಚಾಹರ್‌ (3.2–0–7–6) ಹ್ಯಾಟ್ರಿಕ್‌ ಸಹಿತ ವಿಶ್ವದಾಖಲೆಯ ಬೌಲಿಂಗ್‌ ಪ್ರದರ್ಶನ ನೀಡಿದರು. ಅವರ ದಾಳಿಗೆ ನಲುಗಿದ ಬಾಂಗ್ಲಾದೇಶ ಮೂರನೇ ಹಾಗೂ ಅಂತಿಮ ಟ್ವೆಂಟಿ–20 ಕ್ರಿಕೆಟ್‌ ಪಂದ್ಯದಲ್ಲಿ ಭಾನುವಾರ ಭಾರತಕ್ಕೆ 30 ರನ್‌ಗಳಿಂದ ಮಣಿಯಿತು.

ಚಾಹರ್‌ ಸಾಧನೆ ಚುಟುಕು ಕ್ರಿಕೆಟ್‌ನಲ್ಲಿ ವಿಶ್ವ ದಾಖಲೆ ಎನಿಸಿತು. 2012ರಲ್ಲಿ ಜಿಂಬಾಬ್ವೆ ವಿರುದ್ಧ ಶ್ರೀಲಂಕಾದ ಸ್ಪಿನ್ನರ್‌  ಅಜಂತ ಮೆಂಡಿಸ್‌ 8 ರನ್ನಿಗೆ 6 ವಿಕೆಟ್‌ ಪಡೆದಿದ್ದು ಇದುವರೆಗಿನ ದಾಖಲೆಯಾಗಿತ್ತು. ತಮ್ಮ ಮೂರನೇ ಓವರ್‌ನ ಕೊನೆಯ ಎಸೆತದಲ್ಲಿ (ಶಫಿಯಲ್‌ ಇಸ್ಲಾಂ) ಹಾಗೂ ಅಂತಿಮ ಓವರ್‌ನ‌ ಮೊದಲ ಎರಡು ಎಸೆತಗಳಲ್ಲಿ (ಮುಸ್ತಫಿಜುರ್‌, ಅಮಿನುಲ್‌ ಇಸ್ಲಾಂ) ವಿಕೆಟ್‌ ಪಡೆದರು. ಆ ಮೂಲಕ ಟಿ–20ಯಲ್ಲಿ ಹ್ಯಾಟ್ರಿಕ್‌ ಸಾಧನೆಗೈದ ಭಾರತದ ಮೊದಲ ಬೌಲರ್‌ ಎಂಬ ಗೌರವಕ್ಕೂ ಭಾಜನರಾದರು.

ಟಿ20ಯಲ್ಲಿ ಇದು ಶ್ರೇಷ್ಠ ಹ್ಯಾಟ್ರಿಕ್ ಸಾಧನೆಯಾಗಿದ್ದು, ಇದಕ್ಕೂ ಮೊದಲು ಶ್ರೀಲಂಕಾದ ಅಜಂತಾ ಮೆಂಡಿಸ್ ಈ ದಾಖಲೆ ಹೊಂದಿದ್ದರು. ಮೆಂಡಿಸ್ 2012ರಲ್ಲಿ ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ 4 ಓವರ್ ಎಸೆದು8 ರನ್ ನೀಡಿ 6 ವಿಕೆಟ್ ಕಬಳಿಸಿದ್ದರು. 

Stay up to date on all the latest ಕ್ರಿಕೆಟ್ news
Poll
IPL2020

ಚೀನಾದ ಪ್ರಾಯೋಜಕರೊಂದಿಗಿನ ಒಪ್ಪಂದವನ್ನು ಮುಂದುವರಿಸಿರುವ ಕಾರಣ ಭಾರತೀಯರು ಐಪಿಎಲ್ ಅನ್ನು ಬಹಿಷ್ಕರಿಸಬೇಕೆಂದು ಸ್ವದೇಶಿ ಜಾಗರನ್ ಮಂಚ್ ಹೇಳಿದೆ. ನೀವು ಏನಂತೀರಿ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp