ಮೊದಲ ಟೆಸ್ಟ್ ಪಂದ್ಯ: ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ!

ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

Published: 02nd October 2019 10:43 AM  |   Last Updated: 02nd October 2019 10:43 AM   |  A+A-


India won the toss and opt to bat against South Africa

ಸಂಗ್ರಹ ಚಿತ್ರ

Posted By : Srinivasamurthy VN
Source : Online Desk

ವಿಶಾಖಪಟ್ಟಣಂ: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಆಂಧ್ರ ಪ್ರದೇಶದ ವಿಶಾಖಪಟ್ಟಣಂನಲ್ಲಿರುವ ಡಾ.ವೈಎಸ್ ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಮೈದಾನದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. 

ಭಾರತ ತಂಡದ ಪರ ರೋಹಿತ್ ಶರ್ಮಾ ಮತ್ತು ಮಯಾಂಕ್ ಅಗರ್ವಾಲ್ ಬ್ಯಾಟಿಂಗ್ ಆರಂಭಿಸಿದ್ದು, ಭಾರತ ತಂಡ ವಿಕೆಟ್ ನಷ್ಟವಿಲ್ಲದೇ 14 ಓವರ್ ನಲ್ಲಿ 35 ರನ್ ಗಳಿಸಿದೆ. 46 ಎಸೆತಗಳನ್ನು ಎದುರಿಸಿರುವ ಮಯಾಂಕ್ 19 ರನ್ ಗಳಿಸಿದ್ದರೆ, 39 ಎಸೆತೆಗಳನ್ನು ಎದುರಿಸಿರುವ ರೋಹಿತ್ ಶರ್ಮಾ 17 ರನ್ ಗಳಿಸಿದ್ದಾರೆ.

ಇನ್ನು ಈ ಪಂದ್ಯದ ಮೂಲಕ ವೃದ್ಧಿಮಾನ್ ಸಾಹಾ ಅಂತಾರಾಷ್ಟ್ರೀಯ ತಂಡ ಸೇರಿಕೊಂಡಿದ್ದು, ಇವರೊಂದಿಗೆ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ ಪೂಜಾರ ಮತ್ತು ಆರ್ ಅಶ್ವಿನ್ ಕೂಡ ತಂಡ ಸೇರಿಕೊಂಡಿದ್ದಾರೆ.

Stay up to date on all the latest ಕ್ರಿಕೆಟ್ news
Poll
Parliament

ಸಂಸತ್ತಿನ ಈ ಮುಂಗಾರು ಅಧಿವೇಶನವು ಪ್ರಜಾಪ್ರಭುತ್ವದ ಕಗ್ಗೊಲೆಗೆ ಸಾಕ್ಷಿಯಾಯಿತೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp