ಟೆಸ್ಟ್ ಕ್ರಿಕೆಟ್ ನಲ್ಲಿ ನೂತನ ದಾಖಲೆ ನಿರ್ಮಾಣಕ್ಕೆ ಆರ್. ಅಶ್ವಿನ್ ಸಜ್ಜು

ಟೀಂ ಇಂಡಿಯಾದ  ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಶ್ರೀಲಂಕಾ ಪ್ರಸಿದ್ದ ಬೌಲರ್ ಮುತ್ತಯ್ಯ ಮುರಳೀಧರನ್ ಅವರ ಟೆಸ್ಟ್ ಕ್ರಿಕೆಟ್ ದಾಖಲೆ ಸರಿಗಟ್ಟಲು ಇನ್ನೊಂದೇ ಹೆಜ್ಜೆ ಬಾಕಿ ಇದೆ. ಅಶ್ವಿನ್ ಇನ್ನು ಕೇವಲ ಒಂದು ವಿಕೆಟ್ ಪಡೆದರೆ ಮುರಳೀಧರನ್ ದಾಖಲೆಯನ್ನು ಸರಿದೂಗಿಸಲಿದ್ದಾರೆ.
ರವಿಚಂದ್ರನ್ ಅಶ್ವಿನ್
ರವಿಚಂದ್ರನ್ ಅಶ್ವಿನ್

ವಿಶಾಖಪಟ್ಟಣಂ: ಟೀಂ ಇಂಡಿಯಾದ  ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಶ್ರೀಲಂಕಾ ಪ್ರಸಿದ್ದ ಬೌಲರ್ ಮುತ್ತಯ್ಯ ಮುರಳೀಧರನ್ ಅವರ ಟೆಸ್ಟ್ ಕ್ರಿಕೆಟ್ ದಾಖಲೆ ಸರಿಗಟ್ಟಲು ಇನ್ನೊಂದೇ ಹೆಜ್ಜೆ ಬಾಕಿ ಇದೆ. ಅಶ್ವಿನ್ ಇನ್ನು ಕೇವಲ ಒಂದು ವಿಕೆಟ್ ಪಡೆದರೆ ಮುರಳೀಧರನ್ ದಾಖಲೆಯನ್ನು ಸರಿದೂಗಿಸಲಿದ್ದಾರೆ.

ವಿಶಾಖಪಟ್ಟಣಂ ನ  ಎಸಿಎ-ವಿಡಿಸಿಎ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಏಳು ವಿಕೆಟ್‌ಗಳನ್ನು ಪಡೆದ ಅಶ್ವಿನ್, ಮುರಳೀಧರನ್ ಅವರ 350 ಅತಿ ವೇಗದ ಟೆಸ್ಟ್ ವಿಕೆಟ್‌ಗಳ ವಿಶ್ವ ದಾಖಲೆಯನ್ನು ಸಮನಾಗಿಸಲು ಕೇವಲ ಒಂದು ವಿಕೆಟ್ ಕಡಿಮೆ ಇದೆ.

33ರ ಹರೆಯದ ಅಶ್ವಿನ್  66 ಟೆಸ್ಟ್ ಪಂದ್ಯಗಳಲ್ಲಿ49 ವಿಕೆಟ್ ಪಡೆದಿದ್ದಾರೆ. ಮುರಳೀಧರನ್, 2001 ರಲ್ಲಿ ಬಾಂಗ್ಲಾದೇಶ ವಿರುದ್ಧದ 66 ನೇ ಟೆಸ್ಟ್ ಪಂದ್ಯದಲ್ಲಿ 350 ವಿಕೆಟ್ ಮೈಲಿಗಲ್ಲು ತಲುಪಿದ್ದರು. ಭಾರತದ ಮಾಜಿ ಲೆಗ್ ಸ್ಪಿನ್ನರ್ ಅನಿಲ್ ಕುಂಬ್ಳೆ 77 ಟೆಸ್ಟ್ ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದಾರೆ.

ಅಶ್ವಿನ್ 2011 ರಲ್ಲಿ ಟೆಸ್ಟ್ ಪಂದ್ಯಕ್ಕೆ ಪಾದಾರ್ಪಣೆ ಮಾಡಿದರು ಮತ್ತು ಅಂದಿನಿಂದ ಟೀಂ ಇಂಡಿಯಾದ ಅವಿಭಾಜ್ಯ ಅಂಗವಾಗಿದ್ದಾರೆ.ಆದಾಗ್ಯೂ, ವೆಸ್ಟ್ ಇಂಡೀಸ್ನಲ್ಲಿ ನಡೆದ ಎರಡು ಪಂದ್ಯಗಳ ಸರಣಿಯಲ್ಲಿ ಅವರನ್ನು ಕೈಬಿಡಲಾಗಿತು. ಅಲ್ಲಿ ಭಾರತ ಟೆಸ್ಟ್ ಸರಣಿ ಕ್ಲೀನ್ ಸ್ವೀಪ್ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com