ಮುಖ್ಯ ಕೋಚ್ ರವಿ ಶಾಸ್ತ್ರಿ ಮರು ನೇಮಕ ಮಾಡುವ ಅಗತ್ಯ ಇಲ್ಲ: ಸೌರವ್ ಗಂಗೂಲಿ

ಟೀಂ ಇಂಡಿಯಾ ಮುಖ್ಯ ಕೋಚ್ ರವಿ ಶಾಸ್ತ್ರಿ ಅವರನ್ನು ಮರು ನೇಮಕ ಮಾಡುವ ಅಗತ್ಯ ಇಲ್ಲ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲು ಸಿದ್ಧರಾಗಿರುವ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಅವರು ಶುಕ್ರವಾರ ಹೇಳಿದ್ದಾರೆ.
ಸೌರವ್ ಗಂಗೂಲಿ
ಸೌರವ್ ಗಂಗೂಲಿ

ಕೋಲ್ಕತಾ: ಟೀಂ ಇಂಡಿಯಾ ಮುಖ್ಯ ಕೋಚ್ ರವಿ ಶಾಸ್ತ್ರಿ ಅವರನ್ನು ಮರು ನೇಮಕ ಮಾಡುವ ಅಗತ್ಯ ಇಲ್ಲ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲು ಸಿದ್ಧರಾಗಿರುವ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಅವರು ಶುಕ್ರವಾರ ಹೇಳಿದ್ದಾರೆ.

ರವಿಶಾಸ್ತ್ರಿ ಜತೆ ಮಾತುಕತೆ ನಡೆಸಿದ್ದೀರಾ? ಎಂಬ ವರದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಗಂಗೂಲಿ, ಏಕೆ? ರವಿಶಾಸ್ತ್ರಿ ಏನು ಮಾಡಿದ್ದಾರೆ? ಎಂದು ನಗುಮುಖದಿಂದಲೇ ಮರು ಪ್ರಶ್ನಿಸಿದರು.

ಸೌರವ್ ಗಂಗೂಲಿ ಹಾಗೂ ರವಿಶಾಸ್ತ್ರಿ ನಡುವೆ ಬಹಳ ಹಿಂದಿನಿಂದಲೇ ಶೀತಲ ಸಮರ ಏರ್ಪಟ್ಟಿದೆ. ಇದೀಗ ಗಂಗೂಲಿ ಬಿಸಿಸಿಐ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ರವಿಶಾಸ್ತ್ರಿಗೆ ನಡುಕ ಸೃಷ್ಟಿಯಾಗಲು ಕಾರಣವಾಗಿದೆ ಎಂಬ ಟ್ರೋಲ್‌ಗಳು ಹರಿದಾಡಿದ್ದವು.

ಅಕ್ಟೋಬರ್ 23ರಂದು ಬಿಸಿಸಿಐ ನೂತನ ಅಧ್ಯಕ್ಷರಾಗಿ ಗಂಗೂಲಿ ಅವಿರೋಧವಾಗಿ ಆಯ್ಕೆಯಾಗಲಿದ್ದು, ಅಂದೇ ಬಿಸಿಸಿಐ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com