ಎದುರಾಳಿ ಬೌಲರ್‌ನಿಂದಲೂ ಸೆಲ್ಯೂಟ್ ಹೊಡೆಸಿಕೊಂಡ ವಿರಾಟ್ ಕೊಹ್ಲಿ, ವಿಡಿಯೋ ವೈರಲ್!

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪಿಂಕ್ ಬಾಲ್ ನಲ್ಲಿ ಶತಕ ಸಿಡಿಸಿದ ಮೊದಲ ಭಾರತೀಯ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ. ಇನ್ನು ವಿಕೆಟ್ ಪಡೆದ ನಂತರ ಬಾಂಗ್ಲಾ ಬೌಲರ್ ಕೊಹ್ಲಿಗೆ ಸೆಲ್ಯೂಟ್ ಹೊಡೆದಿರುವ ವಿಡಿಯೋ ಇದೀಗ ವೈರಲ್ ಆಗಿದೆ.
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ

ಕೋಲ್ಕತ್ತಾ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪಿಂಕ್ ಬಾಲ್ ನಲ್ಲಿ ಶತಕ ಸಿಡಿಸಿದ ಮೊದಲ ಭಾರತೀಯ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ. ಇನ್ನು ವಿಕೆಟ್ ಪಡೆದ ನಂತರ ಬಾಂಗ್ಲಾ ಬೌಲರ್ ಕೊಹ್ಲಿಗೆ ಸೆಲ್ಯೂಟ್ ಹೊಡೆದಿರುವ ವಿಡಿಯೋ ಇದೀಗ ವೈರಲ್ ಆಗಿದೆ. 

ಈಡೆನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದಿದ್ದ ಪಂದ್ಯದಲ್ಲಿ ಟೀ ಇಂಡಿಯಾ ಇನ್ನಿಂಗ್ಸ್ ಮತ್ತು 46 ರನ್ ಗಳಿಂದ ಭರ್ಜರಿ ಜಯ ಗಳಿಸಿದೆ. ಇನ್ನು ಭಾರತ ಮೊದಲ ಇನ್ನಿಂಗ್ಸ್ ನಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದ್ದ ಕೊಹ್ಲಿ 136 ರನ್ ಗಳಿಸಿದ್ದಾಗ ಇಬಾದತ್ ಹುಸೇನ್ ಬೌಲಿಂಗ್ ನಲ್ಲಿ ಔಟಾಗಿದ್ದರು. 

ಕೊಹ್ಲಿ ಲೇಗ್ ಸೈಡ್ ನಲ್ಲಿ ಸಿಡಿಸಿದ್ದ ಚೆಂಡನ್ನು ತೈಜುಲ್ ಇಸ್ಲಾಮ್ ಅದ್ಭುತವಾಗಿ ಡೈವ್ ಮಾಡಿ ಕ್ಯಾಚ್ ಹಿಡಿದಿದ್ದರು. ಕೊಹ್ಲಿ ಔಟಾಗಿ ಪೆವಿಲಿಯನ್ ಗೆ ಹೋಗುವಾಗ ಇಬಾದತ್ ಸೆಲ್ಯೂಟ್ ಹೊಡೆದು ವಿದಾಯ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com