ಕೆಪಿಎಲ್ ಬೆಟ್ಟಿಂಗ್: ವಿನು ಪ್ರಸಾದ್, ವಿಶ್ವನಾಥನ್ ಬಂಧನ

ಕರ್ನಾಟಕ ಪ್ರೀಮಿಯರ್ ಲೀಗ್ (ಕೆಪಿಎಲ್)ನಬೆಟ್ಟಿಂಗ್ ದಂಧೆಯ ತನಿಖೆಯನ್ನು ತೀವ್ರಗೊಳಿಸಿರುವ ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ಪೊಲೀಸರು ಬೆಂಗಳೂರು ಬ್ಲಾಸ್ಟರ್ ತಂಡದ ಬೌಲಿಂಗ್ ತರಬೇತುದಾರ ವಿನು ಪ್ರಸಾದ್ ಹಾಗೂ ಬ್ಯಾಟ್ಸ್‌ಮನ್ ವಿಶ್ವನಾಥನ್ ಎಂಬವರನ್ನು ಬಂಧಿಸಿದ್ದಾರೆ.
ಕೆಪಿಎಲ್ ಬೆಟ್ಟಿಂಗ್: ವಿನು ಪ್ರಸಾದ್, ವಿಶ್ವನಾಥನ್ ಬಂಧನ

ಬೆಂಗಳೂರು: ಕರ್ನಾಟಕ ಪ್ರೀಮಿಯರ್ ಲೀಗ್ (ಕೆಪಿಎಲ್)ನಬೆಟ್ಟಿಂಗ್ ದಂಧೆಯ ತನಿಖೆಯನ್ನು ತೀವ್ರಗೊಳಿಸಿರುವ ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ಪೊಲೀಸರು ಬೆಂಗಳೂರು ಬ್ಲಾಸ್ಟರ್ ತಂಡದ ಬೌಲಿಂಗ್ ತರಬೇತುದಾರ ವಿನು ಪ್ರಸಾದ್ ಹಾಗೂ ಬ್ಯಾಟ್ಸ್‌ಮನ್ ವಿಶ್ವನಾಥನ್ ಎಂಬವರನ್ನು ಬಂಧಿಸಿದ್ದಾರೆ.

ಕೆಪಿಎಲ್‌ನ ಬೆಟ್ಟಿಂಗ್ ಸಂಬಂಧ ಈಗಾಗಲೇ 7-8 ಮಂದಿಯನ್ನು ಬಂಧಿಸಿರುವ ಸಿಸಿಬಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು, ಇದರಲ್ಲಿ ಭಾಗಿಯಾಗಿರುವ ಕ್ರಿಕೆಟ್ ಆಟಗಾರರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಸಿಬಿಯ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ. 

ಕಳೆದ 2018 ರಲ್ಲಿ ಬೆಂಗಳೂರು ಮತ್ತು ಬೆಳಗಾವಿ ತಂಡದ ನಡುವಣ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ ತಂಡದ ಬ್ಯಾಟ್ಸ್‌ಮನ್ ವಿಶ್ವನಾಥನ್ ನಿಧಾನಗತಿಯಲ್ಲಿ ಬ್ಯಾಟಿಂಗ್ ಮಾಡಿ ಎದುರಾಳಿ ತಂಡಕ್ಕೆ ಅನುಕೂಲ ಮಾಡಿಕೊಟ್ಟಿದ್ದರು. ಇದಕ್ಕಾಗಿ 5 ಲಕ್ಷ ರೂ. ವ್ಯವಹಾರ ನಡೆದಿತ್ತು. ಅದಕ್ಕೆ ಬೌಲಿಂಗ್ ಕೋಚ್ ವಿನು ಪ್ರಸಾದ್ ಸಹಕರಿಸಿರುವುದು ಪತ್ತೆಯಾಗಿದೆ ಎಂದು ಅವರು ತಿಳಿಸಿದ್ದಾರೆ. ಕೆಪಿಎಲ್‌ನ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣದ ತನಿಖೆ ಕೈಗೊಂಡಿರುವ ಸಿಸಿಬಿ ಪೊಲೀಸರು, ಇವರಿಬ್ಬರನ್ನೂ ಬಂಧಿಸಿ, ದಂಧೆಯಲ್ಲಿ ಪಾಲ್ಗೊಂಡಿದ್ದ ಐವರು ಬುಕ್ಕಿಗಳಿಗಾಗಿ ಹುಡುಕಾಟ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com