ಜಹೀರ್‌ಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿ, ನೆಟಿಗರಿಂದ ಮಂಗಳಾರತಿ ಮಾಡಿಸಿಕೊಂಡ ಹಾರ್ದಿಕ್ ಪಾಂಡ್ಯ

ಟೀಂ ಇಂಡಿಯಾದ ಮಾಜಿ ವೇಗಿ ಜಹೀರ್ ಖಾನ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಪೇಚಿಗೆ ಸಿಲುಕಿದ್ದು ಪಾಂಡ್ಯರನ್ನು ನೆಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.
ಜಹೀರ್ ಖಾನ್-ಹಾರ್ದಿಕ್ ಪಾಂಡ್ಯ
ಜಹೀರ್ ಖಾನ್-ಹಾರ್ದಿಕ್ ಪಾಂಡ್ಯ

ನವದೆಹಲಿ: ಟೀಂ ಇಂಡಿಯಾದ ಮಾಜಿ ವೇಗಿ ಜಹೀರ್ ಖಾನ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಪೇಚಿಗೆ ಸಿಲುಕಿದ್ದು ಪಾಂಡ್ಯರನ್ನು ನೆಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.

ಜಹೀರ್ ಖಾನ್ 41ನೇ ವಸಂತಕ್ಕೆ ಕಾಲಿಟ್ಟಿದ್ದು ಕ್ರೀಡಾ ಹಾಗೂ ಚಿತ್ರರಂಗದ ಗಣ್ಯರು ಶುಭಾಶಯ ತಿಳಿಸಿದ್ದಾರೆ. ಅಂತೆಯೇ ಹಾರ್ಡಿಕ್ ಪಾಂಡ್ಯ ಸಹ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಆದರೆ ಅವರು ಶುಭಾಶಯದ ಜೊತೆಗೆ ವಿಡಿಯೋವೊಂದನ್ನು ಹಾಕಿದ್ದು ಆ ವಿಡಿಯೋ ನೆಟಿಗರು ಹಾರ್ದಿಕ್ ವಿರುದ್ಧ ಸಿಡಿದೇಳುವಂತೆ ಮಾಡಿದೆ. 

ವಿಡಿಯೋದಲ್ಲಿ ಹಾರ್ದಿಕ್ ಪಾಂಡ್ಯ ಜಹೀರ್ ಅವರ ಬೌಲಿಂಗ್ ನಲ್ಲಿ ಸಿಕ್ಸರ್ ಬಾರಿಸಿದ್ದಾರೆ. ಇದನ್ನು ಕೋಟ್ ಮಾಡಿ ನಾನು ಮಾಡಿದಂತೆ ನೀವೂ ಮಾಡುತ್ತೀರಿ ಎಂದು ನಾನು ನಂಬುತ್ತೇನೆ ಎಂದು ಬರೆದುಕೊಂಡಿದ್ದರು. ಹಾರ್ದಿಕ್ ಪಾಂಡ್ಯರ ಈ ಟ್ವೀಟ್ ನಿಂದ ಕೆರಳಿರುವ ನೆಟಿಗರು ಹಿರಿಯ ಆಟಗಾರರಿಗೆ ಗೌರವ ನೀಡುವುದನ್ನು ಕಲಿಯಿರಿ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com