ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಸೌರವ್ ಗಂಗೂಲಿ, ದಾದಾ ಅವಿರೋಧ ಆಯ್ಕೆ ಬಹುತೇಕ ಖಚಿತ

ಒಂದು ಕಾಲದಲ್ಲಿ ಕ್ರಿಕೆಟ್ ಸಾಮ್ರಾಜ್ಯ ಆಳಿದ್ದ ದಾದಾ ಖ್ಯಾತಿಯ ಸೌರವ್ ಗಂಗೂಲಿ ಅವರು ಸೋಮವಾರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದು, ದಾದಾ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
ಬಿಸಿಸಿಐ ಕಚೇರಿ ಬಳಿ ಸೌರವ್ ಗಂಗೂಲಿ
ಬಿಸಿಸಿಐ ಕಚೇರಿ ಬಳಿ ಸೌರವ್ ಗಂಗೂಲಿ

ಮುಂಬೈ: ಒಂದು ಕಾಲದಲ್ಲಿ ಕ್ರಿಕೆಟ್ ಸಾಮ್ರಾಜ್ಯ ಆಳಿದ್ದ ದಾದಾ ಖ್ಯಾತಿಯ ಸೌರವ್ ಗಂಗೂಲಿ ಅವರು ಸೋಮವಾರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದು, ದಾದಾ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ಬಿಸಿಸಿಐ ಅಧ್ಯಕ್ಷ ಸ್ಥಾನ ಸೇರಿದಂತೆ ವಿವಿಧ ಹುದ್ದೆಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದ್ದು, ಅಧ್ಯಕ್ಷ ಸ್ಥಾನಕ್ಕೆ ಗಂಗೂಲಿ ಮಾತ್ರ ನಾಮಪತ್ರ ಸಲ್ಲಿಸಿದ್ದಾರೆ.

ಬಂಗಾಳ ಕ್ರಿಕೆಟ್ ಅಸೋಸಿಯೇಷನ್  ಮುಖ್ಯಸ್ಥರಾಗಿರುವ ಸೌರವ್ ಗಂಗೂಲಿ ಹಾಗೂ ಮತ್ತಿತರ ಅಭ್ಯರ್ಥಿಗಳು ಇಂದ ಬೆಳಗ್ಗೆ ಔಪಚಾರಿಕ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ್ದು, ಬಿಸಿಸಿಐ ನೂತನ ಅಧ್ಯಕ್ಷರಾಗಲು ಸಿದ್ಧತೆ ನಡೆಸಿದ್ದಾರೆ.

ಗಂಗೂಲಿ ಅವರ ಜೊತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ ಅವರು ಬಿಸಿಸಿಐ ಕಾರ್ಯದರ್ಶಿ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದಾರೆ.

ಇನ್ನು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರ ಸಹೋದರ ಅರುಣ್ ಧುಮಾಲ್ ಅವರು ಖಜಾಂಚಿ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದು, ಎಲ್ಲರೂ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಇದೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಚುನಾವಣೆಗೆ ಸಂಬಂಧಪಟ್ಟಂತೆ ಮುಂಬಯಿಯಲ್ಲಿ ನಡೆದ ಹಲವು ಸುತ್ತುಗಳ ಮಾತುಕತೆಗಳ ಬಳಿಕ ಭಾರತ ಕ್ರಿಕೆಟ್ ತಂಡದ ಮಾಜಿ ಯಶಸ್ವಿ ನಾಯಕ ಸೌರವ್ ಗಂಗೂಲಿ ಮುಂದಿನ ಅವಧಿಗೆ ಬಿಸಿಸಿಐ ಅಧ್ಯಕ್ಷರಾಗಿ ಆಯ್ಕೆ ಮಾಡಲು ನಿರ್ಧರಿಸಲಾಗಿದೆ ಎನ್ನಲಾಗಿದೆ.

ಸುಪ್ರೀಂ ಕೋರ್ಟ್ ನೇಮಿತಿ ಆಡಳಿತಾತ್ಮಕ ಸಮಿತಿ ಅಕ್ಟೋಬರ್ 23ರಂದು ಬಿಸಿಸಿಐ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಮಾಡಲಿದ್ದು, ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷ ಹಾಗೂ ಕರ್ನಾಟಕದ ಬ್ರಿಜೇಶ್ ಪಟೇಲ್ ಐಪಿಎಲ್ ಮುಖ್ಯಸ್ಥರಾಗಿ ಆಯ್ಕೆಯಾಗುವುದು ಖಚಿತವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com