2ನೇ ಟೆಸ್ಟ್: ವಿಂಡೀಸ್ ವಿರುದ್ಧ ಬುಮ್ರಾ ಹ್ಯಾಟ್ರಿಕ್, ಐತಿಹಾಸಿಕ ಸಾಧನೆ
ಅತಿಥೇಯ ವೆಸ್ಟ್ ಇಂಡೀಸ್ ವಿರುದ್ಧದ 2ನೇ ಪಂದ್ಯದಲ್ಲೂ ಭಾರತದ ವೇಗಿ ಜಸ್ ಪ್ರೀತ್ ಬುಮ್ರಾ ಪಾರಮ್ಯ ಮೆರೆದಿದ್ದು, ಹ್ಯಾಟ್ರಿಕ್ ವಿಕೆಟ್ ಸಾಧನೆ ಮೂಲಕ ಐತಿಹಾಸಿಕ ದಾಖಲೆ ನಿರ್ಮಾಣ ಮಾಡಿದ್ದಾರೆ.
Published: 01st September 2019 08:59 AM | Last Updated: 01st September 2019 08:59 AM | A+A A-

ಜಸ್ ಪ್ರೀತ್ ಬುಮ್ರಾ ಹ್ಯಾಟ್ರಿಕ್
ಜಮೈಕಾ: ಅತಿಥೇಯ ವೆಸ್ಟ್ ಇಂಡೀಸ್ ವಿರುದ್ಧದ 2ನೇ ಪಂದ್ಯದಲ್ಲೂ ಭಾರತದ ವೇಗಿ ಜಸ್ ಪ್ರೀತ್ ಬುಮ್ರಾ ಪಾರಮ್ಯ ಮೆರೆದಿದ್ದು, ಹ್ಯಾಟ್ರಿಕ್ ವಿಕೆಟ್ ಸಾಧನೆ ಮೂಲಕ ಐತಿಹಾಸಿಕ ದಾಖಲೆ ನಿರ್ಮಾಣ ಮಾಡಿದ್ದಾರೆ.
ಜಮೈಕಾದಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದಲ್ಲಿ ಜಸ್ ಪ್ರೀತ್ ಬುಮ್ರಾ ಹ್ಯಾಟ್ರಿಕ್ ವಿಕೆಟ್ ಸಾಧನೆ ಮಾಡಿದ್ದು, ಹ್ಯಾಟ್ರಿಕ್ ಸಾಧನೆ ಸೇರಿದಂತೆ ಆರು ವಿಕೆಟುಗಳನ್ನು ಕಬಳಿಸಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಭಾರತದ ಮೂರನೇ ಬೌಲರ್ ಎಂಬ ಹಿರಿಮೆಗೆ ಬುಮ್ರಾ ಪಾತ್ರವಾಗಿದ್ದಾರೆ. ಅಲ್ಲದೆ ಈ ಮೂಲಕ ಹರ್ಭಜನ್ ಸಿಂಗ್ ಹಾಗೂ ಇರ್ಫಾನ್ ಪಠಾಣ್ ಅವರನ್ನು ಒಳಗೊಂಡಿರುವ ಎಲೈಟ್ ಪಟ್ಟಿಗೆ ಸೇರಿದ್ದಾರೆ.
ಇದು ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಬುಮ್ರಾ ಅವರ ಚೊಚ್ಚಲ ಹ್ಯಾಟ್ರಿಕ್ ಸಾಧನೆಯಾಗಿದ್ದು, ಬುಮ್ರಾ ಹ್ಯಾಟ್ರಿಕ್ ಗೆ ಡ್ಯಾರೆನ್ ಬ್ರಾವೋ, ಶಮರ್ ಬ್ರೂಕ್ಸ್ ಹಾಗೂ ರೋಸ್ಟನ್ ಚೇಸ್ ಬಲಿಯಾದರು.
ಮೊದಲ ಟೆಸ್ಟ್ ಪಂದ್ಯದಲ್ಲೂ ಬುಮ್ರಾ ಐದು ವಿಕೆಟ್ ಪಡೆದಿದ್ದರು. ಇದೀಗ ದ್ವಿತೀಯ ಟೆಸ್ಟ್‌ನಲ್ಲೂ 16 ರನ್ನಿಗೆ ಆರು ವಿಕೆಟ್ ಪಡೆಯುವ ಮೂಲಕ ಗಮನ ಸೆಳೆದಿದ್ದಾರೆ.