ಮಹಿಳಾ ಟಿ20: ಕನ್ನಡತಿ ವೇದಾ ಆರ್ಭಟ, ಭಾರತ ವನಿತೆಯರಿಗೆ 61 ರನ್ ಜಯ

ಭರವಸೆಯ ಆಟಗಾರ್ತಿ ಜೆಮಿಮಾ ರೊಡ್ರಿಗಸ್ (50) ಹಾಗೂ ಕನ್ನಡತಿ ವೇದಾ ಕೃಷ್ಣಮೂರ್ತಿ (ಅಜೇಯ 57) ಇವರುಗಳ ಭರ್ಜರಿ ಆಟದ ನೆರವಿನಿಂದ ಭಾರತ ವನಿತೆಯರ ತಂಡ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಆತಿಥೇಯ ತಂಡವನ್ನು ಐದನೇ ಟಿ-20 ಕ್ರಿಕೆಟ್ ಪಂದ್ಯದಲ್ಲಿ 61 ರನ್ ಗಳಿಂದ ಮಣಿಸಿ, ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ.

Published: 21st November 2019 10:53 AM  |   Last Updated: 21st November 2019 10:53 AM   |  A+A-


ವೇದಾ ಕೃಷ್ಣಮೂರ್ತಿ

Posted By : Raghavendra Adiga
Source : UNI

ಗಯಾನ: ಭರವಸೆಯ ಆಟಗಾರ್ತಿ ಜೆಮಿಮಾ ರೊಡ್ರಿಗಸ್ (50) ಹಾಗೂ ಕನ್ನಡತಿ ವೇದಾ ಕೃಷ್ಣಮೂರ್ತಿ (ಅಜೇಯ 57) ಇವರುಗಳ ಭರ್ಜರಿ ಆಟದ ನೆರವಿನಿಂದ ಭಾರತ ವನಿತೆಯರ ತಂಡ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಆತಿಥೇಯ ತಂಡವನ್ನು ಐದನೇ ಟಿ-20 ಕ್ರಿಕೆಟ್ ಪಂದ್ಯದಲ್ಲಿ 61 ರನ್ ಗಳಿಂದ ಮಣಿಸಿ, ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಭಾರತ ತಂಡ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 134 ರನ್ ಕಲೆ ಹಾಕಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡ 20 ಓವರ್ ಗಳಲ್ಲಿ 7 ವಿಕೆಟ್ ಗೆ 73 ರನ್ ಸೇರಿಸಿತು. 

ಭಾರತದ ಪರ ಕನ್ನಡತಿ ವೇದಾ ಕೃಷ್ಣಮೂರ್ತಿ ಮತ್ತು ಜೆಮಿಮಾ ರೋಡ್ರಿಗಸ್ ಜೋಡಿ ಉತ್ತಮ ಆಟ ಪ್ರದರ್ಶಿಸಿದೆ. ಜೋಡಿ 117 ರನ್ ಕಲೆಹಾಕಿ ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದೆ.ವೇದಾ (56*) ಜೆಮಿಮಾ (50) ರನ್ ಗಳಿಸಿ ಮಿಂಚಿದ್ದಾರೆ.

Stay up to date on all the latest ಕ್ರಿಕೆಟ್ news
Poll
Parliament

ಸಂಸತ್ತಿನ ಈ ಮುಂಗಾರು ಅಧಿವೇಶನವು ಪ್ರಜಾಪ್ರಭುತ್ವದ ಕಗ್ಗೊಲೆಗೆ ಸಾಕ್ಷಿಯಾಯಿತೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp