ಪಿಂಕ್ ಬಾಲ್ ಟೆಸ್ಟ್: ಮತ್ತೊಂದು ದಾಖಲೆ ಸೃಷ್ಟಿಸಿದ ಕೊಹ್ಲಿ, ವೇಗದ 5 ಸಾವಿರ ಗಳಿಸಿದ ಕ್ಯಾಪ್ಟನ್!

ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ಸೃಷ್ಟಿಸಿದ್ದಾರೆ.  ಟೆಸ್ಟ್ ಪಂದ್ಯದಲ್ಲಿ ವೇಗದ 5 ಸಾವಿರ ರನ್ ಪೂರೈಸಿದ ಕ್ಯಾಪ್ಟನ್ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ

ಕೊಲ್ಕತ್ತಾ:  ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ಸೃಷ್ಟಿಸಿದ್ದಾರೆ.  ಟೆಸ್ಟ್ ಪಂದ್ಯದಲ್ಲಿ ವೇಗದ 5 ಸಾವಿರ ರನ್ ಪೂರೈಸಿದ ಕ್ಯಾಪ್ಟನ್ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

ವಿರಾಟ್ ಕೊಹ್ಲಿ ಕೇವಲ 86 ಇನ್ನಿಂಗ್ಸ್  ಗಳಲ್ಲಿ ಈ ಮೈಲಿಗಲು ಸೃಷ್ಟಿಸಿದ್ದಾರೆ. ಆಸ್ಟ್ರೇಲಿಯಾ ಮಾಜಿ ಕ್ಯಾಪ್ಟನ್ ರಿಕಿ ಪಾಟಿಂಗ್ 97 ಇನ್ನಿಂಗ್ಸ್ ಗಳಲ್ಲಿ ಈ ಸಾಧನೆ ಮಾಡಿದ್ದರು. 

ಬಾಂಗ್ಲಾದೇಶ ವಿರುದ್ಧದ ಮೊದಲ ಹಗಲು- ರಾತ್ರಿ ಪಂದ್ಯದ ಸಂದರ್ಭದಲ್ಲಿ ಕೊಹ್ಲಿ 32 ರನ್ ಗಳಿಸುವ ಮೂಲಕ ವೇಗದ 5 ಸಾವಿರ ರನ್ ಗಳಿಸಿದ ಕ್ಯಾಪ್ಟನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. 

ಇಶಾಂತ್ ಶರ್ಮಾ ಅಮೋಘ ಬೌಲಿಂಗ್ ದಾಳಿಯಿಂದ ಬಾಂಗ್ಲಾದೇಶ 106 ರನ್ ಗಳಿಗೆ ಆಲೌಟ್ ಆಯಿತು. ನಂತರ ಇನ್ನಿಂಗ್ಸ್ ಆರಂಭಿಸಿದ ಆರಂಭಿಕ ಆಟಗಾರ ಮಾಯಾಂಕ್ ಅಗರ್ ವಾಲ್ ಹಾಗೂ ರೋಹಿತ್ ಶರ್ಮಾ ಕ್ರಮವಾಗಿ 14, ಮತ್ತು 21 ರನ್ ಗಳಿಗೆ ಔಟ್ ಆದರು. 

ವಿರಾಟ್ ಕೊಹ್ಲಿ ಹಾಗೂ ಚೇತೇಶ್ವರ್ ಪೂಜಾರ ಮೂರನೇ ವಿಕೆಟ್ ಜೊತೆಯಾಟದಲ್ಲಿ 64 ರನ್ ಗಳನೊಂದಿಗೆ ಟೀಂ ಇಂಡಿಯಾಗೆ ಮುನ್ನಡೆ ತಂದುಕೊಟ್ಟರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com