ಸದ್ಯಕ್ಕೆ ಯಾವುದೇ ರಾಜಕೀಯ ಬೆಳವಣಿಗೆ ಇಲ್ಲ: ಬಿಜೆಪಿ ಸೇರ್ಪಡೆ ವದಂತಿ ಅಲ್ಲಗಳೆದ ಗಂಗೂಲಿ

ಬಿಸಿಸಿಐ ಅಧ್ಯಕ್ಷರಾಗಿ ಬಹುತೇಕ ಚುನಾಯಿತರಾಗಿರುವ ಸೌರವ್ ಗಂಗೂಲಿ ಬಿಜೆಪಿ ಸೇರಲಿದ್ದಾರೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ
ಸೌರವ್ ಗಂಗೂಲಿ
ಸೌರವ್ ಗಂಗೂಲಿ

ಕೊಲ್ಕತ್ತಾ: ಬಿಸಿಸಿಐ ಅಧ್ಯಕ್ಷರಾಗಿ ಬಹುತೇಕ ಚುನಾಯಿತರಾಗಿರುವ ಸೌರವ್ ಗಂಗೂಲಿ ಬಿಜೆಪಿ ಸೇರಲಿದ್ದಾರೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.ಸದ್ಯಕ್ಕೆ ಅಂತಹ ಯಾವುದೇ ರಾಜಕೀಯ ಬೆಳವಣಿಗೆ ಆಗಿಲ್ಲ. ಇತ್ತೀಚಿಗೆ ನಡೆದ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ರಾಜಕೀಯ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ ಎಂದು ಸ್ಪಷ್ಪಪಡಿಸಿದ್ದಾರೆ.

ಶನಿವಾರ ಅಮಿತ್ ಶಾ ಗಂಗೂಲಿ ಭೇಟಿಯಾದ ಬಳಿಕ ಮಾಜಿ ಟೀಂ ಇಂಡಿಯಾ ನಾಯಕ ಸೌರವ್ ಗಂಗೂಲಿ 2021ರ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂಬಂತಹ ಊಹಾಪೋಹಗಳು ಎದ್ದಿದ್ದವು.

ಬಂಗಾಳ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾಗಿರುವ ಗಂಗೂಲಿ, ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಅವರೊಬ್ಬರೇ ಕಣದಲ್ಲಿರುವುದರಿಂದ ಬಹುತೇಕ ಅವರೇ ಅಧ್ಯಕ್ಷರಾಗಿ ಆಯ್ಕೆಯಾಗಲಿದ್ದಾರೆ . ಆಕ್ಟೋಬರ್ 23 ರಂದು ಬಿಸಿಸಿಐ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಮಾಡಲಿದ್ದು, ಸೌರವ್ ಗಂಗೂಲಿ ಅಧಿಕೃತವಾಗಿ ಬಿಸಿಸಿಐ ಅಧ್ಯಕ್ಷರಾಗಿ ಕಾರ್ಯಾರಂಭ ಮಾಡಲಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾದಾಗ ಈ ರೀತಿಯ ರಾಜಕೀಯ ಪ್ರಶ್ನೆಗಳನ್ನು ಕೇಳಿದ್ದೇನೆ. ಮೊದಲ ಬಾರಿಗೆ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದೇನೆ. ನೀವು ಏಕೆ ಆ ರೀತಿಯಲ್ಲಿ ಅರ್ಥೈಹಿಸಿಕೊಳ್ಳುತ್ತೀರಿ, ಅಲ್ಲಿ ಯಾವುದೇ ರಾಜಕೀಯ ಬೆಳವಣಿಗೆ ಆಗಿಲ್ಲ ಎಂದು ಸೌರವ್ ಗಂಗೂಲಿ ಹೇಳಿದ್ದಾರೆ.

ಸೌರವ್ ಗಂಗೂಲಿ ಬಿಜೆಪಿ ಸೇರ್ಪಡೆಯಾದರೆ ಪಕ್ಷಕ್ಕೆ ಒಳಿತಾಗಲಿದೆ ಎಂದು ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಸೋಮವಾರ ಹೇಳಿಕೆ ನೀಡಿದ್ದರು. ಆದರೆ, ಸೌರವ್ ಬಿಸಿಸಿಐ ಅಧ್ಯಕ್ಷರಾಗುವುದು ಖಚಿತವಾಗುತ್ತಿದ್ದಂತೆ ಪಶ್ಚಿಮ ಬಂಗಾಳದಲ್ಲಿ ಪಕ್ಷ ಬೇಧ ಮರೆತು ಎಲ್ಲರೂ ಅಭಿನಂದಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com