ಮೊಹಮ್ಮದ್ ಶಮಿಗೆ ಸಂಕಷ್ಟ: ಬಂಧನ ವಾರೆಂಟ್ ಜಾರಿ ಮಾಡಿದ ಕೋರ್ಟ್

ಟೀಂ ಇಂಡಿಯಾದ ಸ್ಟಾರ್ ವೇಗಿ ಮೊಹಮ್ಮದ್ ಶಮಿಗೆ ಸಂಕಷ್ಟ ಎದುರಾಗಿದ್ದು ಸದ್ಯ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಆಡುತ್ತಿರುವ ಶಮಿಗೆ ಕೋರ್ಟ್ ಬಂಧನದ ವಾರೆಂಟ್ ಜಾರಿ ಮಾಡಿದೆ.

Published: 02nd September 2019 08:02 PM  |   Last Updated: 02nd September 2019 08:02 PM   |  A+A-


Mohammed Shami

ಮೊಹಮ್ಮದ್ ಶಮಿ

Posted By : Vishwanath S
Source : Online Desk

ನವದೆಹಲಿ: ಟೀಂ ಇಂಡಿಯಾದ ಸ್ಟಾರ್ ವೇಗಿ ಮೊಹಮ್ಮದ್ ಶಮಿಗೆ ಸಂಕಷ್ಟ ಎದುರಾಗಿದ್ದು ಸದ್ಯ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಆಡುತ್ತಿರುವ ಶಮಿಗೆ ಕೋರ್ಟ್ ಬಂಧನದ ವಾರೆಂಟ್ ಜಾರಿ ಮಾಡಿದೆ.

ಶಮಿ ಪತ್ನಿ ಹಸೀನ್ ಜಹಾನ್ ಈ ಹಿಂದೆ ಪತಿ ವಿರುದ್ಧ ವರದಕ್ಷಿಣೆ ಕಿರುಕುಳ, ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದರು. ಈ ಕೌಟುಂಬಿಕ ದೌರ್ಜನ್ಯ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಅಲಿಪೋರ್ ಕೋರ್ಟ್ ಶಮಿ ವಿರುದ್ಧ ಬಂಧನ ವಾರೆಂಟ್ ಜಾರಿ ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಗೆ ಹಾಜರಾಗದ ಮೊಹಮ್ಮದ್ ಶಮಿ ವಿರುದ್ಧ ಕೋರ್ಟ್ ಇದೀಗ ವಾರೆಂಟ್ ಜಾರಿ ಮಾಡಿದ್ದು 15 ದಿನಗಳ ಒಳಗಾಗಿ ಕೋರ್ಟ್ ಗೆ ಹಾಜರಾಗುವಂತೆ ಸೂಚಿಸಿದೆ. 

ಕೋರ್ಟ್ ಬಂಧನ ವಾರೆಂಟ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಸದ್ಯ ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಶಮಿ ಸರಣಿಯನ್ನು ಮೊಟಕುಗೊಳಿಸಿ ಭಾರತಕ್ಕೆ ಹಿಂತಿರುಗುವ ಸಾಧ್ಯತೆ ಇದೆ.

Stay up to date on all the latest ಕ್ರಿಕೆಟ್ news with The Kannadaprabha App. Download now
facebook twitter whatsapp