ಡೆಲ್ಲಿ ಕ್ಯಾಪಿಟಲ್ಸ್ ಗೆ ರಹಾನೆ- ಪಂಜಾಬ್‌ಗೆ ಕೆ.ಗೌತಮ್

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಒಂಬತ್ತು ವರ್ಷಗಳ ಕಾಲ ರಾಜಸ್ಥಾನ ರಾಯಲ್ಸ್‌ ತಂಡವನ್ನು ಪ್ರತಿನಿಧಿಸಿದ್ದ ಭಾರತ ಟೆಸ್ಟ್‌ ತಂಡದ ಉಪ ನಾಯಕ ಅಜಿಂಕ್ಯಾ ರಹಾನೆ ಅವರು ಇದೀಗ ಡೆಲ್ಲಿ ಕ್ಯಾಪಿಟಲ್ಸ್‌ ಸೇರುವುದು ಬಹುತೇಕ ಖಚಿತವಾಗಿದೆ. 
ಅಜಿಂಕ್ಯಾ ರಹಾನೆ
ಅಜಿಂಕ್ಯಾ ರಹಾನೆ

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಒಂಬತ್ತು ವರ್ಷಗಳ ಕಾಲ ರಾಜಸ್ಥಾನ ರಾಯಲ್ಸ್‌ ತಂಡವನ್ನು ಪ್ರತಿನಿಧಿಸಿದ್ದ ಭಾರತ ಟೆಸ್ಟ್‌ ತಂಡದ ಉಪ ನಾಯಕ ಅಜಿಂಕ್ಯಾ ರಹಾನೆ ಅವರು ಇದೀಗ ಡೆಲ್ಲಿ ಕ್ಯಾಪಿಟಲ್ಸ್‌ ಸೇರುವುದು ಬಹುತೇಕ ಖಚಿತವಾಗಿದೆ. 

ಮತ್ತೊಂದೆಡೆ  ಬೌಲಿಂಗ್ ಆಲ್‌ರೌಂಡರ್ ಕರ್ನಾಕಟದ ಕೆ.ಗೌತಮ್ ಅವರು ಕೂಡ ಕಿಂಗ್ಸ್‌ ಇಲೆವೆನ್ ತಂಡದ ಪರ ಮುಂದಿನ ಆವೃತ್ತಿಯಲ್ಲಿ ಜೆರ್ಸಿ ತೊಡಲಿದ್ದಾರೆ.

ಐಪಿಎಲ್ ಫ್ರಾಂಚೈಸಿ  ತಂಡಗಳು ಆಟಗಾರರನ್ನು ಅದಲು-ಬದಲು ಮಾಡಿಕೊಳ್ಳುವ ಪ್ರಕ್ರಿಯೆ ಜೋರಾಗಿ ನಡೆಯುತ್ತಿದ್ದು, ಸ್ಟಾರ್ ಬ್ಯಾಟ್ಸ್‌‌ಮನ್ ಅಜಿಂಕ್ಯ ರಹಾನೆ ಅವರನ್ನು ತನ್ನ ತೆಕ್ಕೆೆಗೆ ತೆಗೆದುಕೊಳ್ಳುವಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯಿಂದ ಒಪ್ಪಿಗೆಗೆ ಕಾಯುತ್ತಿದೆ. ಐಪಿಎಲ್‌ನಲ್ಲಿ ಹೆಚ್ಚು ಅನುಭವಿ ಬ್ಯಾಟ್ಸ್‌‌ಮನ್ ಆಗಿರುವ ಅಜಿಂಕ್ಯ ಅವರ ಬದಲಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡ, ರಾಜಸ್ಥಾನ ತಂಡಕ್ಕೆೆ ಲೆಗ್ ಸ್ಪಿನ್ನರ್ ಮಯಾಂಕ್ ಮಾರ್ಕಂಡೆ ಮತ್ತು ರಾಹುಲ್ ತೆವಾಟಿಯ ಅವರನ್ನು ಬಿಟ್ಟುಕೊಡಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com