ಭಾರತ - ಪಾಕ್ ಕ್ರಿಕೆಟ್ ಸಂಬಂಧ: ನೀವು ಮೋದಿಜೀನ ಕೇಳಿ ಎಂದ ಸೌರವ್ ಗಂಗೂಲಿ

ಭಾರತ - ಪಾಕಿಸ್ತಾನ ನಡುವಿನ ಕ್ರಿಕೆಟ್ ಸಂಬಂಧದ ಬಗ್ಗೆ ಪ್ರತಿಕ್ರಿಯಿಸಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲು ಸಿದ್ದರಾಗಿರುವ ಟೀಂ ಇಂಡಿಯಾ ಮಾಜಿ ನಾಯಕ ಸೌರವ್
ಸೌರವ್ ಗಂಗೂಲಿ
ಸೌರವ್ ಗಂಗೂಲಿ

ಮುಂಬೈ: ಭಾರತ - ಪಾಕಿಸ್ತಾನ ನಡುವಿನ ಕ್ರಿಕೆಟ್ ಸಂಬಂಧದ ಬಗ್ಗೆ ಪ್ರತಿಕ್ರಿಯಿಸಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲು ಸಿದ್ದರಾಗಿರುವ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಅವರು, ಈ ಕುರಿತು ಉಭಯ ದೇಶಗಳ ಪ್ರಧಾನಿಗಳು ನಿರ್ಧಾರ ತೆಗೆದುಕೊಳ್ಳಬೇಕು ಎಂದಿದ್ದಾರೆ. 

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಗಂಗೂಲಿ, ಭಾರತ – ಪಾಕಿಸ್ಥಾನ ನಡುವೆ ಕ್ರಿಕೆಟ್ ಸರಣಿ ನಡೆಯಬೇಕೋ ಅಥವಾ ಬೇಡ ಎನ್ನುವುದನ್ನು ನಾವು ನಿರ್ಧಾರ ಮಾಡುವುದಲ್ಲ. ಅದನ್ನು ದೇಶಗಳ ಪ್ರಧಾನ ಮಂತ್ರಿಯವರೇ ನಿರ್ಧರಿಸಬೇಕು. ನೀವು ಈ ಪ್ರಶ್ನೆಯನ್ನು ಮೋದಿ ಮತ್ತು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರ ಬಳಿಯೇ ಕೇಳಬೇಕು ಎಂದರು.

ಉಭಯ ದೇಶಗಳ ನಡುವೆ ಕೊನೆಯದಾಗಿ ದ್ಚಿಪಕ್ಷೀಯ ಸರಣಿ ನಡೆದಿದ್ದು 2012ರಲ್ಲಿ. ನಂತರ ವಿಶ್ವಕಪ್, ಏಷ್ಯಾಕಪ್ ಮತ್ತು ಚಾಂಪಿಯನ್ ಟ್ರೋಫಿಗಳಲ್ಲಿ ಮಾತ್ರ ಉಭಯ ತಂಡಗಳು ಮುಖಾಮುಖಿಯಾಗಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com