ಆರ್ ಅಶ್ವಿನ್
ಕ್ರಿಕೆಟ್
ತವರು ನೆಲದಲ್ಲಿ 250 ವಿಕೆಟ್ ಪೂರೈಸಿದ ಆರ್ ಅಶ್ವಿನ್
ಭಾರತದ ಹಿರಿಯ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ತವರು ನೆಲದಲ್ಲಿ 250ಕ್ಕೂ ಹೆಚ್ಚು ವಿಕೆಟ್ ಕಿತ್ತ ಭಾರತದ ಮೂರನೇ ಸ್ಪಿನ್ನರ್ ಎಂಬ ಗೌರವಕ್ಕೆ ಪಾತ್ರವಾಗಿದ್ದಾರೆ.
ಇಂದೋರ್: ಭಾರತದ ಹಿರಿಯ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ತವರು ನೆಲದಲ್ಲಿ 250ಕ್ಕೂ ಹೆಚ್ಚು ವಿಕೆಟ್ ಕಿತ್ತ ಭಾರತದ ಮೂರನೇ ಸ್ಪಿನ್ನರ್ ಎಂಬ ಗೌರವಕ್ಕೆ ಪಾತ್ರವಾಗಿದ್ದಾರೆ.
ಮೊದಲು ಹಾಗೂ ಎರಡು ಸ್ಥಾನಗಳಲ್ಲಿ ಕ್ರಮವಾಗಿ ಅನಿಲ್ ಕುಂಬ್ಳೆ ಹಾಗೂ ಹರಭಜನ್ ಸಿಂಗ್ ಇದ್ದು, ಇದೀಗ ಅಶ್ವಿನ್ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ.
ಇಲ್ಲಿನ ಹೋಳ್ಕರ್ ಕ್ರೀಡಾಂಗಣದಲ್ಲಿ ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಮೊದಲನೇ ಟೆಸ್ಟ್ ಪಂದ್ಯದಲ್ಲಿ ನಾಯಕ ಮೊಮಿನುಲ್ ಹಕ್(37) ಅವರ ವಿಕೆಟ್ ಪಡೆಯುತ್ತಿದ್ದಂತೆ ಈ ಸಾಧನೆಗೆ ಅಶ್ವಿನ್ ಭಾಜನರಾದರು.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ತಂಡಕ್ಕೆ ಭಾರತದ ವೇಗಿಗಳು ಆರಂಭಿಕ ಆಘಾತ ನೀಡಿದರು. ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ ಹಾಗೂ ಉಮೇಶ್ ಯಾದವ್ ಒಂದೊಂದು ವಿಕೆಟ್ ಕಿತ್ತರು. ನಂತರ, ಚೆಂಡು ಕೈಗೆತ್ತಕೊಂಡ ಆರ್. ಅಶ್ವಿನ್ ಅತ್ಯುತ್ತಮ ಬ್ಯಾಟಿಂಗ್ ಮಾಡುವ ಮೂಲಕ ಕ್ರೀಸ್ ನಲ್ಲಿ ನೆಲೆಯೂರಿದ್ದ ಮೊಮಿನುಲ್ ಹಕ್ ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ