ವಿಂಡೀಸ್ ವಿರುದ್ಧದ ಸರಣಿಗೆ ಟೀಂ ಇಂಡಿಯಾ ಪ್ರಕಟ: ಟಿ20 ಗೆ ಮೊಹಮ್ಮದ್ ಶಮಿ ಕಂಬ್ಯಾಕ್ 

ಪ್ರವಾಸಿ ವೆಸ್ಟ್‌ ಇಂಡೀಸ್‌ ವಿರುದ್ಧ ಡಿಸೆಂಬರ್‌ನಲ್ಲಿ ನಡೆಯಲಿರುವ ಟಿ20 ಮತ್ತು ಏಕದಿನ ಕ್ರಿಕೆಟ್‌ ಸರಣಿಗಾಗಿ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ.ಎಂಎಸ್ ಕೆ ಪ್ರಸಾದ್ ನೇತೃತ್ವದ ಭಾರತೀಯ ಆಯ್ಕೆ ಸಮಿತಿ ಈ ತಂಡವನ್ನು ಪ್ರಕಟಿಸಿದ್ದು, ವಿರಾಟ್‌ ಕೊಹ್ಲಿ ತಂಡಗಳನ್ನು ಮುನ್ನಡೆಸಲಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮುಂಬೈ: ಪ್ರವಾಸಿ ವೆಸ್ಟ್‌ ಇಂಡೀಸ್‌ ವಿರುದ್ಧ ಡಿಸೆಂಬರ್‌ನಲ್ಲಿ ನಡೆಯಲಿರುವ ಟಿ20 ಮತ್ತು ಏಕದಿನ ಕ್ರಿಕೆಟ್‌ ಸರಣಿಗಾಗಿ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ.ಎಂಎಸ್ ಕೆ ಪ್ರಸಾದ್ ನೇತೃತ್ವದ ಭಾರತೀಯ ಆಯ್ಕೆ ಸಮಿತಿ ಈ ತಂಡವನ್ನು ಪ್ರಕಟಿಸಿದ್ದು, 
ವಿರಾಟ್‌ ಕೊಹ್ಲಿ ತಂಡಗಳನ್ನು ಮುನ್ನಡೆಸಲಿದ್ದಾರೆ. 

ಬಾಂಗ್ಲಾ ವಿರುದ್ಧದ ಟಿ20 ಕ್ರಿಕೆಟ್‌ ಸರಣಿಗೆ ವಿಶ್ರಾಂತಿ ಪಡೆದಿದ್ದ ವಿರಾಟ್‌ ಕೊಹ್ಲಿ, ಇದೀಗ ಏಕದಿನ ಮತ್ತು ಟಿ20 ತಂಡಕ್ಕೆ ಮರಳಿ ಸೇರಿಕೊಂಡಿದ್ದು ನಾಯಕನ ಜವಾಬ್ದಾರಿ ನಿಭಾಯಿಸಲಿದ್ದು, ರೋಹಿತ್‌ ಶರ್ಮಾ ಉಪನಾಯಕನಾಗಿ ಮುಂದುವರಿಯಲಿದ್ದಾರೆ. ಮತ್ತೊಂದೆಡೆ ಗಾಯದ ಸಮಸ್ಯೆಯಿಂದ ಚೇತರಿಸಿರುವ ಅನುಭವಿ ವೇಗದ ಬೌಲರ್‌ ಭುವನೇಶ್ವರ್‌ ಕುಮಾರ್‌ ಹಾಗೂ ವೇಗಿ ಮೊಹಮ್ಮದ್ ಶಮಿ ಟಿ20 ಕ್ರಿಕೆಟ್‌ ತಂಡಕ್ಕೆ ಮರಳಿದ್ದಾರೆ.

ಡಿಸೆಂಬರ್‌ 6ರಂದು ವೆಸ್ಟ್‌ ಇಂಡೀಸ್‌ ವಿರುದ್ಧದ ಸರಣಿ ಆರಂಭವಾಗಲಿದ್ದು, ಮೊದಲಿಗೆ ಟಿ20 ಕ್ರಿಕೆಟ್‌ ಸರಣಿಯಲ್ಲಿ ಇತ್ತಂಡಗಳು ಪೈಪೋಟಿ ನಡೆಸಲಿವೆ. ಪ್ರಥಮ ಪಂದ್ಯ ಡಿ.6ರಂದು ಮುಂಬೈನಲ್ಲಿ, 2ನೇ ಪಂದ್ಯ ಡಿ8. ತಿರುವನಂತಪುರದಲ್ಲಿ ಮತ್ತು 3ನೇ ಪಂದ್ಯ ಡಿ.11ರಂದು ಹೈದರಾಬಾದ್‌ನಲ್ಲಿ ನಡೆಯಲಿದೆ.

ಡಿಸೆಂಬರ್ 15 ರಂದು ಭಾನುವಾರ ಚೆನ್ನೈಯಲ್ಲಿ ಮಧ್ಯಾಹ್ನ 2ಕ್ಕೆ ಪ್ರಥಮ ಏಕದಿನ, ಡಿಸೆಂಬರ್ 18 ರಂದು ವಿಶಾಖಪಟ್ಟಣಂನಲ್ಲಿ ಮಧ್ಯಾಹ್ನ 2ಕ್ಕೆ ದ್ವೀತಿಯ ಏಕದಿನ ಹಾಗೂ ಡಿಸೆಂಬರ್ 22 ರಂದು ಕಟಕ್ ನಲ್ಲಿ ಮಧ್ಯಾಹ್ನ 2ಕ್ಕೆ ಮೂರನೇ  ಹಾಗೂ ಅಂತಿಮ ಏಕದಿನ ಪಂದ್ಯ ನಡೆಯಲಿದೆ. 

ಏಕದಿನ ತಂಡ ಇಂತಿದೆ: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶಿಖರ್ ಧವನ್, ಕೆಎಲ್ ರಾಹುಲ್, ರಿಷಭ್ ಪಂತ್, ಮನೀಷ್ ಪಾಂಡೆ, ಶ್ರೇಯಸ್ ಅಯ್ಯರ್, ಕೇದಾರ್ ಜಾದವ್, ರವೀಂದ್ರ ಜಡೇಜಾ, ಶಿವಂ ದುಬೆ, ಯುಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ದೀಪಕ್ ಚಾಹರ್ ಮತ್ತು ಭುವನೇಶ್ವರ್ ಕುಮಾರ್ 

ಟಿ-20 ತಂಡ ಇಂತಿದೆ: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶಿಖರ್ ಧವನ್, ರಿಷಭ್ ಪಂತ್, ಮನೀಷ್ ಪಾಂಡೆ, ಶ್ರೇಯಸ್ ಅಯ್ಯರ್, ಶಿವಂದುಬೆ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಯುಜುವೇಂದ್ರ ಚಾಹಲ್, ಕುಲದೀಪ್ ಯಾದವ್, ದೀಪಕ್ ಚಾಹರ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com