ನಾಳೆಯಿಂದ ಭಾರತ-ಬಾಂಗ್ಲಾ ನಡುವೆ ಮೊದಲನೇ ಟೆಸ್ಟ್
ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಪಂದ್ಯಗಳ ಟೆಸ್ಟ್ ಸರಣಿ ಕ್ಲೀನ್ ಸ್ವೀಪ್ ಮಾಡಿಕೊಂಡಿರುವ ಭಾರತ ತಂಡ, ನಾಳೆಯಿಂದ ಬಾಂಗ್ಲಾದೇಶ ವಿರುದ್ಧ ಆರಂಭವಾಗುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಸಜ್ಜಾಗಿದೆ.
Published: 13th November 2019 01:17 PM | Last Updated: 13th November 2019 01:17 PM | A+A A-

ಸಂಗ್ರಹ ಚಿತ್ರ
ಇಂದೋರ್: ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಪಂದ್ಯಗಳ ಟೆಸ್ಟ್ ಸರಣಿ ಕ್ಲೀನ್ ಸ್ವೀಪ್ ಮಾಡಿಕೊಂಡಿರುವ ಭಾರತ ತಂಡ, ನಾಳೆಯಿಂದ ಬಾಂಗ್ಲಾದೇಶ ವಿರುದ್ಧ ಆರಂಭವಾಗುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಸಜ್ಜಾಗಿದೆ. ಉಭಯ ತಂಡಗಳ ಮೊದಲನೇ ಹಣಾಹಣಿ ಇಲ್ಲಿನ ಹೋಲ್ಕರ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರ ಸ್ಥಾನದಲ್ಲಿರುವ ಟೀಮ್ ಇಂಡಿಯಾ, ಬಾಂಗ್ಲಾ ವಿರುದ್ಧ ಟೆಸ್ಟ್ ಸರಣಿಯನ್ನು ಯಶಸ್ವಿಯಾಗಿ ಮುಗಿಸಿ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಪಟ್ಟಿಯಲ್ಲಿ ಪ್ರಾಬಲ್ಯ ಮುಂದುವರಿಸುವ ಯೋಜನೆ ಹಾಕಿಕೊಂಡಿದೆ.
ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಟೆಸ್ಟ್ ಸರಣಿಯಲ್ಲಿ ಪಿಂಕ್ ಚೆಂಡಿನಲ್ಲಿ ನಡೆಯುವ ಹೊನಲು ಬೆಳಕಿನ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಆದರೆ, ನಾಳಿನ ಪಂದ್ಯದಲ್ಲಿ ಉಭಯ ತಂಡಗಳು ಸಾಮಾನ್ಯವಾಗಿ ಕೆಂಪು ಚೆಂಡು ಮೂಲಕವೇ ಟೆಸ್ಟ್ ಸರಣಿ ಆರಂಭಿಸಲಿವೆ. ಟೆಸ್ಟ್ ಚಾಂಪಿಯನ್‍ಶಿಪ್ ಅಂಕಪಟ್ಟಿಯಲ್ಲಿ ಭಾರತ 240 ಅಂಕ ಕಲೆಹಾಕುವ ಮೂಲಕ ಅಗ್ರ ಸ್ಥಾನದಲ್ಲಿದೆ