ವಿಶ್ರಾಂತಿ ಬಯಸಿದ ವಿರಾಟ್ ಕೊಹ್ಲಿ: ಬಾಂಗ್ಲಾದೇಶ ವಿರುದ್ಧದ ಟಿ-20 ಸರಣಿಗೆ ಅನುಮಾನ

ಕಳೆದ ಮಾರ್ಚ್‌ನಲ್ಲಿ ನಡೆದಿದ್ದ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಯಿಂದ ಬಿಡುವಿಲ್ಲದೆ ಆಡುತ್ತಿರುವ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮುಂಬರುವ ಬಾಂಗ್ಲಾದೇಶ ವಿರುದ್ಧದ ಟಿ-20 ಸರಣಿಯಿಂದ ವಿಶ್ರಾಂತಿ ಪಡೆಯಲಿದ್ದಾರೆಂದು ಮೂಲಗಳು ಖಚಿತಪಡಿಸಿವೆ.
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ

ನವದೆಹಲಿ: ಕಳೆದ ಮಾರ್ಚ್‌ನಲ್ಲಿ ನಡೆದಿದ್ದ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಯಿಂದ ಬಿಡುವಿಲ್ಲದೆ ಆಡುತ್ತಿರುವ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮುಂಬರುವ ಬಾಂಗ್ಲಾದೇಶ ವಿರುದ್ಧದ ಟಿ-20 ಸರಣಿಯಿಂದ ವಿಶ್ರಾಂತಿ ಪಡೆಯಲಿದ್ದಾರೆಂದು ಮೂಲಗಳು ಖಚಿತಪಡಿಸಿವೆ.

ಕಳೆದ ಜನವರಿಯಲ್ಲಿ ವಿರಾಟ್ ಕೊಹ್ಲಿ  ನ್ಯೂಜಿಲೆಂಡ್ ವಿರುದ್ಧದ ಎರಡು ಪಂದ್ಯಗಳ ಏಕದಿನ ಸರಣಿ ಹಾಗೂ ಟಿ-20 ಸರಣಿ ಆಡದೆ ವಿಶ್ರಾಂತಿ ಪಡೆದಿದ್ದರು. ಆದರೆ, ಇದೀಗ ಎಂಟು ತಿಂಗಳು ಬಿಡುವಿಲ್ಲದೆ ಭಾರತ ತಂಡದ ಸೇವೆಯಲ್ಲಿ ತೊಡಗಿದ್ದಾರೆ. ಹಾಗಾಗಿ, ಈಗ ವಿಶ್ರಾಂತಿ ಬಯಸುತ್ತಿದ್ದಾರೆ. 

‘ಕಳೆದ ಮಾರ್ಚ್‌ನಲ್ಲಿ ನಡೆದಿದ್ದ ಆಸ್ಟ್ರೇಲಿಯಾ ವಿರುದ್ಧದ ಸರಣಿ ಬಳಿಕ, ಐಪಿಎಲ್, ವಿಶ್ವಕಪ್, ವೆಸ್ಟ್‌ ಇಂಡೀಸ್ ಪ್ರವಾಸ ಹಾಗೂ ಪ್ರಸ್ತುತ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್‌ ಸರಣಿಯಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಸತತ ವೇಳಾ ಪಟ್ಟಿಯಿಂದ ಧಣಿದಿರುವ ಅವರು ಬಾಂಗ್ಲಾದೇಶ ವಿರುದ್ಧದ ಟಿ-20 ಸರಣಿಯಿಂದ ವಿಶ್ರಾಂತಿ  ಪಡೆಯಲಿದ್ದಾರೆ.’ ಎಂದು ಮೂಲಗಳು ತಿಳಿಸಿವೆ.

ಅಕ್ಟೋಬರ್ 24 ರಂದು ಬಾಂಗ್ಲಾದೇಶ ವಿರುದ್ಧದ ಟಿ-20 ಸರಣಿಗೆ ಭಾರತ ತಂಡವನ್ನು ಅಂತಿಮ ಗೊಳಿಸಲಾಗುತ್ತಿದೆ. ಐಸಿಸಿ ವಿಶ್ವಕಪ್ ಬಳಿಕ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಮಹೇಂದ್ರ ಸಿಂಗ್ ಧೋನಿಗೆ ಅವಕಾಶದ ಬಗ್ಗೆ ಆಯ್ಕೆದಾರರ ಬಳಿ ಮಾತನಾಡುತ್ತೇನೆ ಎಂದು ಭಾವಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಈ ಹಿಂದೆ ಹೇಳಿದ್ದರು.

ಬಾಂಗ್ಲಾದೇಶ ವಿರುದ್ಧದ ಟಿ-20 ಸರಣಿ ಬಳಿಕ ಎರಡು ಪಂದ್ಯಗಳ ಟೆಸ್ಟ್‌ ಸರಣಿಗೆ ರನ್ ಮಷೀನ್ ಮರಳಲಿದ್ದಾರೆ. ಉದ್ಘಾಟನಾ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನ ಉತ್ತಮ ಹಾದಿಯಲ್ಲಿ ಮುಂದುವರಿಯುತ್ತಿರುವ ಭಾರತ ತಂಡವನ್ನು ಅದೇ ರೀತಿ ಮುನ್ನಡೆಸುವ ದೃಷ್ಠಿಯಲ್ಲಿ ಕೊಹ್ಲಿ ಟೆಸ್ಟ್‌ ಸರಣಿಗೆ ತಂಡಕ್ಕೆ ಮರಳಲಿದ್ದಾರೆ ಎಂದು ಬಿಸಿಸಿಐ ಮೂಲಗಳು ಸ್ಪಷ್ಟಪಡಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com